Thursday, Oct 22 2020 | Time 21:10 Hrs(IST)
 • ಶ್ರೀನಗರದಲ್ಲಿ ‘ಕಾಶ್ಮೀರ್ ಟೈಮ್ಸ್’ ಕಚೇರಿಗಳಿಗೆ ಮೊಹರು: ಎಡಿಟರ್ಸ್‍ ಗಿಲ್ಡ್ ಖಂಡನೆ
 • ಭಾರತದ ಈ ಕ್ರಮಗಳು ಚೀನಾ ದೇಶವನ್ನು ನಡುಗುವಂತೆ ಮಾಡಿವೆ: ಜೆ ಪಿ ನಡ್ಡಾ
 • ಅ 24ರಂದು ಪ್ರಧಾನಿಯಿಂದ ಗುಜರಾತ್‌ನ ಮೂರು ಪ್ರಮುಖ ಯೋಜನೆಗಳ ಉದ್ಘಾಟನೆ
 • ಪ್ರಾದೇಶಿಕ ಭಾಷೆಗಳಲ್ಲಿ ಜೆ ಇ ಇ ಮುಖ್ಯ ಪರೀಕ್ಷೆ: ರಮೇಶ್ ಪೋಖ್ರಿಯಾಲ್
 • ಪದವಿಪೂರ್ವ ಪಠ್ಯ ಶೇ 30 ರಷ್ಟು ಕಡಿತ
 • ಸಶಸ್ತ್ರ ಪಡೆಗಳ ಪಿಂಚಣಿ ಸೌಲಭ್ಯದಲ್ಲಿ ತಾರತಮ್ಯ; ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಕೆ
 • ತೆವಳುತ್ತಾ ಸಾಗುತ್ತಿದೆ ಸಮೃದ್ಧಿ ಯೋಜನೆ: ಲಾಭ ಪಡೆದಿದ್ದು ಕೇವಲ 177 ಫಲಾನುಭವಿಗಳು… !!!
 • ಬಿಹಾರಿಗಳ ಆತ್ಮಗೌರವ ಮಾರಾಟಕ್ಕಿಲ್ಲ , ತೇಜಸ್ವಿ ಯಾದವ್ ವಾಗ್ದಾಳಿ
 • ನಿತೀಶ್ ರಿಂದ ಜನತೆಗೆ ದ್ರೋಹ, ಲಾಲೂ ಕಿಡಿ
 • ನವೆಂಬರ್ 1ರಿಂದ ಸಾಯ್ ಕೇಂದ್ರಗಳಲ್ಲಿ ತರಬೇತಿ ಪುನರಾರಂಭ
 • ಐಪಿಎಲ್ 2020 ರೇಟಿಂಗ್ ಸಖತ್ತಾಗಿ ಸಾಗಿದೆ: ಸೌರವ್ ಗಂಗೂಲಿ
 • ಉಪ ಚುನಾವಣೆ ಗಂಭೀರವಾಗಿ ಪರಿಗಣಿಸಿ: ಸಂಘಟಿತವಾಗಿ ಹೋರಾಡಿ - ಯಡಿಯೂರಪ್ಪ
 • ಜಯದ ಅನಿವಾರ್ಯತೆಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್
 • ಕೆಕೆಆರ್‌ ವಿರುದ್ಧದ ಗೆಲುವಿನ ಹೊರತಾಗಿಯೂ ಬೇಸರ ವ್ಯಕ್ತಪಡಿಸಿದ ಕೊಹ್ಲಿ
 • ಉತ್ತರ ಕಾಶ್ಮೀರದಲ್ಲಿ ಶೋಧ ಕಾರ್ಯಾಚರಣೆ ವೇಳೆ ಇಬ್ಬರು ಅಲ್-ಬದರ್ ಉಗ್ರರು ಶರಣಾಗತಿ
National Share

ಜಾಗತಿಕ ಹಸಿವು ಸೂಚ್ಯಂಕದಲ್ಲಿ ಭಾರತಕ್ಕೆ 94ನೇ ಸ್ಥಾನ; ಕೇಂದ್ರದ ವಿರುದ್ಧ ರಾಹುಲ್‌ ವಾಗ್ದಾಳಿ

ಜಾಗತಿಕ ಹಸಿವು ಸೂಚ್ಯಂಕದಲ್ಲಿ ಭಾರತಕ್ಕೆ 94ನೇ ಸ್ಥಾನ; ಕೇಂದ್ರದ ವಿರುದ್ಧ ರಾಹುಲ್‌ ವಾಗ್ದಾಳಿ
ಜಾಗತಿಕ ಹಸಿವು ಸೂಚ್ಯಂಕದಲ್ಲಿ ಭಾರತಕ್ಕೆ 94ನೇ ಸ್ಥಾನ; ಕೇಂದ್ರದ ವಿರುದ್ಧ ರಾಹುಲ್‌ ವಾಗ್ದಾಳಿ

ನವದೆಹಲಿ, ಅ 17 (ಯುಎನ್ಐ) ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ ಭಾರತ 94ನೇ ಸ್ಥಾನ ಪಡೆದಿರುವುದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಶನಿವಾರ ವಾಗ್ದಾಳಿ ನಡೆಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಈ ಅಭಿಪ್ರಾಯ ಹಂಚಿಕೊಂಡಿರುವ ರಾಹುಲ್‌, ಸರ್ಕಾರ ತಮ್ಮ ಕೆಲ 'ವಿಶೇಷ' ಸ್ನೇಹಿತರ ಜೇಬು ತುಂಬಿಸುವಲ್ಲಿ ನಿರತವಾಗಿರುವುದರಿಂದ ದೇಶದ ಬಡವರು ಹಸಿವಿನಿಂದ ಬಳಲುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಜಾಗತಿಕ ಹಸಿವು ಸೂಚ್ಯಂಕದಲ್ಲಿ ಭಾರತ 94 ನೇ ಸ್ಥಾನದಲ್ಲಿದೆ, ಪಾಕಿಸ್ತಾನ (88 ) ಮತ್ತು ಬಾಂಗ್ಲಾದೇಶ (75 ) ಗಿಂತಲೂ ಕೆಳಗಿರುವ ಗ್ರಾಫಿಕ್ಸ್ ಅನ್ನು ರಾಹುಲ್‌ ಗಾಂಧಿ ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಇದರ ಪ್ರಕಾರ ಕೇವಲ 13 ದೇಶಗಳು ಮಾತ್ರ ಭಾರತದಿಂದ ಕೆಳಗಿವೆ. ಇದು ರವಾಂಡ, ನೈಜೀರಿಯಾ, ಅಫ್ಗಾನಿಸ್ತಾನ ಮತ್ತು ಲಿಬಿಯಾಗಳನ್ನು ಒಳಗೊಂಡಿವೆ.

ಕಳೆದ ವರ್ಷ 102ರಷ್ಟಿದ್ದ ಶ್ರೇಣಿ ಈ ವರ್ಷ 94ಕ್ಕೆ ಏರಿಕೆಯಾಗಿದೆ.

ವಿಶ್ವದಾದ್ಯಂತ ಹಸಿವಿನ ಮಟ್ಟ ಮತ್ತು ಅಪೌಷ್ಟಿಕತೆಯನ್ನು ಲೆಕ್ಕಹಾಕುವ ಸೂಚ್ಯಂಕವನ್ನು ಶುಕ್ರವಾರ ಬಿಡುಗಡೆ ಮಾಡಲಾಗಿದೆ.

107 ದೇಶಗಳ ಪಟ್ಟಿಯಲ್ಲಿ ಭಾರತದ ಒಟ್ಟಾರೆ ಮೊತ್ತ 27.2 ಆಗಿದೆ. ಇದು ಭಾರತವನ್ನು "ಗಂಭೀರ" ವಿಭಾಗದಲ್ಲಿರಿಸುತ್ತದೆ.

ವರದಿಯ ಪ್ರಕಾರ, ಭಾರತದ ಜನಸಂಖ್ಯೆಯ ಶೇ.14 ರಷ್ಟು ಜನರು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ.

ಯುಎನ್ಐ ಎಸ್ಎಚ್ 1313

More News
ಅ 24ರಂದು ಪ್ರಧಾನಿಯಿಂದ ಗುಜರಾತ್‌ನ ಮೂರು ಪ್ರಮುಖ ಯೋಜನೆಗಳ ಉದ್ಘಾಟನೆ

ಅ 24ರಂದು ಪ್ರಧಾನಿಯಿಂದ ಗುಜರಾತ್‌ನ ಮೂರು ಪ್ರಮುಖ ಯೋಜನೆಗಳ ಉದ್ಘಾಟನೆ

22 Oct 2020 | 8:45 PM

ನವದೆಹಲಿ, ಅ 22 (ಯುಎನ್‍ಐ)- ಗುಜರಾತ್‌ನ ರೈತರಿಗಾಗಿ ‘ಕಿಸಾನ್ ಸೂರ್ಯೋದಯ ಯೋಜನೆ’ ಸೇರಿದಂತೆ ಮೂರು ಪ್ರಮುಖ ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅ 24 ರಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಲಿದ್ದಾರೆ ಎಂದು ಪ್ರಧಾನಮಂತ್ರಿ ಕಾರ್ಯಾಲಯ ಗುರುವಾರ ತಿಳಿಸಿದೆ.

 Sharesee more..