Sunday, Apr 5 2020 | Time 14:57 Hrs(IST)
 • ಪಿಎಂ ಕೇರ್ಸ್ ನಿಧಿಗೆ ೧೦೦ ಕೋಟಿ, ಕರ್ನಾಟಕಕ್ಕೆ ೫ ಕೋಟಿ ನೆರವು ಪ್ರಕಟಿಸಿದ ಡಿಮಾರ್ಟ್
 • ಜಮ್ಮು-ಕಾಶ್ಮೀರದ ಕೆರನ್ ಸೆಕ್ಟರ್‍ ನಲ್ಲಿ ಒಳನುಸುಳುವಿಕೆ ಯತ್ನ ವಿಫಲ: 5 ಉಗ್ರರು ಹತ, ಮೂವರು ಯೋಧರು ಹುತಾತ್ಮ
 • ಸೆಲ್ಫ್ ಕ್ವಾರೆಂಟೈನ್‌ಗೆ ಒಳಗಾಗಿರುವ ಸಿ ಆರ್ ಪಿ ಎಫ್ ಮುಖ್ಯಸ್ಥ ಎ ಪಿ ಮಹೇಶ್ವರಿ
 • ರೈತರ ಸ್ಥಿತಿಗತಿ ಅವಲೋಕನ: ಏ 6 ರಿಂದ ಸಚಿವ ಬಿ ಸಿ ಪಾಟೀಲ್ ಜಿಲ್ಲಾ ಪ್ರವಾಸ
 • ಕೋವಿಡ್ ಪ್ರಕರಣ ಹೆಚ್ಚಳ: ಲಾಕ್ ಡೌನ್ ಕಟ್ಟುನಿಟ್ಟಾಗಿ ಪಾಲಿಸಲು ಮುಖ್ಯಮಂತ್ರಿ ಮನವಿ
 • ಆಸ್ಪತ್ರೆಗೆ ಹೋಗುತ್ತಿದ್ದೆ, ಪಾರ್ಟಿಗಲ್ಲ: ನಟಿ ಶರ್ಮಿಳಾ ಮಾಂಡ್ರೆ ಸ್ಪಷ್ಟನೆ
 • ಪಾಕಿಸ್ತಾನದಲ್ಲಿ ಏಪ್ರಿಲ್ ಅಂತ್ಯಕ್ಕೆ ಕೊರೊನಾ ಸೋಂಕಿತರ ಸಂಖ್ಯೆ 50 ಸಾವಿರಕ್ಕೆ ಏರಿಕೆ
 • ಲಾಕ್‌ಡೌನ್ ಉಲ್ಲಂಘಿಸಿ ಕಾರಿನಲ್ಲಿ ಆಗಮಿಸಿ, ಪೊಲೀಸರಿಗೆ ಬೆದರಿಕೆ ಹಾಕಿದ ಇಬ್ಬರ ಬಂಧನ
 • ರಕ್ಕಸ ಕೊರೊನಾ; ಅಮೆರಿಕಾ, ಸೌದಿಯಲ್ಲಿ ಇಬ್ಬರು ಭಾರತೀಯರ ಸಾವು
 • ರಾಜ್ಯದ ಜನಹಿತವೇ ಪರಮೋಚ್ಚ: ಕರ್ನಾಟಕ-ಕೇರಳ ಗಡಿ ಮುಚ್ಚಿರುವ ಹಿಂದೆ ಪೂರ್ವಗ್ರಹಗಳಿಲ್ಲ: ಎಚ್‌ಡಿಡಿಗೆ ಪತ್ರ ಬರೆದ ಮುಖ್ಯಮಂತ್ರಿ
 • ರೋಗ ಪತ್ತೆ ಕಿಟ್‌ಗಳ ರಫ್ತಿನ ಮೇಲೆ ಸಂಪೂರ್ಣ ನಿಷೇಧ
 • ಕೊರೊನಾ - ಸಾವಿನ ಸಂಖ್ಯೆ ಹೆಚ್ಚಳ : ಟ್ರಂಪ್
 • ತಮಿಳುನಾಡಿನಲ್ಲಿ ಕರೋನವೈರಸ್‍ಗೆ ಇನ್ನೂ ಇಬ್ಬರು ಬಲಿ: ಸಾವಿನ ಸಂಖ್ಯೆ 5ಕ್ಕೆ ಏರಿಕೆ
 • ಕೊರೊನಾ ಅಲರ್ಟ್; ಮಹಾರಾಷ್ಟ್ರದಲ್ಲಿ ಭಾನುವಾರ ಒಂದೇ ದಿನ ೨೬ ಹೊಸ ಪ್ರಕರಣ
 • ಬಾಬು ಜಗಜೀವನ್‌ ರಾಮ್‌ ಜಯಂತಿ: ಪ್ರಧಾನಿ ಗೌರವ ಸಲ್ಲಿಕೆ
Special Share

ಕಾರ್ಮಿಕರಿಗೆ ವೇತನ ಸಹಿತ ರಜೆಗೆ ಕೇಂದ್ರ ಸರ್ಕಾರ ಆದೇಶ

ಕಾರ್ಮಿಕರಿಗೆ ವೇತನ ಸಹಿತ ರಜೆಗೆ ಕೇಂದ್ರ ಸರ್ಕಾರ ಆದೇಶ
ಕಾರ್ಮಿಕರಿಗೆ ವೇತನ ಸಹಿತ ರಜೆಗೆ ಕೇಂದ್ರ ಸರ್ಕಾರ ಆದೇಶ

ನವದೆಹಲಿ, ಮಾ ೨೫(ಯುಎನ್‌ಐ) ಮಾರಣಾಂತಿಕ ಕೊರೊನಾ ವೈರಸ್ ಹಬ್ಬುವುದನ್ನು ನಿಯಂತ್ರಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.

ದೇಶದಲ್ಲಿ ಕೊರೊನಾ ವೈರಸ್ ಹರಡುವುದನ್ನು ತಡೆಯುವ ಭಾಗವಾಗಿ ಸರ್ಕಾರ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದೆ ಎಂದು ಸಭೆಯ ನಂತರ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಮಾಧ್ಯಮಗಳಿಗೆ ವಿವರಿಸಿದರು.

ಲಾಕ್ ಡೌನ್ ಹಿನ್ನಲೆಯಲ್ಲಿ ಕಾರ್ಮಿಕರಿಗೆ ಆಯಾ ಉದ್ಯೋಗದಾತ ಸಂಸ್ಥೆಗಳು ವೇತನ ಸಹಿತ ರಜೆ ನೀಡುವಂತೆ ಆದೇಶಿಸಲಾಗಿದೆ ಎಂದರು. ಮಹಾಮಾರಿ ನಿಯಂತ್ರಿಸಲು ಜಿಲ್ಲಾವಾರು ಸಹಾಯವಾಣಿಗಳನ್ನು ಶೀಘ್ರದಲ್ಲೇ ಸ್ಥಾಪಿಸಲಾಗುವುದು ಎಂದರು. ದೇಶದಲ್ಲಿ ಅಗತ್ಯ ಸರಕುಗಳಿಗೆ ಯಾವುದೇ ತೊಂದರೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ದೇಶದಲ್ಲಿ ೮೦ ಕೋಟಿ ಜನರಿಗೆ ವಿಶೇಷ ಪಡಿತರ ಮೂಲಕ ೩ ರೂಪಾಯಿಗೆ ಕೆಜಿ ಅಕ್ಕಿ, ೨ ರೂಪಾಯಿಗೆ ಕೆಜಿ ಗೋಧಿ ವಿತರಿಸಲಾಗುವುದು ಎಂದರು. ಸಾರ್ವಜನಿಕರಿಗೆ ಎಲ್ಲಾ ಸೌಲಭ್ಯಗಳು ಲಭ್ಯವಿದ್ದು, ದಿನನಿತ್ಯ ಬಳಸುವ ಹಾಲು ಮತ್ತಿತರ ಅಗತ್ಯ ವಸ್ತುಗಳ ಮಳಿಗೆಗಳು ತೆರೆದಿರುತ್ತವೆ ಎಂದು ಅವರು ಹೇಳಿದರು. ಜನರು ಶಿಸ್ತು ಬದ್ಧವಾಗಿ ಮನೆಯಲ್ಲಿ ಉಳಿದುಕೊಂಡು, ಅನ್ಯರೊಂದಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕೋರಲಾಗಿದೆ. ಗುತ್ತಿಗೆ ಕಾರ್ಮಿಕರ ವೇತನವನ್ನು ನೀಡಲಾಗುವುದು ಈ ಕುರಿತು ಯಾರೂ ಆತಂಕಗೊಳ್ಳುವ ಆಗತ್ಯವಿಲ್ಲ ಎಂದು ಸಚಿವ ಪ್ರಕಾಶ್ ಜಾವಡೇಕರ್ ಭರವಸೆ ನೀಡಿದ್ದಾರೆ.

ದೇಶದಲ್ಲಿ ಕೊರೊನಾ ವೈರಸ್ ಹಬ್ಬುವುದನ್ನು ತಡೆಗಟ್ಟಲು ದೇಶಾದ್ಯಂತ ಮೂರು ವಾರಗಳ ಲಾಕ್ ಡೌನ್ ಪಾಲಿಸಬೇಕೆಂದು ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ದೇಶ ಉದ್ದೇಶಿಸಿ ಮಾಡಿದ ಬಾಷಣದ ವೇಳೆ ಪ್ರಕಟಿಸಿದ್ದರು. ಲಾಕ್‌ಡೌನ್ ಏಪ್ರಿಲ್ ೧೪ ರವರೆಗೆ ದೇಶಾದ್ಯಂತ ಜಾರಿಯಲ್ಲಿರುತ್ತದೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ, ಉಳಿದ ಎಲ್ಲವೂ ಬಂದ್ ಆಗಲಿವೆ.

ಯುಎನ್‌ಐ ಕೆವಿಆರ್ ೧೬೧೫