Saturday, Jul 11 2020 | Time 10:06 Hrs(IST)
  • ಪುಲ್ವಾಮದಲ್ಲಿ ಭದ್ರತಾ ಪಡೆಯಿಂದ ಶೋಧ ಕಾರ್ಯಾಚರಣೆ
  • ಬಾರಮುಲ್ಲಾ ಗಡಿಯಲ್ಲಿ ಒಳನುಸುಳಲು ಯತ್ನಿಸಿದ ಇಬ್ಬರು ಉಗ್ರರ ಹತ್ಯೆ
Health -Lifestyle Share

ಇಂಧನ ಬೆಲೆ ಏರಿಕೆ ವಿರುದ್ಧದ ಅಭಿಯಾನದಲ್ಲಿ ಪಾಲ್ಗೊಳ್ಳಿ: ರಾಹುಲ್ ಗಾಂಧಿ ಕರೆ

ಇಂಧನ ಬೆಲೆ ಏರಿಕೆ ವಿರುದ್ಧದ ಅಭಿಯಾನದಲ್ಲಿ ಪಾಲ್ಗೊಳ್ಳಿ:  ರಾಹುಲ್ ಗಾಂಧಿ ಕರೆ
ಇಂಧನ ಬೆಲೆ ಏರಿಕೆ ವಿರುದ್ಧದ ಅಭಿಯಾನದಲ್ಲಿ ಪಾಲ್ಗೊಳ್ಳಿ: ರಾಹುಲ್ ಗಾಂಧಿ ಕರೆ

ನವದೆಹಲಿ, ಜೂನ್ 29 (ಯುಎನ್‍ಐ) ಕೊರೋನಾ ರಣಕೇಕೆಯ ನಡುವೆ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಮಾತನಾಡಲು ವಿರೋಧ ಪಕ್ಷ ಪ್ರಾರಂಭಿಸಿರುವ ಸೋಷಿಯಲ್ ಮೀಡಿಯಾ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೋಮವಾರ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಗೆ ವಿರುದ್ಧವಾಗಿ ಕಾಂಗ್ರೆಸ್ ದೇಶಾದ್ಯಂತ ಬೃಹತ್ ಪ್ರತಿಭಟನೆಗಳನ್ನು ಆಯೋಜಿಸಿದ್ದು, "ಇಂಧನ ಹೆಚ್ಚಳ ವಿರುದ್ಧ ಮಾತನಾಡಿ" ಅಭಿಯಾನದಲ್ಲಿ ಎಲ್ಲರೂ ಭಾಗವಹಿಸೋಣ ಎಂದು ಹೇಳಿದ್ದಾರೆ.

ಕೋವಿಡ್ ಬಿಕ್ಕಟ್ಟಿನಿಂದ ಸೃಷ್ಟಿಯಾಗಿರುವ ಪರಿಸ್ಥಿತಿಯನ್ನು ಎದುರಿಸುತ್ತಿರುವ ಜನಸಾಮಾನ್ಯರನ್ನು ಎನ್‌ಡಿಎ ಸರ್ಕಾರ ನಿರ್ಲಕ್ಷಿಸಿದೆ ಎಂದು ಆರೋಪಿಸಿರುವ ವಿಡಿಯೋವೊಂದನ್ನು ರಾಹುಲ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಆದಾಗ್ಯೂ, ಕಳೆದ 21 ದಿನಗಳಿಂದ ಸರ್ಕಾರ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸುತ್ತಿದೆ ಎಂದು ವಿಡಿಯೋದಲ್ಲಿ ಹೇಳಲಾಗಿದೆ.

ಕಾಂಗ್ರೆಸ್ ನಾಯಕರ ಸಾಮೂಹಿಕ ಪ್ರತಿಭಟನೆಯಲ್ಲದೆ, ಕಾಂಗ್ರೆಸ್ ನೇತೃತ್ವದ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಇತರ ಪದಾಧಿಕಾರಿಗಳು ಈ ವಿಷಯದ ಬಗ್ಗೆ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್ಲೋಡ್ ಮಾಡುತ್ತಿದ್ದಾರೆ.

ಯುಎನ್‍ಐ ಎಸ್‍ಎ ವಿಎನ್ 1351