Sunday, Aug 25 2019 | Time 01:31 Hrs(IST)
Karnataka Share

ಕೇಂದ್ರದಿಂದ ನೆರೆ ಸಂತ್ರಸ್ಥರಿಗೆ ಹೆಚ್ಚಿನ ನೆರವು : ಮುಖ್ಯಮಂತ್ರಿ ಯಡಿಯೂರಪ್ಪ

ಕೇಂದ್ರದಿಂದ ನೆರೆ ಸಂತ್ರಸ್ಥರಿಗೆ ಹೆಚ್ಚಿನ ನೆರವು : ಮುಖ್ಯಮಂತ್ರಿ ಯಡಿಯೂರಪ್ಪ
ಕೇಂದ್ರದಿಂದ ನೆರೆ ಸಂತ್ರಸ್ಥರಿಗೆ ಹೆಚ್ಚಿನ ನೆರವು : ಮುಖ್ಯಮಂತ್ರಿ ಯಡಿಯೂರಪ್ಪ

ಸೊರಬ , ಆ 13 (ಯುಎನ್ಐ) ಆಗಸ್ಟ್ 15ರ ಸಂಜೆ ತಾವು ದೆಹಲಿಗೆ ತೆರಳುತ್ತಿದ್ದು, ಕೇಂದ್ರದಿಂದ ನೆರೆ ಸಂತ್ರಸ್ತರಿಗೆ ಹೆಚ್ಚಿನ ನೆರೆವು, ಮಂತ್ರಿಮಂಡಲ ವಿಸ್ತರಣೆಗೆ ವರಿಷ್ಠರಿಂದ ಅನುಮತಿ ಪಡೆದುಕೊಂಡು ಬರುವುದಾಗಿ ಮುಖ್ಯಮಂತ್ರಿ ಬಿ‌‌‌ ಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತಾಲೂಕಿನ ಅಗಸನಹಳ್ಳಿ ಗ್ರಾಮದಲ್ಲಿ ನೆರೆಪೀಡಿತ ಪ್ರದೇಶಗಳ ವೀಕ್ಷಣೆ ಹಾಗೂ ಸಂತ್ರಸ್ಥರ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು ರಾಜ್ಯದಲ್ಲಿ ನೆರೆಹಾನಿಯಿಂದ ಸಾವಿರಾರು ಗ್ರಾಮಗಳು ಮುಳುಗಡೆಯಾಗಿದ್ದು, 30 ಸಾವಿರಕ್ಕೂ ಹೆಚ್ಚು ಮನೆಗಳು ನೆಲಸಮಗೊಂಡಿವೆ. 6 ಸಾವಿರಕ್ಕೂ ಹೆಚ್ಚು ಮನೆಗಳು ಭಾಗಶಃ ಹಾನಿಗೀಡಾಗಿವೆ. ಲಕ್ಷಾಂತರ ಜನರು ಜನರು ನಿರಾಶ್ರಿತರಾಗಿದ್ದಾರೆ ಎಂದು ಅವರು ತಿಳಿಸಿದರು.

ತಾಲೂಕಿನ ಆನವಟ್ಟಿ ಗ್ರಾಮದ ನೆರೆ, ಅತಿವೃಷ್ಟಿ ಹಾನಿಗೀಡಾದ ಪ್ರದೇಶಗಳನ್ನು ವೀಕ್ಷಿಸಿದ ಅವರು, ಈ ಭಾಗಗಳಲ್ಲಾಗಿರುವ ನಷ್ಟದ ಬಗ್ಗೆ ಶಾಸಕ ಕುಮಾರ ಬಂಗಾರಪ್ಪ ತಮಗೆ ನಷ್ಟದ ಮಾಹಿತಿ ನೀಡಿದ್ದಾರೆ. ತಾಲೂಕಿನ ಮೂಗೂರು ಏತ ನೀರಾವರಿಗೆ 105 ಕೋಟಿ, ಮೂಡಿಗೆ 125 ಕೋಟಿ ರೂ‌ ಯೋಜನೆಗೆ ರಾಜ್ಯ ಸರ್ಕಾರ ಮಂಜೂರಾತಿ ನೀಡಿದ್ದು, ಇನ್ನು 15 ದಿನಗಳ ಒಳಗಾಗಿ ಕಾಮಗಾರಿ ಪ್ರಾರಂಭಿಸಲಾಗುವುದು. ನೀರಾವರಿ, ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಲೆ, ಗ್ರಾಮೀಣ ಜನರಿಗೆ ಉತ್ತಮ ಬದುಕು ಕಲ್ಪಿಸುವುದು ತಮ್ಮ ಮೊದಲ ಆದ್ಯತೆ ಎಂದರು.

1 ಲಕ್ಷ ರೂ ವೆಚ್ಚದಲ್ಲಿ ಮನೆ ನಿರ್ಮಾಣ ಮಾಡುವ ಚಿಂತನೆ ನಡೆಸಲಾಗಿತ್ತು. ಆದರೆ ಅಷ್ಟು ಕಡಿಮೆ ಮೊತ್ತದಲ್ಲಿ ಉತ್ತಮ ಮನೆ ನಿರ್ಮಾಣ ಸಾಧ್ಯವಿಲ್ಲ ಎಂದರಿತು 5 ಲಕ್ಷ ರೂಗಳನ್ನು ಪೂರ್ಣ ಹಾನಿಗೀಡಾದ ಮನೆಗಳ ಪುನರ್ ನಿರ್ಮಾಣಕ್ಕೆ ನೀಡಲು ತೀರ್ಮಾನಿಸಲಾಗಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಹೆಚ್ಚಿನ ಹೊರ ಬೀಳಲಿದೆ. ಆದರೂ ಲೆಕ್ಕಿಸದೇ ಜನರಿಗೆ ಉತ್ತಮ ಮನೆ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು. ಮನೆ ದುರಸ್ತಿಗೆ 1 ಲಕ್ಷ ರೂ ನೀಡುತ್ತಿದ್ದು, ಎಲ್ಲವನ್ನು ಕಳೆದುಕೊಂಡವರಿಗೆ ತಾತ್ಕಾಲಿಕ ಖರ್ಚು ವೆಚ್ಚ ಹಾಗೂ ಜೀವನ ನಿರ್ವಹಣೆಗಾಗಿ 10 ಸಾವಿರ ರೂ ನೀಡಲು ತೀರ್ಮಾನಿಸಲಾಗಿದೆ. ಆದಷ್ಟು ಶೀಘ್ರದಲ್ಲಿ ನಿರಾಶ್ರಿತರ ಮಾಹಿತಿ ಹಾಗೂ ಪಟ್ಟಿಯನ್ನುಸಿದ್ದಪಡಿಸಿ ಜಿಲ್ಲಾಡಳಿತ ನೀಡಲಿದೆ. ಒಂದು ವಾರದ ಒಳಗಾಗಿ ನಿರಾಶ್ರಿತರಿಗೆ ಹಣ ನೀಡಲಾಗುವುದು ಎಂದು ಅವರು ತಿಳಿಸಿದರು.

ಬೆಳೆ ನಷ್ಟ ಸಂಬಂಧ ಸಮೀಕ್ಷೆ ಮಾಡಿ ವರದಿ ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ. ಒಂದೆರಡು ವಾರದಲ್ಲಿ ಬೆಳೆ ನಷ್ಟದ ಸರ್ವೇ ನಡೆಸಿ ಅಧಿಕಾರಿಗಳು ಸರ್ಕಾರಕ್ಕೆ ವರದಿ ನೀಡಲಿದ್ದಾರೆ. ವರದಿ ಬಂದ ಬಳಿಕ ಬೆಳೆ ನಷ್ಟ ಪರಿಹಾರ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಕೃಷಿಕ್ ಸಮ್ಮಾನ್ ನಿಧಿ ಯೋಜನೆಯಡಿ ರಾಜ್ಯ ಸರ್ಕಾರವೂ ರೈತರಿಗೆ 2000 ರೂ‌‌ಗಳನ್ನು ಎರಡು ಕಂತುಗಳಲ್ಲಿ ಶೀಘ್ರದಲ್ಲಿಯೇ ರೈತರ ಖಾತೆಗೆ ಜಮಾ ಮಾಡಲಾಗುವುದು ಎಂದು ಅವರು ತಿಳಿಸಿದರು.

ಕೇಂದ್ರ ಗೃಹ ಸಚಿವ ಅಮಿತ್ ಷಾ ಹಾಗೂ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ರಾಜ್ಯದ ನೆರೆ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿ ನೆರೆ ಹಾಗೂ ಅತಿವೃಷ್ಟಿಯಿಂದಾದ ನಷ್ಟದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಹಾನಿಯ ವಾಸ್ತವ ಸ್ಥಿತಿ ಅರಿಯಲು ಕನಿಷ್ಟ ವಾರಗಳಾದರೂ ಸಮಯಾವಕಾಶ ಅಗತ್ಯವಿದೆ. ನದಿಗಳಲ್ಲಿ ಪ್ರವಾಹ ಇಳಿಮುಖವಾಗಿ, ಮಳೆ ನಿಂತ ಬಳಿಕವಷ್ಟೆ ನಷ್ಟದ ಮಾಹಿತಿ ಸ್ಪಷ್ಟವಾಗಿ ತಿಳಿಯಲಿದೆ ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದರು.

ಯುಎನ್ಐ ಎಸ್ಎಂಆರ್ ಯುಎಲ್ ವಿಎನ್ 2045