Saturday, Oct 24 2020 | Time 20:10 Hrs(IST)
  • ಎನ್‌ಸಿಬಿ ಅಧಿಕಾರಿಗಳ ಸೋಗಿನಲ್ಲಿ ಬೆಳ್ಳುಳ್ಳಿಯ ವ್ಯಾಪಾರಿಯ ದರೋಡೆ
  • ಚರ್ಚ್ ಕುಸಿದು 22 ಮಂದಿ ಸಾವು
  • ಉಪ ಚುನಾವಣೆ, ವಿಧಾನ ಪರಿಷತ್ ಚುನಾವಣೆಗಳಲ್ಲಿ ಬಿಜೆಪಿಗೆ ಗೆಲುವು: ಮುಖ್ಯಮಂತ್ರಿ ಯಡಿಯೂರಪ್ಪ ವಿಶ್ವಾಸ
  • ದೇಶಾದ್ಯಂತ ಉಚಿತ ಕೋವಿಡ್‌ ಲಸಿಕೆ ದೊರೆಯಬೇಕು; ಕೇಜ್ರೀವಾಲ್‌
  • ವರುಣ್ ಚಕ್ರವರ್ತಿ ಮಾರಕ ಬೌಲಿಂಗ್ ಗೆ ತತ್ತರಿಸಿದ ಡೆಲ್ಲಿ
  • ಕೆಡುಕಿನ ವಿರುದ್ದ ಒಳಿತು ಸಾಧಿಸಿದ ವಿಜಯದ ಸಂಕೇತ ದಸರಾ- ಉಪರಾಷ್ಟಪತಿ
  • ತ್ರಿವರ್ಣ ಧ್ವಜ; ಮೆಹಬೂಬಾ ಮುಫ್ತಿ ಹೇಳಿಕೆಗೆ ಕಾಂಗ್ರೆಸ್, ಬಿಜೆಪಿ ಆಕ್ರೋಶ
  • ನಾಲ್ಕು ಕೈ, ಕಾಲುಗಳ ಬಾಲಕನಿಗೆ, ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ ಸರ್ಕಾರಿ ಆಸ್ಪತ್ರೆ ವೈದ್ಯರು
  • ಡೆಲ್ಲಿಗೆ 195 ರನ್ ಗುರಿ ನೀಡಿದ ಕೆಕೆಆರ್
  • ಕೋವಿಡ್-19 ಸ್ಥಿತಿಗತಿಗೆ ನಿರ್ಣಾಯಕವಾಗಲಿದೆ ಮುಂದಿನ ಎರಡು ತಿಂಗಳು
  • ತಿರುಪತಿ ತಿಮ್ಮಪ್ಪ ದೇಗಲ ಪ್ರಸಾದ ತಯಾರಿಕ ಕೇಂದ್ರದಲ್ಲಿ ಸ್ಪೋಟ- ಐವರು ಕಾರ್ಮಿಕರಿಗೆ ಗಾಯ
  • ಆದಾಯ ತೆರಿಗೆ ವಿವರ ಸಲ್ಲಿಕೆಗೆ ಡಿ 31 ರವರೆಗೆ ಗಡುವು ವಿಸ್ತರಣೆ
  • ಗುಜರಾತ್‌; ಕಿಸಾನ್‌ ಸೂರ್ಯೋದಯ ಸೇರಿ ಮೂರು ಯೋಜನೆಗೆ ಪ್ರಧಾನಿ ಮೋದಿ ಚಾಲನೆ
  • ಕೆಲವೆಡೆ ಆಯುಧ ಪೂಜೆ, ಇನ್ನೂ ಕೆಲವೆಡೆ ಸಿದ್ಧತೆ: ಕಾರ್ಮಿಕರಿಗಿಲ್ಲ ಬೋನಸ್ !!!
  • ಓಲಾ, ಉಬರ್, ಆಟೋ ಚಾಲಕ ಸಂಘದ ಪದಾಧಿಕಾರಿಗಳು ಕಾಂಗ್ರೆಸ್ ಗೆ ಸೇರ್ಪಡೆ
Karnataka Share

ಕುರ್ಚಿ ಉಳಿಸಿಕೊಳ್ಳುವುದಕ್ಕಿಂದ ರಾಜ್ಯದ ಹಿತಕ್ಕಾಗಿ ಪ್ರಧಾನಿ ಮುಂದೆ ಜಿಎಸ್ ಟಿ,ನೆರೆ ಪರಿಹಾರ ಕೇಳಿ : ಸಿಎಂಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸಂದೇಶ

ಬೆಂಗಳೂರು,ಸೆ 18(ಯುಎನ್ಐ)ಕಾಡಿಬೇಡಿ ಕೊನೆಗೂ ಪ್ರಧಾನಿಗಳ ಭೇಟಿಗೆ ಅವಕಾಶ ಪಡೆದಿದ್ದೀರಿ.ಈ ಅವಕಾಶ ವನ್ನು ನಿಮ್ಮ ಕುರ್ಚಿ ಉಳಿಸಿಕೊಳ್ಳುವ ಕಸರತ್ತಿಗೆ ಬಳಸಿಕೊಳ್ಳದೆ ರಾಜ್ಯದ ಹಿತರಕ್ಷಣೆಗಾಗಿ ನಾಲ್ಕು ಮಾತುಗಳ ನ್ನು ಖಡಕ್ ಆಗಿ ಕೇಳಲು ಬಳಸಿಕೊಳ್ಳಿ.ರಾಜ್ಯದ ಜನ ನಿಮ್ಮ ಬೆನ್ನ ಹಿಂದಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದ ರಾಮಯ್ಯ ಮುಖ್ಯಮಂತ್ರಿ ಯಡಿಯೂರಪ್ಪನಿಗೆ ಟ್ವೀಟ್ ಮೂಲಕ ಎಚ್ಚರಿಕೆ ಸಂದೇಶ ನೀಡಿದ್ದಾರೆ.

ದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿ ವರನ್ನು ಭೇಟಿ ಮಾಡಿ ರಾಜ್ಯದ ಯೋಜನೆಗಳಿಗೆ ಅನುದಾನ ಹಾಗೂ ನೆರೆ,ಅತಿವೃಷ್ಠಿ ಹಾಗೂ ಜಿಎಸ್ ಟಿ ಪರಿಹಾ ರದ ಬಗ್ಗೆ ಚೆರ್ಚೆ ನಡೆಸಲಿದ್ದಾರೆ.ಈ ಸಂಬಂಧ ಟ್ವೀಟ್ ಮಾಡಿರುವ ಅವರು,ಕಳೆದ ವರ್ಷದ ಅತಿವೃಷ್ಟಿಗೆ ರೂ. 35,000 ಕೋಟಿ ಪರಿಹಾರ ಕೇಳಿದ್ದೀರಿ,‌ಆದರೆ ಕೇಂದ್ರ ಸರ್ಕಾರ ನೀಡಿದ್ದು ರೂ.1,869 ಕೋಟಿ‌.ಈ ಬಾರಿ ರೂ. 8,000 ಕೋಟಿ ನಷ್ಟವಾಗಿದೆ ಎಂದು ಹೇಳುತ್ತಿದ್ದೀರಿ.ಕಳೆದ ವರ್ಷದ ಬಾಕಿ ಜೊತೆ ಈ ವರ್ಷದ ಪರಿಹಾರವನ್ನು ಉದಾರವಾಗಿ ಕೊಡುವಂತೆ ಕೇಳಿಕೊಳ್ಳಿ.15ನೇ ಹಣಕಾಸು ಆಯೋಗದಿಂದ ಉಳಿದ ರಾಜ್ಯಗಳಿಗೆ ಹೋಲಿಸಿದರೆ ಹೆಚ್ಚು ನಷ್ಟವಾಗಿರುವುದು ಕರ್ನಾಟಕ ರಾಜ್ಯಕ್ಕೆ.ಈ ಅನ್ಯಾಯಕ್ಕೆ ಕಾರಣವಾಗಿರುವ ಮಾನದಂಡಗಳನ್ನು ಪರಿಷ್ಕರಿಸಿ ತೆರಿಗೆ ಹಂಚಿಕೆ ಮತ್ತು ಎಸ್ ಡಿಆರ್ ಎಫ್ ನಲ್ಲಿ ರಾಜ್ಯಕ್ಕೆ ನ್ಯಾಯಬದ್ಧ ಪಾಲು ಸಿಗುವಂತೆ ಮಾಡಿ ಎಂದು ಸಲಹೆ ನೀಡಿದ್ದಾರೆ.

ಕೊರೊನಾ ಸೋಂಕಿನಲ್ಲಿ ವಿಶ್ವದಲ್ಲಿ ಭಾರತ, ದೇಶದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ.ಗೆಲುವಿನ ಕಿರೀಟ ಗಳನ್ನೆಲ್ಲ ಮುಡಿಗೇರಿಸುವ ನರೇಂದ್ರ ಮೋದಿ ಅವರಿಗೆ ವೈಫಲ್ಯಗಳ ಹೊಣೆಯನ್ನು ರಾಜ್ಯಗಳ ಹೆಗಲ ಕಡೆ ಜಾರಿ ಸುವ ಚಾಳಿ ಇದೆ.ಪ್ರಧಾನಿಗಳಿಗೆ ಅವರಿಗೆ ಜವಾಬ್ದಾರಿ ನೆನಪಿಸಿ ರಾಜ್ಯಕ್ಕೆ ನ್ಯಾಯ ಕೊಡಿಸಿ.

ಕೊರೊನಾ ನಿಯಂತ್ರಣದ ಸಾಮಗ್ರಿ ಖರೀದಿಯನ್ನು ಕೇಂದ್ರೀಕೃತಗೊಳಿಸಿರುವ ಕೇಂದ್ರ ಸರ್ಕಾರ,ಕರ್ನಾಟ ಕದ ಬೇಡಿಕೆಯ ಶೇಕಡಾ ಹತ್ತರಷ್ಟೂ ಪೂರೈಸಿಲ್ಲ.ವೆಂಟಿಲೇಟರ್ ಮತ್ತು ಆಮ್ಲಜನಕ ಪೂರೈಕೆಯ ಸಾಧನಗಳ ಕೊರ ತೆಯಿಂದ ಜನ ಸಾಯುತ್ತಿರುವುದನ್ನು ಗಮನಕ್ಕೆ ತಂದು ನರೇಂದ್ರ ಮೋದಿ ಅವರ ಕಣ್ಣು ತೆರೆಸಿ ಎಂದು ಮನವಿ ಮಾಡಿದ್ದಾರೆ.

ಕೇಂದ್ರ ಸರ್ಕಾರ ಘೋಷಿಸಿದ್ದ ರೂ.20 ಲಕ್ಷ ಕೋಟಿ ಪ್ಯಾಕೇಜ್ ರಾಜ್ಯದ ಜನರನ್ನು ಇನ್ನೂ ತಲುಪಿಲ್ಲ.ಕೊರೊ ನಾ ಸೋಂಕಿಗಿಂತ ಹಸಿವು ಮತ್ತು ನಿರುದ್ಯೋಗದಿಂದ ಹೆಚ್ಚು ಜನ ಸಾವು-ನೋವಿಗೀಡಾಗುವ ಮೊದಲು, ಪ್ಯಾಕೇ ಜ್ ನಲ್ಲಿ ರಾಜ್ಯಕ್ಕೆ ನ್ಯಾಯಬದ್ಧ ಪಾಲು ನೀಡಲು ಒತ್ತಾಯಿಸಿ.ನ್ಯಾಯಬದ್ಧವಾಗಿ ರಾಜ್ಯಕ್ಕೆ ನೀಡಬೇಕಾಗಿರುವ ಜಿಎಸ್‌ಟಿ ಪರಿಹಾರ ರೂ.25,508 ಕೋಟಿ ನೀಡದೆ ದ್ರೋಹ ಬಗೆದಿರುವ ಕೇಂದ್ರ ಸರ್ಕಾರ,ಸಾಲ ಎತ್ತಲು ಮುಖ್ಯ ಮಂತ್ರಿ ಯಡಿಯೂರಪ್ಪ ಅವರ ಕೈಗೆ ಭಿಕ್ಷಾಪಾತ್ರೆ ನೀಡಿದೆ.ಯಡಿಯೂ ರಪ್ಪ ಅವರೇ,ನಿಮ್ಮ ನಾಯಕರ ಎದೆ ಯಳತೆಯ ಮುಂದೆ ಮಣಿಯದೆ ಧೈರ್ಯದಿಂದ ಈ ಅನ್ಯಾಯ ಸರಿಪಡಿಸಲು ಹೇಳಿ ಎಂದು ವ್ಯಂಗ್ಯಭರಿತವಾಗಿ ಮುಖ್ಯಮಂತ್ರಿಗೆ ಕಟುಕಿಯಾಡಿದ್ದಾರೆ.

ಯುಎನ್ಐ ಎಸ್ಎಂಆರ್ ವಿಎನ್ 1235
More News
ಜಾತಿ ಒಡೆದು ರಾಜಕೀಯ ಮಾಡುವ ಅಗತ್ಯ ಇಲ್ಲ: ಕೆಪಿಸಿಸಿ ಅಧ್ಯಕ್ಷ  ಡಿ ಕೆ ಶಿವಕುಮಾರ್

ಜಾತಿ ಒಡೆದು ರಾಜಕೀಯ ಮಾಡುವ ಅಗತ್ಯ ಇಲ್ಲ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್

24 Oct 2020 | 5:33 PM

ಬೆಂಗಳೂರು,ಅ 24(ಯುಎನ್ಐ) ನಮಗೆ ಜಾತಿಯನ್ನು ಒಡೆದು ರಾಜಕೀಯ ಮಾಡುವ ಅಗತ್ಯ ಇಲ್ಲ. ತನ್ನನ್ನು ಬೆಳೆಸಿದ ಪಕ್ಷಕ್ಕೆ ಮೋಸ ಮಾಡಿದ್ದು,ಹೆತ್ತ ತಾಯಿಗೆ ದ್ರೋಹ ಬಗೆದಿದ್ದಾರೆ.ಇದಕ್ಕೆ ಜನ ತಕ್ಕ ಉತ್ತರ ನೀಡಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

 Sharesee more..