Saturday, Dec 5 2020 | Time 22:34 Hrs(IST)
 • ಬರೇವಿ ಚಂಡಮಾರುತ ; ಏಳು ಮಂದಿ ಸಾವು
 • ರೈತರು ಮತ್ತು ಕೇಂದ್ರ ನಡುವಿನ 5ನೇ ಸುತ್ತಿನ ಮಾತುಕತೆ ಅಪೂರ್ಣ: ಡಿ 6 ರಂದು ಮತ್ತೆ ಚರ್ಚೆ
 • ಕೃಷಿ ಸಚಿವ ತೋಮರ್ ಮನವಿ ತಿರಸ್ಕರಿಸಿದ ರೈತ ಪ್ರತಿನಿಧಿಗಳು
 • ಸಕಾಲದಲ್ಲಿ ಸೇವೆ ಒದಗಿಸಲು ಎಸ್ ಆರ್ ವಿಶ್ವನಾಥ್ ಸೂಚನೆ
 • ಬಿಡಿಎ ಭ್ರಷ್ಟ ಅಧಿಕಾರಿಗಳಿಗೆ ತಕ್ಕ ಶಾಸ್ತಿ: ಎಸ್ ಆರ್ ವಿಶ್ವನಾಥ್
 • ಡಿಸೆಂಬರ್ 10 ಹೊಸ ಸಂಸತ್ ಭವನ ನಿರ್ಮಾಣಕ್ಕೆ ಶಿಲಾನ್ಯಾಸ
 • ಶಾಸಕ ಸಿದ್ದು ಸವದಿ ಸೇರಿದಂತೆ ದೌರ್ಜನ್ಯ ನಡೆಸಿದವರನ್ನು ಬಂಧಿಸಲು ಡಿ ಕೆ ಶಿವಕುಮಾರ್ ಆಗ್ರಹ
 • ಸುವರ್ಣ ಸೌಧ ಕಟ್ಟಿದ್ದು ಯಾಕೆ? ಬಿಜೆಪಿಗೆ ಜನರ ಬಗ್ಗೆ ಕಾಳಜಿ ಇಲ್ಲ: ಡಿ ಕೆ ಶಿವಕುಮಾರ್
 • ಆಯೋಧ್ಯೆಯಲ್ಲಿ ರಾಮಾಯಣ ಕ್ರೂಸ್ ಕೇಂದ್ರ ಪರಿಶೀಲನೆ
 • ಅಮೆರಿಕದಲ್ಲಿ ಒಂದೇ ದಿನ ಅತಿ ಹೆಚ್ಚು 2,27,000 ಕೋವಿಡ್‍-19 ಪ್ರಕರಣಗಳು ವರದಿ
 • ಹೊಸ ಕೃಷಿ ಸುಧಾರಣಾ ಕಾನೂನುಗಳ ಬಗ್ಗೆ ರಾಷ್ಟ್ರವ್ಯಾಪಿ ಚರ್ಚೆಗೆ ಚಂದ್ರಬಾಬು ನಾಯ್ಡು ಒತ್ತಾಯ
 • ಮೊದಲ ಹಂತದ ಗ್ರಾಮ ಪಂಚಾಯತ್ ಚುನಾವಣೆ; ಸೋಮವಾರದಿಂದ ನಾಮಪತ್ರ ಸಲ್ಲಿಕೆ ಆರಂಭ
 • ರಾಜ್ಯದ ಸಮಗ್ರ ಅಭಿವೃದ್ಧಿಗೆ ಬಿಜೆಪಿ ಸರಕಾರ ಬದ್ಧ; ಕಾರ್ಯಕಾರಿಣಿ ಸಭೆಯಲ್ಲಿ ಮುಖ್ಯಮಂತ್ರಿ ಭರವಸೆ
 • ಶೀಘ್ರವೇ ಗೋಹತ್ಯೆ ನಿಷೇಧ, ಲವ್ ಜಿಹಾದ್ ತಡೆಗೆ ಕಾಯ್ದೆ; ನಳಿನ್‌ ಕುಮಾರ್ ಕಟೀಲ್
 • ಕುಮಾರಸ್ವಾಮಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಮೊದಲೇ ಯೋಚಿಸಬೇಕಿತ್ತು; ಅಶ್ವತ್ಥ ನಾರಾಯಣ್
Karnataka Share

ಎದುರಾಳಿ ನಮ್ಮ ಸರಿ ಸಮನಾಗಿದ್ದರಷ್ಟೇ ಯುದ್ಧ ಮಾಡಬಹುದು; ಡಿ.ಕೆ.ಶಿವಕುಮಾರ್

ಬೆಂಗಳೂರು, ಅ.22 (ಯುಎನ್ಐ) ಎದುರಾಳಿ ನಮ್ಮ ಸರಿ ಸಮನಾಗಿದ್ದರೆ ಯುದ್ಧ ಮಾಡಬಹುದು. ನಮ್ಮ ಸರಿಸಮನಾಗಿ ಇಲ್ಲ ಎಂದರೆ ಯುದ್ಧ ಮಾಡಲು ಆಗಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಜಾತ್ಯತೀತ ಜನತಾದಳದ ಕುಂದಗೋಳ ಮಾಜಿ ಶಾಸಕ ಮಲ್ಲಿಕಾರ್ಜುನ ಎಸ್. ಅಕ್ಕಿ ಹಾಗೂ ಅವರ ಬೆಂಬಲಿಗರನ್ನು ಡಿ.ಕೆ ಶಿವಕುಮಾರ್ ಅವರು ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಪಕ್ಷದ ಶಾಲು ಹೊದಿಸಿ, ಧ್ವಜ ನೀಡಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು.
ಬಳಿಕ ಮಾತನಾಡಿದ ಅವರು , ರಾಜರಾಜೇಶ್ವರಿ ನಗರ ಹಾಗೂ ಶಿರಾದಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತಗಳೊಂದಿಗೆ ಗೆಲುವು ಸಾಧಿಸಲಿದೆ. ಆರ್ ಆರ್ ನಗರದಲ್ಲಿ ಮಾರಾಮಾರಿ ರಾಜಕಾರಣ ನಡೆಯುತ್ತಿದೆ. ಹೆಣಗಳು ಬೀಳುತ್ತವೆ ಹೀಗಾಗಿ ಪ್ಯಾರಾ ಮಿಲಿಟರಿ ರಕ್ಷಣೆ ನೀಡಬೇಕು ಎಂದು ಪತ್ರ ಬರೆಯುವುದಾಗಿ ಮಾಜಿ ಶಾಸಕರು ಹೇಳಿಕೆ ನೀಡಿದ್ದಾರೆ. ಅವರು ಮುಂಚೆಯೇ ಈ ಪತ್ರ ಬರೆಯಬೇಕಿತ್ತು. ಈಗ ತಡವಾಗಿದೆ. ಆ ಪತ್ರವನ್ನು ಮುಖ್ಯಮಂತ್ರಿಗಳಿಂದಲೋ ಅಥವಾ ಪಕ್ಷದ ಅಧ್ಯಕ್ಷರಿಂದಲೋ ಬರೆಸಿದ್ದಾರೆ ಉತ್ತಮವಾಗಿರುತ್ತಿತ್ತು ಎಂದು ವ್ಯಂಗ್ಯವಾಡಿದ್ದಾರೆ.
ಮಾರಾಮಾರಿ ರಾಜಕಾರಣ ಮಾಡುವಂತಹ ಸಂಸ್ಕೃತಿ ಇರುವವರನ್ನು ನಾವು ಬೆಳೆಸಿದೆವಲ್ಲ ಏನು ಮಾಡುವುದು? ಈಗ ಪಶ್ಚಾತ್ತಾಪ ಪಡಬೇಕಾಗಿದೆ. ನಾನು ಯಾರಿಗೂ ಗುರುಗಳಲ್ಲ. ಎಲ್ಲರಿಗೂ ಶಿಷ್ಯರಾಗಿ ಇರುತ್ತೇನೆ. ನಿಮಗೂ ಶಿಷ್ಯನೇ ಎಂದು ಕುಟುಕಿದರು.
ನಾವು ಹತಾಶರಾಗಿದ್ದೇವೆ, ನಮ್ಮನ್ನು ಬೆಂಗಳೂರಿನ ಜನ ಪ್ಯಾಕ್ ಮಾಡಿ ಕಳಿಸುತ್ತಾರೆ ಎಂದು ಹೇಳಿದವರಿಗೆ ಒಳ್ಳೆಯದಾಗಲಿ. ಕಾನೂನು ಪಾಲನೆ ಮಾಡಿ, ಜನರ ರಕ್ಷಣೆ ಮಾಡಿ, ಆ ಕ್ಷೇತ್ರವನ್ನು ಮತ್ತೆ ಕಾಂಗ್ರೆಸ್ ಕ್ಷೇತ್ರವನ್ನಾಗಿ ಮಾಡಲು ಮಾತ್ರ ನಾವು ಪ್ರಯತ್ನಿಸುತ್ತೇವೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
ಇದೊಂದು ಕೇವಲ ಆಶ್ವಾಸನೆ ಸರ್ಕಾರ: ಈ ಸರ್ಕಾರ ಕೇವಲ ಘೋಷಣೆ, ಆಶ್ವಾಸನೆಗಳನ್ನು ನೀಡುತ್ತಿದೆಯೇ ಹೊರತು, ಅವುಗಳನ್ನು ಈಡೇರಿಸುತ್ತಿಲ್ಲ. ಕಳೆದ ವರ್ಷ ಪ್ರವಾಹ ಬಂದಾಗ 35 ಸಾವಿರ ಕೋಟಿ ನಷ್ಟವಾಗಿದೆ ಎಂದಿದ್ದರು. ಕೇಂದ್ರ ಸರ್ಕಾರ ಕೇವಲ 1800 ಕೋಟಿ ಕೊಟ್ಟಿತ್ತು. ಮುಖ್ಯಮಂತ್ರಿಗಳು ಮನೆ ಕಳೆದುಕೊಂಡವರಿಗೆ 5 ಲಕ್ಷ ಹಾಗೂ ಬಾಡಿಗೆ ಕಟ್ಟಲು 5 ಸಾವಿರ ಕೊಡುವುದಾಗಿ ಹೇಳಿದ್ದರು. ಇನ್ನು ಅದು ಜನರ ಕೈಗೆ ಸೇರಿಲ್ಲ. ಇನ್ನು ಈ ವರ್ಷದ ವೈಮಾನಿಕ ಸಮೀಕ್ಷೆ ಮಾಡಿದ್ದು, ಪರಿಹಾರ ಕೊಡೋದು ಯಾವಾಗ ಎಂದು ಡಿ.ಕೆ.ಶಿವಕುಮಾರ್ ಪ್ರಶ್ನಿಸಿದರು.
ಕಂದಾಯ ಸಚಿವರು ಸರ್ಕಾರದ ಬಳಿ ಹಣದ ಕೊರತೆ ಇಲ್ಲ ಎಂದು ಹೇಳಿದ್ದಾರೆ. ಕೊರೋನಾ ಸಮಯದಲ್ಲಿ ನಾವು ಆಗ್ರಹ ಮಾಡಿದ ಮೇಲೆ ಒಂದಷ್ಟು ಜನಕ್ಕೆ ಪರಿಹಾರ ನೀಡುವುದಾಗಿ ಘೋಷಿಸಿದರು. ಇದುವರೆಗೂ ಆ ಪರಿಹಾರ ರೈತರಿಗೆ, ಕಾರ್ಮಿಕರಿಗೆ, ಶ್ರಮಿಕರಿಗೆ ತಲುಪಿಲ್ಲ. ಈ ಸರ್ಕಾರ ಆಶ್ವಾಸನೆ ಘೋಷಣೆ ಮಾಡುತ್ತದೆಯೇ ಹೊರತು ಅದನ್ನು ಸಾಕಾರಗೊಳಿಸುವುದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷರು ಟೀಕಾಪ್ರಹಾರ ನಡೆಸಿದರು.
ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಹೇಳಿಕೆ ವಿಚಾರವಾಗಿ ನಮ್ಮ ಶಾಸಕಾಂಗ ಪಕ್ಷದ ನಾಯಕರು ಪ್ರತಿಕ್ರಿಯೆ ನೀಡುತ್ತಾರೆ. ಅವರಿಗೆ ಸೋನಿಯಾ ಗಾಂಧಿ ಅವರು ಹೇಳಿರಬಹುದೇನೋ ಎಂದು ಜಮೀರ್ ಅಹ್ಮದ್ ಹೇಳಿಕೆ ಬಗ್ಗೆ ಕೇಳಿದ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್, ಜೆಡಿಎಸ್ ತೊರೆದು ಪಕ್ಷಕ್ಕೆ ಸೇರ್ಪಡೆಯಾದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ವೀರನಗೌಡ ಹಿರೇಗೌಡ, ಜಿಲ್ಲಾ ರೈತ ಘಟಕದ ಕಾರ್ಯದರ್ಶಿ ಕೃಷ್ಣಗೌಡ ಹನಮಗೌಡ್ರ, ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಯುವ ಘಟಕ ಅಧ್ಯಕ್ಷ ನಾರಾಯಣ ಕೆ.ಹೂಗಾರ್, ಜಿಲ್ಲಾ ಯುವ ಘಟಕ ಕಾರ್ಯದರ್ಶಿ ಕುಮಾರಸ್ವಾಮಿ ಹಿರೇಮಠ ಸೇರಿದಂತೆ ಇತರ ಮುಖಂಡರು ಇದ್ದರು.
ಯುಎನ್ಐ ಎಸ್ ಎಂಆರ್ ಯುಎಲ್ ಎಎಚ್ 1405