Tuesday, Jun 25 2019 | Time 14:12 Hrs(IST)
 • ಜಿಂದಾಲ್ ಗೆ ಭೂಮಿ: ಲ್ಯಾಂಡ್ ಆಡಿಟ್ ಮಾಡಿಸಲು ಪಾಟೀಲ್ ಆಗ್ರಹ
 • ಕಳೆದ ಐದು ವರ್ಷದಲ್ಲಿ ದೇಶ ತುರ್ತು ಪರಿಸ್ಥಿತಿಯಲ್ಲಿ ಸಾಗಿದೆ: ಮಮತಾ ಬ್ಯಾನರ್ಜಿ
 • ಲೋಕಸಭಾ ಸದಸ್ಯರಾಗಿ ನುಸ್ರತ್ ಜಹಾನ್, ಮಿಮಿ ಚಕ್ರವರ್ತಿ ಪ್ರಮಾಣ ವಚನ
 • ರೈತರಿಗೆ ಬೆಳೆ ವಿಮೆ ಆಯ್ಕೆಯಾಗಬೇಕೋ, ಕಡ್ಡಾಯವಾಗಬೇಕೋ? ಸಲಹೆಗಾಗಿ ರಾಜ್ಯಗಳಿಗೆ ಕೇಂದ್ರ ಮನವಿ
 • ಕಾಂಗ್ರೆಸ್ ಮುಕ್ತ ಭಾರತ ಕನಸು ನನಸಾಗಲಿದೆ: ಯಡಿಯೂರಪ್ಪ
 • ಜಪಾನ್ ನೊಂದಿಗಿನ ಭದ್ರತಾ ಒಪ್ಪಂದದಿಂದ ಹಿಂದೆ ಸರಿಯಲಿದೆಯೇ ಅಮೆರಿಕ?
 • ಕೃಷಿಗಿಂತ ಹೈನುಗಾರಿಕೆಯಲ್ಲಿ ಹೆಚ್ಚು ಸಂಪಾದನೆ; ಕೇಂದ್ರ ಸರ್ಕಾರ
 • ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ವಾಲ್ಮೀಕಿ ಸಮುದಾಯದಿಂದ ಬೃಹತ್ ಪ್ರತಿಭಟನೆ
 • ಭಾರತದ ವಿರುದ್ಧ ಪಾಕ್ ಸೋತ ಬಳಿಕ ಆತ್ಮಹತ್ಯೆ ಮಾಡಿಕೊಳ್ಳಬೇಕೆನಿಸಿತ್ತು !
 • ಕಾರ್ಮಿಕ ಮುಖಂಡ, ಮಾಜಿ ಕೌನ್ಸಿಲರ್‌ ಸತ್ಯನಾರಾಯಣರಾವ್ ನಿಧನ
 • ಪರ್ಷಿಯಾ ಕೊಲ್ಲಿ ಪ್ರದೇಶದಲ್ಲಿ “ಗರಿಷ್ಠ ಸಂಯಮ” ಭದ್ರತಾ ಮಂಡಳಿ ಒತ್ತಾಯ
 • ಪರ್ಷಿಯಾ ಕೊಲ್ಲಿ ಪ್ರದೇಶದಲ್ಲಿ “ಗರಿಷ್ಠ ಸಂಯಮ” ಅಮೆರಿಕಾ ಒತ್ತಾಯ
 • ಗ್ರಾಮ ವಾಸ್ತವ್ಯ ಬೇಡ ಎನ್ನುವವರಿಗೆ ಆಡಳಿತದ ಪರಿಕಲ್ಪನೆಯೇ ಇಲ್ಲ: ವಿಶ್ವನಾಥ್ ಟೀಕೆ
 • ಕಿವೀಸ್‌ ವಿರುದ್ಧ ಪಾಕಿಸ್ತಾನಕ್ಕೆ ಮತ್ತೊಂದು ಅಗ್ನಿಪರೀಕ್ಷೆ
 • ಕೋಲ್ಕತ್ತಾದಲ್ಲಿ ನಾಲ್ವರು ಜೆಎಂಬಿ ಭಯೋತ್ಪಾದಕರ ಬಂಧನ
business economy Share

ಎನ್ ಡಿ ಎ ವಿಜಯದ ಮುನ್ನಡೆ : 40 ಸಾವಿರ ಗಡಿ ದಾಟಿದ ಸೆನ್ಸೆಕ್ಸ್ ; 12 ಸಾವಿರ ಗಡಿ ದಾಟಿದ ನಿಫ್ಟಿ

ಎನ್ ಡಿ ಎ ವಿಜಯದ ಮುನ್ನಡೆ : 40 ಸಾವಿರ ಗಡಿ ದಾಟಿದ ಸೆನ್ಸೆಕ್ಸ್ ; 12 ಸಾವಿರ ಗಡಿ ದಾಟಿದ ನಿಫ್ಟಿ
ಎನ್ ಡಿ ಎ ವಿಜಯದ ಮುನ್ನಡೆ : 40 ಸಾವಿರ ಗಡಿ ದಾಟಿದ ಸೆನ್ಸೆಕ್ಸ್ ; 12 ಸಾವಿರ ಗಡಿ ದಾಟಿದ ನಿಫ್ಟಿ

ಮುಂಬೈ, ಮೇ 23 (ಯುಎನ್‌ಐ) ಲೋಕಸಭಾ ಚುನಾವಣೆ 2019 ರ ಮತ ಎಣಿಕೆ ಪ್ರಗತಿಯಲ್ಲಿದ್ದು ಎನ್ ಡಿ ಎ ಮುನ್ನಡೆ ಸಾಧಿಸಿದ್ದು ವಿಜಯದತ್ತ ದಾಪುಗಾಲಿಡುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಷೇರು ಮಾರುಕಟ್ಟೆಯಲ್ಲಿ ಏರಿಕೆ ಕಂಡು ಬಂದಿದೆ.ಮುಂಬೈ ಷೇರು ಮಾರುಕಟ್ಟೆ ಸೂಚ್ಯಂಕ ಸೆನ್ಸೆಕ್ಸ್ 40 ಸಾವಿರದ ಗಡಿ ದಾಟಿದ್ದು ರಾಷ್ಟ್ರೀಯ ಷೇರು ಮಾರುಕಟ್ಟೆ ನಿಫ್ಟಿ ಸಹ 12 ಸಾವಿರದ ಗಡಿ ತಲುಪಿದೆ.

ದಿನದ ವಹಿವಾಟು ಆರಂಭವಾಗುತ್ತಿದ್ದಂತೆಯೇ ಸೆನ್ಸೆಕ್ಸ್ 891.16 ಅಂಕ ಏರಿಕೆ ಕಂಡು 40,001.37 ರಲ್ಲಿತ್ತು. ನಿಫ್ಟಿ ಸಹ 267.60 ಅಂಕ ಏರಿಕೆ ಕಂಡು 12,005.50 ಯಲ್ಲಿತ್ತು.

ಆರಂಭಿಕ ವರದಿಗಳ ಅನುಸಾರ ಬಿಜೆಪಿ ಮುಂಚೂಣಿಯಲ್ಲಿದೆ. 542 ಲೋಕಸಭಾ ಕ್ಷೇತ್ರಗಳ ಪೈಕಿ 289 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ 49 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಬಿಜೆಪಿಯ ಮಿತ್ರ ಪಕ್ಷಗಳಾದ ಶಿವಸೇನಾ, ಜನತಾ ದಳ (ಸಂಯುಕ್ತ) ಮತ್ತು ಲೋಕಜನಶಕ್ತಿ ಪಕ್ಷಗಳು ಸಹ ಉತ್ತಮ ಮುನ್ನಡೆ ಕಾಯ್ದುಕೊಂಡಿವೆ.

ಯುಎನ್ಐ ಜಿಎಸ್‌ಆರ್ ಎಎಚ್ 1224

More News