Thursday, Jan 21 2021 | Time 03:21 Hrs(IST)
  • ಉಪ ಸಭಾಪತಿ ಚುನಾವಣೆ ನಂತರ ಸಭಾಪತಿ ಸ್ಥಾನಕ್ಕೆ ಕೆ ಪ್ರತಾಪ ಚಂದ್ರ ಶೆಟ್ಟಿ ರಾಜೀನಾಮೆ !?
  • ವಿಧಾನ ಮಂಡಲ ಕಲಾಪ ಅಧಿಸೂಚನೆಗೂ ಮುನ್ನವೇ ಸಭಾಪತಿ ವಿರುದ್ಧ ಅವಿಶ್ವಾಸ ನೋಟೀಸ್ ಸ್ವೀಕರಿಸಿದ ಕಾರ್ಯದರ್ಶಿ
Entertainment Share

ಆಲ್ಬಂ ಹಾಡಿಗೆ ಹೆಜ್ಜೆ ಹಾಕಲಿದ್ದಾರೆ "ಜೊತೆ ಜೊತೆಯಲಿ" ಮೇಘಾ ಶೆಟ್ಟಿ

ಆಲ್ಬಂ ಹಾಡಿಗೆ ಹೆಜ್ಜೆ ಹಾಕಲಿದ್ದಾರೆ
ಆಲ್ಬಂ ಹಾಡಿಗೆ ಹೆಜ್ಜೆ ಹಾಕಲಿದ್ದಾರೆ "ಜೊತೆ ಜೊತೆಯಲಿ" ಮೇಘಾ ಶೆಟ್ಟಿ

ಬೆಂಗಳೂರು, ನ 28 (ಯುಎನ್‍ಐ) ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಜನಪ್ರಿಯತೆ ಪಡೆದು, ಗೋಲ್ಡನ್ ಸ್ಟಾರ್ ಗಣೇಶ್ ಚಿತ್ರವೊಂದಕ್ಕೆ ನಾಯಕಿಯಾಗಿ ಆಯ್ಕೆಯಾಗಿರುವ ನಟಿ ಮೇಘಾ ಶೆಟ್ಟಿ, ಇದೀಗ ಆಲ್ಬಂ ಹಾಡೊಂದಕ್ಕೆ ಹೆಜ್ಜೆ ಹಾಕಲಿದ್ದಾರೆ.

ಮೋನಿಕಾ ಕಲ್ಲೂರಿ ಆರ್ಟ್ಸ್​ ಪ್ರೊಡಕ್ಷನ್​ ಬ್ಯಾನರ್​ನಲ್ಲಿ ಇದೀಗ ಆಲ್ಬಂ ಸಾಂಗ್​ವೊಂದು ಸಿದ್ಧವಾಗುತ್ತಿದೆ. ‘ನೋಡು ಶಿವ..’ ಶೀರ್ಷಿಕೆಯ ಈ ಹಾಡಿಗೆ ಚಂದನ್ ಶೆಟ್ಟಿ ಸಂಗೀತ ನೀಡಿ ಅವರೇ ಹಾಡನ್ನೂ ಹಾಡಿದ್ದಾರೆ. ಸುಮೀತ್ ಎಂ.ಕೆ ಈ ಹಾಡಿಗೆ ಸಾಹಿತ್ಯ ಬರೆದಿದ್ದು, ಪರಿಕಲ್ಪನೆ ಮತ್ತು ನಿರ್ದೇಶನ ಮಾಡುವುದರ ಜತೆಗೆ ಹಾಡಿನಲ್ಲಿಯೂ ಲೀಡ್ ಆಗಿ ಕಾಣಿಸಿಕೊಳ್ಳಲಿದ್ದು, ಅವರೊಡನೆ ಮೇಘಾ ಶೆಟ್ಟಿ ಗ್ಲಾಮರಸ್​​ ಆಗಿ ಹೆಜ್ಜೆ ಹಾಕಲಿದ್ದಾರೆ. ಸ್ಪೇಷಲ್ ಅಪೀಯರೆನ್ಸ್ ಆಗಿ ಚಂದನ್ ಶೆಟ್ಟಿ ಸಹ ಇರಲಿದ್ದಾರೆ.

ಎಎಂಸಿ ಸಿಟಿ ಗ್ರೂಪ್​ ಆಫ್​ ಇನ್ಸಿಟ್ಯೂಷನ್ ಸೇರಿ ಒಟ್ಟು 9 ವಿದ್ಯಾಸಂಸ್ಥೆಗಳನ್ನು ನಡೆಸುತ್ತಿರುವ ಮತ್ತು ಆ ಸಂಸ್ಥೆಗಳ ವೈಸ್ ಪ್ರೆಸೆಡೆಂಟ್ ಆಗಿರುವ ಮೋನಿಕಾ ಕಲ್ಲೂರಿ, ಈ ಆಲ್ಬಂ ಹಾಡಿನ ಮೂಲಕ ಸ್ಯಾಂಡಲ್​ವುಡ್​ಗೆ ಆಗಮಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.



‘ನೋಡು ಶಿವ ಎಂದೇ ಹಾಡು ಶುರುವಾಗಲಿದೆ. ಎಷ್ಟೋ ಜನ ಜೀವನದಲ್ಲಿ ಅಂದುಕೊಂಡಿದ್ದು ಏನೂ ಆಗಿಲ್ಲವಲ್ಲ ಎಂದು ತಮ್ಮನ್ನೇ ತಾವೇ ಶಪಿಸಿಕೊಳ್ಳುತ್ತಿರುತ್ತಾರೆ. ಎಷ್ಟೇ ಶ್ರಮ ಪಟ್ಟರೂ ಅದು ಈಡೇರುವುದಿಲ್ಲ. ಅಂದುಕೊಂಡ ಯಶಸ್ಸು ಸಿಕ್ಕಿರುವುದಿಲ್ಲ. ಈ ಥರದ ಹುಡುಗ ದೇವರ ಹತ್ತಿರ ಹೇಗೆ ಸಂಭಾಷಣೆ ಮಾಡ್ತಾನೆ.. ತನ್ನ ಗೋಳನ್ನು ಹೇಗೆ ಹೇಳಿಕೊಳ್ಳುತ್ತಾನೆ ಎಂಬುದನ್ನು ಫನ್ನಿಯಾಗಿ ಹಾಡಿನಲ್ಲಿ ತೋರಿಸಲಿದ್ದೇವೆ’ ಎಂದು ಈ ಹಾಡಿನ ಬಗ್ಗೆ ಮೋನಿಕಾ ಮಾಹಿತಿ ನೀಡಿದ್ದಾರೆ.

‘ಕನ್ನಡದಲ್ಲಿ ಇಲ್ಲಿಯವರೆಗೂ ಯಾರೂ ಮಾಡದ ಅದ್ಧೂರಿಯಾದ ಹಾಡನ್ನು ನಾವು ಚಿತ್ರೀಕರಿಸಲಿದ್ದೇವೆ. ಆಲ್ಬಂ ಹಾಡಿನ ವಿಚಾರದಲ್ಲಿ ಕನ್ನಡದಲ್ಲಿ ಈ ಹಿಂದೆಂದೂ ಆಗದ ಒಂದು ಹೊಸತನವನ್ನು ಈ ಹಾಡಿನಲ್ಲಿ ತೋರಿಸಲಿದ್ದೇವೆ. ಅದ್ಧೂರಿ ವೆಚ್ಚದಲ್ಲಿ ಸಿದ್ಧವಾಗಲಿರುವ ಈ ಹಾಡು, ಪರಭಾಷಿಕರಿಗೂ ವಿಶೇಷ ಎನಿಸಲಿದೆ. ಸರಿಸುಮಾರು 30ಲಕ್ಷ ಬಜೆಟ್ ನಲ್ಲಿ ಈ ಹಾಡು ಸಿದ್ದವಾಗಲಿದೆ.’ ಎಂಬುದು ಮೋನಿಕಾ ಮಾತು.

ಹಾಡಿನ ಸಾಹಿತ್ಯ ಕೇಳಿ ಇಷ್ಟಪಟ್ಟು ಕೇವಲ ಎರಡೇ ತಾಸಿನಲ್ಲಿ ಚಂದನ್​ ಶೆಟ್ಟಿ ಕಂಪೋಸ್ ಮಾಡಿ, ಧ್ವನಿಯನ್ನೂ ನೀಡಿದ್ದಾರೆ. ಕಳೆದೊಂದು ತಿಂಗಳಿಂದ ಈ ಹಾಡಿನ ತಯಾರಿ ಕೆಲಸ ಶುರುವಾಗಿದ್ದು, 200 ಜನ ಈ ಹಾಡಿಗೆ ಕೆಲಸ ಮಾಡುತ್ತಿದ್ದಾರೆ. 60 ವೃತ್ತಿಪರ ಡಾನ್ಸರ್​ಗಳು ಹೆಜ್ಜೆ ಹಾಕಲಿದ್ದಾರೆ. ಮೂರು ದಿನಗಳಲ್ಲಿ ಎಎಂಸಿ ಕಾಲೇಜು ಕ್ಯಾಂಪಸ್​ನಲ್ಲಿಯೇ ಶೂಟಿಂಗ್​ ಮುಗಿಸಿಕೊಳ್ಳುವ ಪ್ಲಾನ್​ ತಂಡದ್ದಾಗಿದ್ದು, ಮೋಹನ್ ಮಾಸ್ಟರ್ ನೃತ್ಯ ನಿರ್ದೇಶನ ಮಾಡಲಿದ್ದಾರೆ.

ಇನ್ನು ವಿದೇಶದಲ್ಲಿ ಪದವಿ ಮತ್ತು ಸ್ನಾತಕೋತ್ತರ ವಿದ್ಯಾಭ್ಯಾಸ ಮಾಡಿರುವ ಮೋನಿಕಾ, ಮೊದಲಿಂದಲೂ ಕಲೆಯತ್ತ ಆಸಕ್ತಿ. ಜಾಗೃತಿ ಮೂಡಿಸುವ ಕೆಲಸವನ್ನು ಏಕಕಾಲದಲ್ಲಿ ದೊಡ್ಡ ಸಮುದಾಯಕ್ಕೆ ತೋರಿಸುವ ಆಕ್ತಿ ಸಿನಿಮಾ ಕ್ಷೇತ್ರಕ್ಕಿದೆ. ಆ ಒಂದು ಕಾರಣಕ್ಕೆ ಸಿನಿಮಾ ಕ್ಷೇತ್ರವನ್ನು ಆಯ್ದುಕೊಂಡಿದ್ದು, ಮುಂದಿನ ವರ್ಷ ಹೊಸ ಸಿನಿಮಾ ನಿರ್ಮಾಣ ಮಾಡುವ ಬಗ್ಗೆಯೂ ಹೇಳಿಕೊಂಡಿದ್ದಾರೆ. ಡಿಸೆಂಬರ್ ವೇಳೆಗೆ ಆನಂದ್ ಆಡಿಯೋದಲ್ಲಿ ಈ ಹಾಡು ಬಿತ್ತರವಾಗಲಿದೆ.



ಯುಎನ್‍ಐ ಎಸ್‍ಎ 1741

More News

‘ಕುಂಬಳಕಾಯಿ’ ಒಡೆದು ದಾಖಲೆ ಬರೆದ’ ಸಾಲ್ಟ್’

20 Jan 2021 | 12:26 PM

 Sharesee more..
ಗಾಜನೂರು: ಇದು ಡಾ  ರಾಜ್ ಗಾಜನೂರಿನ ಕಥೆಯಲ್ಲ

ಗಾಜನೂರು: ಇದು ಡಾ ರಾಜ್ ಗಾಜನೂರಿನ ಕಥೆಯಲ್ಲ

19 Jan 2021 | 9:25 PM

ಬೆಂಗಳೂರು, ಜ 19 (ಯುಎನ್ಐ) ಗಾಜನೂರು ಹೆಸರಿನಲ್ಲಿ ಚಿತ್ರವೊಂದು ಸಿದ್ಧವಾಗುತ್ತಿದೆ. ಹಾಗೆಂದು ಗಾಜನೂರು ಶೀರ್ಷಿಕೆಯ ಚಿತ್ರಕ್ಕೂ ಅಣ್ಣಾವ್ರ ಹುಟ್ಟೂರು ಗಾಜನೂರಿಗೆ ಯಾವುದೇ ಸಂಬಂಧವಿಲ್ಲ,

 Sharesee more..
ಈ ವಾರ ಪ್ರೇಕ್ಷಕರಿಗೆ ‘ಲಡ್ಡು’

ಈ ವಾರ ಪ್ರೇಕ್ಷಕರಿಗೆ ‘ಲಡ್ಡು’

19 Jan 2021 | 9:22 PM

ಬೆಂಗಳೂರು, ಜ 19 (ಯುಎನ್‍ಐ) ರೊಮ್ಯಾಂಟಿಕ್ ಕಾಮಿಡಿ ಹಾಗೂ ಸಸ್ಪೆನ್ಸ್ ಕಥಾಹಂದರ ಹೊಂದಿರುವ ಚಿತ್ರ ‘ಲಡ್ಡು’ ಈವಾರ ರಾಜ್ಯಾದ್ಯಂತ ತೆರೆಕಾಣುತ್ತಿದೆ.

 Sharesee more..
ಡ್ರಗ್ ಪ್ರಕರಣ: ಆದಿತ್ಯ ಆಳ್ವಾ ಒಂದು ವಾರ

ಡ್ರಗ್ ಪ್ರಕರಣ: ಆದಿತ್ಯ ಆಳ್ವಾ ಒಂದು ವಾರ

19 Jan 2021 | 6:13 PM

ಬೆಂಗಳೂರು, ಜ 19 (ಯುಎನ್ಐ) ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಜಾಲ ಪ್ರಕರಣಕ್ಕೆ ಸಂಬಂಧಿಸಿ, ಆರನೇ ಆರೋಪಿ ಆದಿತ್ಯ ಆಳ್ವಾ ಅವರನ್ನು ಒಂದು ವಾರ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

 Sharesee more..