Tuesday, Oct 20 2020 | Time 15:07 Hrs(IST)
 • ಕುಟುಂಬದೊಂದಿಗೆ ಯಾವುದೇ ಬಿರುಕು ಮೂಡಿಲ್ಲ: ಸಿಂಧೂ ಸ್ಪಷ್ಟನೆ
 • ಸತತ 3ನೇ ವರ್ಷ ಹಿರಿಯರೊಂದಿಗೆ ಸಾಗುವುದು ಕಷ್ಟಸಾಧ್ಯ : ಪ್ಲೇಮಿಂಗ್
 • ಇಂದು ಸಂಜೆ 6 ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
 • ಮುತ್ತಯ್ಯ ಮುರಳೀಧರನ್ ಮನವಿಗೆ ಸಮ್ಮತಿಸಿದ ತಮಿಳು ನಟ ವಿಜಯ್ ಸೇತುಪತಿ
 • ಚಾಲಕರ ಸುಲಿಗೆ ಮಾಡಲು ಸರ್ಕಾರ ಪೊಲೀಸರಿಗೆ ದಂಡ ಶುಲ್ಕ ವಸೂಲಾತಿಗೆ ಟಾರ್ಗೆಟ್ ನೀಡಿದೆ : ಎಚ್ ಡಿ ಕುಮಾರಸ್ವಾಮಿ
 • ಬೆಸ್ಕಾಂ ಮೂಲಕ ಸರ್ಕಾರದ ಡೆಪಾಜಿಟ್ ದಂಧೆ : ಆಮ್ ಆದ್ಮಿ ಪಕ್ಷದ ಆರೋಪ
 • ಸಂಜೆ 6 ಗಂಟೆಗೆ ದೇಶ ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
 • ಯುವ ಆಟಗಾರರಿಗೆ ಅವಕಾಶ ನೀಡದ ಧೋನಿ ಮೇಲೆ ಶ್ರೀಕಾಂತ್‌ ಗರಂ
 • ರಾಜಸ್ತಾನ್‌ ರಾಯಲ್ಸ್ ನಮಗಿಂತ ಮಿಗಿಲಾದ ಪ್ರದರ್ಶನ ತೋರಿದೆ: ಸ್ಟಿಫೆನ್‌ ಫ್ಲೆಮಿಂಗ್‌
 • ನಾಳೆ ಕೇಂದ್ರ ಸಂಪುಟ ಸಭೆ
 • ಕಮ್ಯುನಿಸ್ಟ್ ಪಕ್ಷ ಮುಖಂಡ, ರೈತ ಪರ ಹೋರಾಟಗಾರ ಮಾರುತಿ ಮಾನ್ಪಡೆ ನಿಧನ
 • ರೈತ ನಾಯಕ ಮಾರುತಿ ಮಾನ್ಪಡೆ ಕೊರೊನಾಗೆ ಬಲಿ
 • ಯಡಿಯೂರಪ್ಪ ಹೆಚ್ಚು ದಿನ ಅಧಿಕಾರದಲ್ಲಿ ಉಳಿಯುವುದಿಲ್ಲ,ಪಕ್ಷದ ಹೈಕಮಾಂಡ್ ಗೂ ಇವರಿಂದ ಸಾಗಾಗಿ ಹೋಗಿದೆ : ಯತ್ನಾಳ ಹೊಸ ಬಾಂಬ್
 • ಪ್ರತಿಯೊಬ್ಬರಿಗೂ ನಿವೇಶನ,ಸೂರು ಕಲ್ಪಿಸುವುದು ಸರ್ಕಾರದ ಗುರಿ: ಮುಖ್ಯಮಂತ್ರಿ ಯಡಿಯೂರಪ್ಪ
 • ಮುನಿರತ್ನ ಮುಂದಿನ ದಿನಗಳಲ್ಲಿ ಮಂತ್ರಿಯಾಗಲಿದ್ದಾರೆ-ಅವರನ್ನು ಗೆಲ್ಲಿಸಿ ನಿಮ್ಮ ಸೇವೆ ಮಾಡುತ್ತಾರೆ : ನಾರಾಯಣಗೌಡ
Karnataka Share

ಅಶೋಕ್ ಗಸ್ತಿ ಅವರಿಗೆ ಬಿಜೆಪಿಯಿಂದ ಶ್ರದ್ಧಾಂಜಲಿ

ಬೆಂಗಳೂರು. ಸೆ 18 [ಯುಎನ್ಐ] ಅಕಾಲಿಕವಾಗಿ ನಿಧನ ಹೊಂದಿದ ರಾಜ್ಯ ಸಭಾ ಸದಸ್ಯರು ಹಾಗೂ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಅಧ್ಯಕ್ಷ ಅಶೋಕ್ ಗಸ್ತಿ ಅವರಿಗೆ ನಗರದ ಬಿಜೆಪಿ ಕಚೇರಿಯಲ್ಲಿ ಭಾವಪೂರ್ವ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್
ಟೆಂಗಿನಕಾಯಿ, ಗಸ್ತಿ ಅವರು ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಅಧ್ಯಕ್ಷರಾಗಿ, ಬಳ್ಳಾರಿ ವಿಭಾಗ ಪ್ರಭಾರಿಗಳು, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸದಸ್ಯರು ಹಾಗೂ ಅನೇಕ ದಶಕಗಳಿಂದ ಸಂಘಟನೆಗಾಗಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡು ರಾಜ್ಯಾದ್ಯಂತ ಎಲ್ಲಾ ಕಾರ್ಯಕರ್ತರಿಗೆ ಪ್ರೇರಣೆ ನೀಡುತ್ತಿದರು. ಅವರ ಅಕಾಲಿಕ ನಿಧನವು ತುಂಬಲಾರದ ನೋವನ್ನುಂಟು ಮಾಡಿದೆ ಎಂದು ದುಖಿಃಸಿದರು.
ಈ ಸಂಧರ್ಭದಲ್ಲಿ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾಣಾ, ಕಾರ್ಯದರ್ಶಿಗಳಾದ ಎಸ್. ಕೇಶವ್ ಪ್ರಸಾದ್, ಜಗದೀಶ್ ಹಿರೇಮನಿ, ಕಾರ್ಯಾಲಯ ಕಾರ್ಯದರ್ಶಿ, ಲೋಕೇಶ್ ಅಂಬೇಕಲ್ಲು ರಾಜ್ಯ ವಕ್ತಾರರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಯುಎನ್ಐ ವಿಎನ್ 1730