Thursday, Oct 22 2020 | Time 20:01 Hrs(IST)
 • ಪ್ರಾದೇಶಿಕ ಭಾಷೆಗಳಲ್ಲಿ ಜೆ ಇ ಇ ಮುಖ್ಯ ಪರೀಕ್ಷೆ : ರಮೇಶ್ ಪೋಖ್ರಿಯಾಲ್
 • ಪದವಿಪೂರ್ವ ಪಠ್ಯ ಶೇ 30 ರಷ್ಟು ಕಡಿತ
 • ಸಶಸ್ತ್ರ ಪಡೆಗಳ ಪಿಂಚಣಿ ಸೌಲಭ್ಯದಲ್ಲಿ ತಾರತಮ್ಯ; ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಕೆ
 • ತೆವಳುತ್ತಾ ಸಾಗುತ್ತಿದೆ ಸಮೃದ್ಧಿ ಯೋಜನೆ: ಲಾಭ ಪಡೆದಿದ್ದು ಕೇವಲ 177 ಫಲಾನುಭವಿಗಳು… !!!
 • ಬಿಹಾರಿಗಳ ಆತ್ಮಗೌರವ ಮಾರಾಟಕ್ಕಿಲ್ಲ , ತೇಜಸ್ವಿ ಯಾದವ್ ವಾಗ್ದಾಳಿ
 • ನಿತೀಶ್ ರಿಂದ ಜನತೆಗೆ ದ್ರೋಹ, ಲಾಲೂ ಕಿಡಿ
 • ನವೆಂಬರ್ 1ರಿಂದ ಸಾಯ್ ಕೇಂದ್ರಗಳಲ್ಲಿ ತರಬೇತಿ ಪುನರಾರಂಭ
 • ಐಪಿಎಲ್ 2020 ರೇಟಿಂಗ್ ಸಖತ್ತಾಗಿ ಸಾಗಿದೆ: ಸೌರವ್ ಗಂಗೂಲಿ
 • ಉಪ ಚುನಾವಣೆ ಗಂಭೀರವಾಗಿ ಪರಿಗಣಿಸಿ: ಸಂಘಟಿತವಾಗಿ ಹೋರಾಡಿ - ಯಡಿಯೂರಪ್ಪ
 • ಜಯದ ಅನಿವಾರ್ಯತೆಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್
 • ಕೆಕೆಆರ್‌ ವಿರುದ್ಧದ ಗೆಲುವಿನ ಹೊರತಾಗಿಯೂ ಬೇಸರ ವ್ಯಕ್ತಪಡಿಸಿದ ಕೊಹ್ಲಿ
 • ಉತ್ತರ ಕಾಶ್ಮೀರದಲ್ಲಿ ಶೋಧ ಕಾರ್ಯಾಚರಣೆ ವೇಳೆ ಇಬ್ಬರು ಅಲ್-ಬದರ್ ಉಗ್ರರು ಶರಣಾಗತಿ
 • ಈರುಳ್ಳಿ ಬೆಲೆ ಗಗನಕ್ಕೆ,ಗ್ರಾಹಕರ ಕಣ್ಣಲ್ಲಿ ಬಳ, ಬಳ ನೀರು !
 • ಎದುರಾಳಿ ನಮ್ಮ ಸರಿ ಸಮನಾಗಿದ್ದರಷ್ಟೇ ಯುದ್ಧ ಮಾಡಬಹುದು; ಡಿ ಕೆ ಶಿವಕುಮಾರ್
 • ಕುಲಭೂಷಣ್ ಜಾಧವ್ ಗಲ್ಲುಶಿಕ್ಷೆ ಪರಾಮರ್ಶೆಗೆ ಪಾಕ್ ಸಂಸತ್ ಸಮ್ಮತಿ
Karnataka Share

ಕತೆಗಾರ ಎನ್. ಪ್ರಕಾಶ್ ನಿಧನ

ಕತೆಗಾರ ಎನ್. ಪ್ರಕಾಶ್ ನಿಧನ
ಕತೆಗಾರ ಎನ್. ಪ್ರಕಾಶ್ ನಿಧನ

ಮೈಸೂರು, ಅ.17 (ಯುಎನ್ಐ) ಕವಿ, ಕತೆಗಾರ ಎನ್ ಪ್ರಕಾಶ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು.

ಪತ್ನಿ, ಇಬ್ಬರು ಹೆಣ್ಣು ಮಕ್ಕಳನ್ನು ಹಾಗೂ ಎಂಟು ಜನ ಸಹೋದರ-ಸಹೋದರಿಯರನ್ನು ಅಗಲಿದ್ದಾರೆ.

ಮೂಲತಃ ದಾವಣಗೆರೆಯವರಾದ ಪ್ರಕಾಶ್ ಅಲ್ಲಿನ ಬಿಡಿಟಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪದವಿ ಪಡೆದುಕೊಂಡ ನಂತರ ಕೆಪಿಟಿಸಿಎಲ್ ನಲ್ಲಿ ಎಕ್ಸಿ ಕ್ಯೂಟಿವ್ ಎಂಜಿನಿಯರಾಗಿ ರಾಜ್ಯದ ವಿವಿಧ ನಗರಗಳಲ್ಲಿ ಕಾರ್ಯನಿರ್ವಹಿಸಿದ್ದರು. ನಿವೃತ್ತಿಯ ನಂತರ ಮೈಸೂರಿನ ರಾಮಕೃಷ್ಣನಗರದ ಎಚ್ ಬ್ಲಾಕ್ ನಲ್ಲಿ ನೆಲೆಸಿದ್ದರು.

ದಾವಣಗೆರೆ ಹೊಸ ಸಂವೇದನೆಯ ಸಾಹಿತ್ಯ, ನಾಟಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ತಂದ ಕೀರ್ತಿಗೆ ಹೆಸರಾಗಿರುವ ಪ್ರತಿಭಾ ಸಭಾ ಎಂಬ ಸಾಂಸ್ಕೃತಿಕ ಸಂಸ್ಥೆಯನ್ನು ಸ್ಥಾಪಿಸಿದವರಲ್ಲಿ ಎನ್.ಪ್ರಕಾಶ್ ಮುಖ್ಯರಾದವರು. 1970 ಮತ್ತು 1980ರ ದಶಕಗಳಲ್ಲಿ ಪ್ರತಿಮಾ ಸಭಾ ಬಹಳ ಕ್ರಿಯಾಶೀಲವಾಗಿತ್ತು.

ಸ್ವತಃ ಕವಿ ಮನಸ್ಸಿನ ಪ್ರಕಾಶ್ ಕವಿತೆಗಳನ್ನ ಮತ್ತು ಕತೆಗಳನ್ನು ಬರೆದು ಪ್ರಕಟಿಸಿದ್ದರು.

ಯುಎನ್ಐ ವಿಎನ್ ಎಎಚ್ 1832