Saturday, Feb 29 2020 | Time 15:26 Hrs(IST)
 • ಮಲೇಷಿಯಾ ನೂತನ ಪ್ರಧಾನಿಯಾಗಿ ಮುಹಿದ್ದೀನ್ ಯಾಸಿನ್ ನೇಮಕ
 • ಮಲೇಷಿಯಾದ ನೂತನ ಪ್ರಧಾನಮಂತ್ರಿಯಾಗಿ ಮುಹಿದ್ದೀನ್ ಯಾಸಿನ್ ನೇಮಕ
 • ಭಾರತದ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟ ಟೆನಿಸ್ ಸ್ಟಾರ್ ನೊವಾಕ್ ಜೊಕೊವಿಚ್
 • ದೇಶದ ಜನರಿಗಾಗಿ ನಮ್ಮ ಸರ್ಕಾರ ಶ್ರಮಿಸುತ್ತಿದೆ; ಪ್ರಧಾನಿ ಮೋದಿ
 • ಕಾಂಗ್ರೆಸ್ ಜತೆ ಜೆಡಿಎಸ್ ವಿಲೀನಗೊಳ್ಳಲು ಸಲಹೆ ನೀಡಿದ್ರಾ ಪ್ರಶಾಂತ್ ಕಿಶೋರ್ ?
 • ಅಕಾಲಿಕವಾಗಿ ಸಾವನ್ನಪ್ಪಿದ ನಾಲ್ವರು ಪತ್ರಕರ್ತರಿಗೆ ಮುಖ್ಯಮಂತ್ರಿಗಳಿಂದ ತಲಾ ೫ ಲಕ್ಷ ಪರಿಹಾರ ಘೋಷಣೆ
 • ದುಬೈ ಟೆನಿಸ್‌ ಚಾಂಪಿಯನ್‌ಶಿಪ್ : ಪ್ರಶಸ್ತಿಗಾಗಿ ಜೊಕೊವಿಚ್, ಸಿಟ್ಸಿಪಸ್ ಕಾದಾಟ
 • ಅಪಾರ್ಟ್‌ಮೆಂಟ್ ಗಳಲ್ಲಿ ಶೌರಶಕ್ತಿ‌ ಫಲಕ ಅಳವಡಿಕೆ ಉತ್ತಮ ಪ್ರಯತ್ನ; ಡಾ ಅಶ್ವತ್ಥನಾರಾಯಣ
 • 10ನೇ ಬಾರಿ ವಿರಾಟ್ ಕೊಹ್ಲಿಯನ್ನು ಕೆಡವಿದ ಟಿಮ್ ಸೌಥಿ
 • ಕೊರೊನಾವೈರಸ್ ಆತಂಕ: ಅಮೆರಿಕದಿಂದ ಆಸಿಯಾನ್ ಶೃಂಗಸಭೆ ಮುಂದೂಡಿಕೆ
 • ಕಾಶ್ಮೀರ ಕಣಿವೆಯಲ್ಲಿ ಕರ್ತವ್ಯಕ್ಕೆ ಗೈರುಹಾಜರಾದ 40 ಜನರ ಅಮಾನತ್ತು
 • ರಜನೀಕಾಂತ್ ಜೊತೆ ಭಾರತೀಯ ಹಜ್ ಅಸೋಸಿಯೇಷನ್ ಅಧ್ಯಕ್ಷ ಮಾತುಕತೆ
 • ಪುಲ್ವಾಮಾ ಪ್ರಕರಣ: ಕಾಶ್ಮೀರದಲ್ಲಿ ಎನ್‌ಐಎ ದಾಳಿ ಮುಂದುವರಿಕೆ
 • ಮಹಿಳಾ ಟಿ20 ವಿಶ್ವಕಪ್: ಕೊನೆಯ ಪಂದ್ಯದಲ್ಲೂ ಭಾರತ ವನಿತೆಯರಿಗೆ ಭರ್ಜರಿ ಜಯ
 • ಮೈಸೂರಿನಲ್ಲಿ ಇಬ್ಬರು ಬಾಂಗ್ಲಾ ದೇಶ ಅಕ್ರಮ ವಲಸಿಗರ ಬಂಧನ
Special Share

ಎ.ಆರ್. ರೆಹಮಾನ್ ವಿರುದ್ದ ಜಿಎಸ್ ಟಿ ಆದೇಶಕ್ಕೆ ಮದ್ರಾಸ್ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ

ಎ.ಆರ್. ರೆಹಮಾನ್ ವಿರುದ್ದ  ಜಿಎಸ್ ಟಿ ಆದೇಶಕ್ಕೆ ಮದ್ರಾಸ್ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ
ಎ.ಆರ್. ರೆಹಮಾನ್ ವಿರುದ್ದ ಜಿಎಸ್ ಟಿ ಆದೇಶಕ್ಕೆ ಮದ್ರಾಸ್ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ

ಚೆನ್ನೈ, ಫೆ ೧೩(ಯುಎನ್‌ಐ) ಖ್ಯಾತ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಅವರಿಗೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ), ಕೇಂದ್ರೀಯ ಅಬಕಾರಿ ತೆರಿಗೆ ಇಲಾಖೆಗಳು ಬಾಕಿ ತೆರಿಗೆ ಹಾಗೂ ದಂಡ ಹಣವನ್ನು ತಕ್ಷಣ ಪಾವತಿಸಬೇಕೆಂದು ನೀಡಿದ್ದ ಆದೇಶ ಜಾರಿಗೆ ಮದ್ರಾಸ್ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

ರೆಹಮಾನ್ ಪಾವತಿಸಬೇಕಾದ ಬಾಕಿ ತೆರಿಗೆ ೬.೭೯ ಕೋಟಿ ಹಾಗೂ ದಂಡ ೬.೭೯ ಕೋಟಿ ರೂ ಪಾವತಿಸುವಂತೆ ಜಿಎಸ್ ಟಿ ಹಾಗೂ ಕೇಂದ್ರ ಅಬಕಾರಿ ಇಲಾಖೆಗಳು ಆದೇಶ ಜಾರಿ ಮಾಡಿದ್ದವು.

ರೆಹಮಾನ್ ಅವರ ಆದಾಯಕ್ಕೆ ತಕ್ಕಂತೆ ತೆರಿಗೆ ಪಾವತಿಸಿಲ್ಲ ಎಂದು ಚೆನ್ನೈ ದಕ್ಷಿಣ ವೃತ್ತ ಜಿಎಸ್ ಟಿ ಆಯುಕ್ತ ಕೆ.ಎಂ. ರವಿಚಂದ್ರನ್ ಹೇಳಿದ್ದಾರೆ. ಚಲನಚಿತ್ರಗಳಿಗೆ ಸಂಗೀತ ಸಂಯೋಜನೆಯೊಂದಿಗೆ ದೇಶ ವಿದೇಶಗಳಲ್ಲಿ ನೀಡುವ ಕಾರ್ಯಕ್ರಮಗಳು ಹಾಗೂ ರಾಯಧನದಿಂದ ಭಾರಿ ಪ್ರಮಾಣದ ಆದಾಯವನ್ನು ಗಳಿಸುತ್ತಿದ್ದಾರೆ. ಈ ಎಲ್ಲಾ ಆದಾಯದ ಮೂಲಗಳು ತೆರಿಗೆಗೆ ಒಳಪಟ್ಟಿವೆ. ಆದರೆ ಸಂಗೀತ ನಿರ್ದೇಶಕರು ಮಾತ್ರ ಸೂಕ್ತ ತೆರಿಗೆ ಪಾವತಿಸಿಲ್ಲ ಎಂದು ಅವರು ವಿವರಿಸಿದ್ದಾರೆ.

ರೆಹಮಾನ್ ತಮ್ಮ ರಾಗಗಳ ಮಾಲೀಕರಾಗಿದ್ದರೂ, ನಿರ್ಮಾಪಕರೊಂದಿಗಿನ ಒಪ್ಪಂದ ಪ್ರಕಾರ ಸಂಗೀತಕ್ಕೆ ಸಂಬಂಧಿಸಿದ ಎಲ್ಲ ಹಕ್ಕುಗಳು ನಿರ್ಮಾಪಕರಿಗೆ ಸೇರುತ್ತವೆ. ಹಾಗಾಗಿ ಅವುಗಳು ಸೇವಾ ತೆರಿಗೆ ವ್ಯಾಪ್ತಿಗೆ ಒಳಪಡುವುದಿಲ್ಲ ಎಂದು ರೆಹಮಾನ್ ಹೈಕೋರ್ಟ್ ಮೊರೆ ಹೋಗಿದ್ದರು. ಹಾಗಾಗಿ ಈ ಆದೇಶ ಜಾರಿಗೆ ಮಾರ್ಚ್ ೪ರವರೆಗೆ ತಡೆಯಾಜ್ಞೆ ನೀಡಬೇಕೆಂದು ರಹಮಾನ್ ಮದ್ರಾಸ್ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು, ರಿಟ್ ವಿಚಾರಣೆ ನಡೆಸಿದ ನ್ಯಾಯಾಲಯ ಜಿಎಸ್ ಟಿ ಹಾಗೂ ಕೇಂದ್ರೀಯ ಅಬಕಾರಿ ಇಲಾಖೆಗಳ ಆದೇಶ ಜಾರಿಗೆ ಮಾರ್ಚ್ ೪ರವರೆಗೆ ತಡೆಯಾಜ್ಞೆ ನೀಡಿದೆ.

ಯುಎನ್‌ಐ ಕೆವಿಆರ್ ೧೮೫೧