Sunday, Nov 29 2020 | Time 19:18 Hrs(IST)
  • ಬಿಜೆಪಿಯಿಂದ ಕೃಷಿಕರ ಬದುಕು ಹಸನಾಗಿದೆ : ಡಿಸಿಎಂ ಅಶ್ವತ್ಥ ನಾರಾಯಣ್
  • ಆಜಾದ್ ಭವನ ನೂತನ ಕಟ್ಟಡ 1 ಕೋಟಿಯಲ್ಲಿ ನಿರ್ಮಿಸಿರುವುದು ಶ್ಲಾಘನೀಯ - ಎಚ್ ನಾಗೇಶ್
  • ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿಗೆ ಜನಬೆಂಬಲ; ಗೋವಿಂದ ಕಾರಜೋಳ
  • ಭಾರತದ ಬೌಲರ್‌ಗಳು ಪರಿಣಾಮಕಾರಿಯಾಗಿ ಬೌಲಿಂಗ್‌ ಮಾಡಲಿಲ್ಲ: ವಿರಾಟ್‌ ಕೊಹ್ಲಿ
  • ನಮ್ಮಿಂದಲೇ ಕಾಂಗ್ರೆಸ್ ಪಕ್ಷ ಎಂಬ ಭ್ರಮೆ ಬೇಡ: ಡಿ ಕೆ ಶಿವಕುಮಾರ್
  • ಕೃಷ್ಟಿ ಸುಧಾರಣೆಯಿಂದ ರೈತರಿಗೆ ಮುಕ್ತ ಅವಕಾಶ, ಹಕ್ಕು ಲಭ್ಯ; ಪ್ರಧಾನಿ ಪ್ರತಿಪಾದನೆ
  • ಮುಖ್ಯಮಂತ್ರಿ ಯಡಿಯೂರಪ್ಪ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದಾರೆ : ಮಹೇಶ್ ಕುಮಠಹಳ್ಳಿ ವಿಶ್ವಾಸ
  • ಸರ್ಕಾರದ ಮಾತುಕತೆಯ ಪ್ರಸ್ತಾಪವನ್ನು ತಿರಸ್ಕರಿಸಿದ ರೈತ ಸಂಘಟನೆಗಳು
  • ಮಹಿಳೆಗೆ ವಂಚಿಸಿದ ನೈಜೀರಿಯಾ ಪ್ರಜೆ ಬಂಧನ
  • ಯೋಗೇಶ್ವರ್ ಪರ ಮಾತನಾಡುವವರು ಸಚಿವ ಸ್ಥಾನ ತ್ಯಾಗ ಮಾಡಿಲಿ : ಎಂ ಪಿ ರೇಣುಕಾಚಾರ್ಯ
  • ಬಿಜೆಪಿ, ಆರ್‌ಎಸ್‌ಎಸ್‌ಗೆ ದಲಿತರು, ಆದಿವಾಸಿಗಳ ಅಭಿವೃದ್ಧಿ ಬೇಕಿಲ್ಲ; ರಾಹುಲ್‌
  • ಆರ್‌ಎಂಎಂ ಪದಾಧಿಕಾರಿಗಳೊಂದಿಗೆ ನಾಳೆ ರಜನೀಕಾಂತ್‍ ಮಹತ್ವದ ಭೇಟಿ: ರಾಜಕೀಯ ನಿಲುವು ಕುರಿತು ಸ್ಪಷ್ಟನೆ
  • ಮಾರಕಾಸ್ತ್ರಗಳಿಂದ ಕೊಚ್ಚಿ‌ ಯುವಕನ ಕೊಲೆ
  • ಸಾಗರ ಭದ್ರತೆಯನ್ನು ಹೆಚ್ಚಿಸುವಲ್ಲಿ ಭಾರತ, ಶ್ರೀಲಂಕಾ, ಮಾಲ್ಡೀವ್ಸ್ ನಿಂದ ಮಹತ್ವದ ಕ್ರಮ
  • ವಿದ್ಯುತ್ ತಂತಿ ತಗುಲಿ ಕಂಬದಲ್ಲೇ ಲೈನ್ ಮನ್ ಸಾವು: ಮತ್ತೋರ್ವ ಚಿಂತಾಜನಕ
Entertainment Share

ಚಿತ್ರೀಕರಣ ಮುಗಿಸಿದ 'ಬ್ಲಾಂಕ್'

ಬೆಂಗಳೂರು, ಅ 21 (ಯುಎನ್ಐ) ಫೆಲಿಸಿಟಿ ಫಿಲಂಸ್ ಲಾಂಛನದಲ್ಲಿ ಎನ್ ಪಿ ಮಂಜುನಾಥ್ ಪ್ರಸನ್ನ ಅವರು ನಿರ್ಮಿಸಿರುವ 'ಬ್ಲಾಂಕ್' ಚಿತ್ರದ ಚಿತ್ರೀಕರಣ ಹಾಗೂ ನಂತರದ ಚಟುವಟಿಕೆಗಳು ಪೂರ್ಣವಾಗಿದ್ದು, ಪ್ರಥಮಪ್ರತಿ ಸಿದ್ದವಾಗಿದೆ. ಸದ್ಯದಲ್ಲೇ ಸೆನ್ಸಾರ್ ಮಂಡಳಿ ಚಿತ್ರ ವೀಕ್ಷಿಸಲಿದೆ.
ಮೈಸೂರು, ಚಿಕ್ಕಮಗಳೂರು, ಬೆಂಗಳೂರು, ತುಮಕೂರು, ಸಕಲೇಶಪುರ ಮುಂತಾದ ಕಡೆ ಚಿತ್ರೀಕರಣ ನಡೆಸಲಾಗಿದೆ. ಎಸ್ ಜಯ್ ಈ ಚಿತ್ರದ ನಿರ್ದೇಶಕರು. ಸೈಕಲಾಜಿಕಲ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕರೇ ಕಥೆ, ಚಿತ್ರಕಥೆ ಬರೆದಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ಈ ಚಿತ್ರದ ಟೀಸರ್ ಗೆ ಮೆಚ್ಚುಗೆ ವ್ಯಕ್ತವಾಗಿದೆ. ಶೀಘ್ರದಲ್ಲೇ ಆಡಿಯೋ ರಿಲೀಸ್ ಅಗಲಿದೆ.
ಎಸ್ ಜಯ್, ಅಂಬರೀಶ್ ಪತ್ತಾರ್ ಹಾಗೂ ಶ್ರೀಕಾಂತ್ ಆಂಜಲ್ ಸಂಭಾಷಣೆ ಬರೆದಿದ್ದಾರೆ. ಜೆ.ಪಿ.ಮ್ಯಾನ್ ಛಾಯಾಗ್ರಹಣ, ಶ್ರೀಶಾಸ್ತ ಸಂಗೀತ ನಿರ್ದೇಶನ, ಅಶೋಕ್ ಸಾಹಸ ನಿರ್ದೇಶನ ಹಾಗೂ ವಿಜಯ್ ಅವರ ನೃತ್ಯ ನಿರ್ದೇಶನ 'ಬ್ಲಾಂಕ್' ಚಿತ್ರಕ್ಕಿದೆ.
ಪೂರ್ಣಚಂದ್ರ ಮೈಸೂರು, ಕೃಷಿ ತಾಪಂಡ, ಪ್ರಶಾಂತ್ ಸಿದ್ದಿ, ಸುಚೇಂದ್ರ ಪ್ರಸಾದ್, ಭರತ್ ಹಾಸನ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.‌ ಯುಎನ್ಐ ಎಸ್ಎ 0947
ಯುಎನ್ಐ ಎಸ್ಎ 0945
More News
ಟಾಲಿವುಡ್​ನಿಂದ ಬಾಲಿವುಡ್​ಗೆ ಬೆಲಂಕೊಂಡ ಸಾಯಿ ಶ್ರೀನಿವಾಸ್

ಟಾಲಿವುಡ್​ನಿಂದ ಬಾಲಿವುಡ್​ಗೆ ಬೆಲಂಕೊಂಡ ಸಾಯಿ ಶ್ರೀನಿವಾಸ್

28 Nov 2020 | 10:01 PM

ಬೆಂಗಳೂರು, ನ 28 (ಯುಎನ್‍ಐ) ಟಾಲಿವುಡ್​ನಲ್ಲಿ ಗುರುತಿಸಿಕೊಂಡಿರುವ ನಟ ಬೆಲಂಕೊಂಡ ಸಾಯಿ ಶ್ರೀನಿವಾಸ್​ ಇದೀಗ ಬಾಲಿವುಡ್​ ಚಿತ್ರರಂಗಕ್ಕೆ ಪದಾರ್ಪಣೆ ಮಾಡುವ ತಯಾರಿ ನಡೆಸಿದ್ದಾರೆ.

 Sharesee more..
“ರಾಣಿ ಜೇನು”  ರೊಮ್ಯಾಂಟಿಕ್ ಮ್ಯೂಸಿಕ್ ಆಲ್ಬಂ ಬಿಡುಗಡೆ

“ರಾಣಿ ಜೇನು” ರೊಮ್ಯಾಂಟಿಕ್ ಮ್ಯೂಸಿಕ್ ಆಲ್ಬಂ ಬಿಡುಗಡೆ

28 Nov 2020 | 9:58 PM

ಬೆಂಗಳೂರು, ನ 28 (ಯುಎನ್‍ಐ) ಸಂಗೀತ ಕ್ಷೇತ್ರದಲ್ಲಿ ತನ್ನದೇ ಹೆಸರು ಮಾಡಿರುವ ಜಂಕಾರ್ ಮ್ಯೂಸಿಕ್ ಸಂಸ್ಥೆ ಈವರೆಗೂ ಸಾಕಷ್ಟು ವಿಡಿಯೋ ಆಲ್ಬಂ ಬಿಡುಗಡೆ ಮಾಡಿದ್ದು, ಈ ಬಾರಿ ಸೋನಿ ಆಚಾರ್ಯ ಅವರ ಸಾರಥ್ಯದಲ್ಲಿ “ರಾಣಿ ಜೇನು” ಎಂಬ ರೊಮ್ಯಾಂಟಿಕ್ ವಿಡಿಯೋ ಬಿಡುಗಡೆಗೊಳಿಸಿದೆ.

 Sharesee more..
'ಆ ಒಂದು ಕನಸು' ಶೀರ್ಷಿಕೆ ಅನಾವರಣ

'ಆ ಒಂದು ಕನಸು' ಶೀರ್ಷಿಕೆ ಅನಾವರಣ

28 Nov 2020 | 9:56 PM

ಬೆಂಗಳೂರು, ನ 28 (ಯುಎನ್ಐ) ರಂಗು ಕ್ರಿಯೇಷನ್ಸ್ ಲಾಂಛನದಲ್ಲಿ ದಿಲೀಪ ಬಿ.ಎಂ ನಿರ್ಮಿಸುತ್ತಿರುವ ನೂತನ ಚಿತ್ರ 'ಆ ಒಂದು ಕನಸು' ಚಿತ್ರದ ಶೀರ್ಷಿಕೆಯನ್ನು ಹಿರಿಯ ನಟರಾದ ಎಸ್ ಉಮೇಶ್ , ಹೊನ್ನವಳ್ಳಿ ಕೃಷ್ಣ ಹಾಗೂ ಹಿರಿಯ ಕಂಠದಾನ ಕಲಾವಿದೆ ಆಶಾ ಬಿಡುಗಡೆ ಮಾಡಿದ್ದಾರೆ.

 Sharesee more..
“ಆಕ್ಟ್-1978” ಬೆಂಗಳೂರು ಡಿಸಿಪಿ ನಿಶಾ ಜೇಮ್ಸ್ ಮೆಚ್ಚುಗೆ

“ಆಕ್ಟ್-1978” ಬೆಂಗಳೂರು ಡಿಸಿಪಿ ನಿಶಾ ಜೇಮ್ಸ್ ಮೆಚ್ಚುಗೆ

28 Nov 2020 | 9:52 PM

ಬೆಂಗಳೂರು, ನ 28 (ಯುಎನ್‍ಐ) ಲಾಕ್ ಡೌನ್ ಬಳಿಕ ಬಿಡುಗಡೆಯಾದ ದಕ್ಷಿಣದ ಮೊದಲ ನೂತನ ಚಿತ್ರ ಎಂಬ ಹೆಗ್ಗಳಿಗೆ ಪಾತ್ರವಾಗಿರುವ “ಆಕ್ಟ್ -1978” ಚಿತ್ರಕ್ಕೆ ಡಿಸಿಪಿ ನಿಶಾ ಜೇಮ್ಸ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

 Sharesee more..
ಆಲ್ಬಂ ಹಾಡಿಗೆ ಹೆಜ್ಜೆ ಹಾಕಲಿದ್ದಾರೆ

ಆಲ್ಬಂ ಹಾಡಿಗೆ ಹೆಜ್ಜೆ ಹಾಕಲಿದ್ದಾರೆ "ಜೊತೆ ಜೊತೆಯಲಿ" ಮೇಘಾ ಶೆಟ್ಟಿ

28 Nov 2020 | 9:49 PM

ಬೆಂಗಳೂರು, ನ 28 (ಯುಎನ್‍ಐ) ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಜನಪ್ರಿಯತೆ ಪಡೆದು, ಗೋಲ್ಡನ್ ಸ್ಟಾರ್ ಗಣೇಶ್ ಚಿತ್ರವೊಂದಕ್ಕೆ ನಾಯಕಿಯಾಗಿ ಆಯ್ಕೆಯಾಗಿರುವ ನಟಿ ಮೇಘಾ ಶೆಟ್ಟಿ, ಇದೀಗ ಆಲ್ಬಂ ಹಾಡೊಂದಕ್ಕೆ ಹೆಜ್ಜೆ ಹಾಕಲಿದ್ದಾರೆ.

 Sharesee more..