Saturday, Oct 24 2020 | Time 21:10 Hrs(IST)
  • ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕೊರೊನಾ ಪಾಸಿಟಿವ್
  • ದಸರಾ-ಮೆರವಣಿಗೆ: ನಿಗದಿತ ಕಲಾತಂಡಗಳ ನಿಯೋಜನೆ
  • ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಪುತ್ರನಿಗೆ ಇಡಿ ಸಮನ್ಸ್
  • ಜಿಯೋಫೋನ್‌ನಲ್ಲಿ ಹೊಸ ಜಿಯೋ ಕ್ರಿಕೆಟ್ ಆಪ್: ಬಹುಮಾನ ಗೆಲ್ಲಲು ಅವಕಾಶ
  • ರಾಜಕಾಲುವೆ ಒತ್ತುವರಿದಾರರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ; ಆರ್ ಅಶೋಕ
  • ಜಂಬೂಸವಾರಿ 40 ನಿಮಿಷಕ್ಕೆ ಸೀಮಿತ: 300 ಜನರಿಗೆ ಮಾತ್ರ ಪ್ರವೇಶ; ಡಾ ಚಂದ್ರಗುಪ್ತ
  • ಎನ್‌ಸಿಬಿ ಅಧಿಕಾರಿಗಳ ಸೋಗಿನಲ್ಲಿ ಬೆಳ್ಳುಳ್ಳಿಯ ವ್ಯಾಪಾರಿಯ ದರೋಡೆ
  • ಚರ್ಚ್ ಕುಸಿದು 22 ಮಂದಿ ಸಾವು
  • ಉಪ ಚುನಾವಣೆ, ವಿಧಾನ ಪರಿಷತ್ ಚುನಾವಣೆಗಳಲ್ಲಿ ಬಿಜೆಪಿಗೆ ಗೆಲುವು: ಮುಖ್ಯಮಂತ್ರಿ ಯಡಿಯೂರಪ್ಪ ವಿಶ್ವಾಸ
  • ದೇಶಾದ್ಯಂತ ಉಚಿತ ಕೋವಿಡ್‌ ಲಸಿಕೆ ದೊರೆಯಬೇಕು; ಕೇಜ್ರೀವಾಲ್‌
  • ವರುಣ್ ಚಕ್ರವರ್ತಿ ಮಾರಕ ಬೌಲಿಂಗ್ ಗೆ ತತ್ತರಿಸಿದ ಡೆಲ್ಲಿ
  • ಕೆಡುಕಿನ ವಿರುದ್ದ ಒಳಿತು ಸಾಧಿಸಿದ ವಿಜಯದ ಸಂಕೇತ ದಸರಾ- ಉಪರಾಷ್ಟಪತಿ
  • ತ್ರಿವರ್ಣ ಧ್ವಜ; ಮೆಹಬೂಬಾ ಮುಫ್ತಿ ಹೇಳಿಕೆಗೆ ಕಾಂಗ್ರೆಸ್, ಬಿಜೆಪಿ ಆಕ್ರೋಶ
  • ನಾಲ್ಕು ಕೈ, ಕಾಲುಗಳ ಬಾಲಕನಿಗೆ, ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ ಸರ್ಕಾರಿ ಆಸ್ಪತ್ರೆ ವೈದ್ಯರು
  • ಡೆಲ್ಲಿಗೆ 195 ರನ್ ಗುರಿ ನೀಡಿದ ಕೆಕೆಆರ್
Karnataka Share

ಎರಡು ತಲೆ ಹಾವು ಮಾರಾಟಕ್ಕೆ ಯತ್ನ: ಬಂಧನ

ಮಡಿಕೇರಿ, ಸೆ.18 (ಯುಎನ್ಐ) ಎರಡು ತಲೆಯ ಹಾವನ್ನು ಒಂದು ಕೋಟಿ ರೂ.ಗೆ ಮಾರಾಟ ಮಾಡಲು ಯತ್ನಿಸಿದ ಆರೋಪಿಯನ್ನು ಸಿಐಡಿ ಮತ್ತು ಅರಣ್ಯ ಅಧಿಕಾರಿಗಳು ಬಂಧಿಸಿದ್ದಾರೆ.
ಮೈಸೂರು ಜಿಲ್ಲೆ ಶಾಂತಿನಗರದ ನಿವಾಸಿ ಸೈಯದ್ ಮೋಮಿನ್ (23) ಬಂಧಿತ ಆರೋಪಿ. ಈತ ಕೊಡಗು ಜಿಲ್ಲೆಯ ಮಡಿಕೇರಿಯ ಸಿದ್ದಾಪುರದ ಆನಂದಪುರ ಸಾರ್ವಜನಿಕ ಬಸ್ ತಂಗುದಾಣದ ಬಳಿ ಮಾರಾಟಕ್ಕೆ ಯತ್ನಿಸಿದಾಗ ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆಯ ಚೆನ್ನಗಿರಿ ನಲ್ಲೂರಿನಿಂದ 2 ತಲೆಯ ಹಾವನ್ನು ತಂದು 1 ಕೋಟಿ ರೂಗಳಿಗೆ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾಗ ಪೊಲೀಸರ ಬಲೆಗೆ ಬಿದ್ದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಖಚಿತ ಮಾಹಿತಿಯ ಮೇರೆಗೆ ವಿರಾಜಪೇಟೆ ಸಿಐಡಿ ಮತ್ತು ಅರಣ್ಯ ಸಂಚಾರಿ ದಳದ ಸಿಬ್ಬಂದಿಗಳು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು,15 ದಿನಗಳವರೆಗೆ ನ್ಯಾಯಾಂಗ ಬಂಧನಕ್ಕೆ ನ್ಯಾಯಾಲಯ ಆದೇಶ ನೀಡಲಾಗಿದೆ..
ಎರಡು ತಲೆ ಹಾವಿನ ತೂಕ 3.ಕೆಜಿ 5೦೦ಗ್ರಾಂ ಇದ್ದು, ಅದರ ದಪ್ಪ 8 ಇಂಚು ಉದ್ದ 4.2 ಇಂಚು ಇದೆ.
ಕಾರ್ಯಾಚರಣೆಯಲ್ಲಿ ಮಡಿಕೇರಿ ಸಿಐಡಿ ಪೊಲೀಸ್, ಅರಣ್ಯ ಸಂಚಾರಿ ದಳದ ಪಿಎಸ್‌ಐ ಸಿ.ಯುಸವಿ ನೇತೃತ್ವದಲ್ಲಿ ಮಡಿಕೇರಿ ಸಿಐಡಿ ಅರಣ್ಯ ಘಟಕದ ಪೊಲೀಸ್ ಅಧೀಕ್ಷಕರಾದ ಸುರೇಶ್ ಬಾಬು ಮಾರ್ಗದರ್ಶದಲ್ಲಿ ಸಿಬ್ಬಂದಿಗಳಾದ ಕೆ.ಬಿಸೋಮಣ್ಣ, ಟಿ.ಪಿ ಮಂಜುನಾಥ್ ಎಂ.ಬಿ.ಗಣೇಶ್ ಪಿ.ಬಿ ಮೊಣ್ಣಪ್ಪ , ಸಿಎಂ ರೇವಪ್ಪ ಭಾಗವಹಿಸಿದ್ದರು.
ಯುಎನ್ಐ ಎಎಚ್ 1552