KarnatakaPosted at: Jan 13 2021 4:56PM
Shareಜ 28 ರಿಂದ ಜಂಟಿ ಅಧಿವೇಶನ: ಮಾರ್ಚ್ ನಲ್ಲಿ ಬಜೆಟ್ ಅಧಿವೇಶನ – ಸಂಪುಟ ತೀರ್ಮಾನ
ಜ 28 ರಿಂದ ಜಂಟಿ ಅಧಿವೇಶನ: ಮಾರ್ಚ್ ನಲ್ಲಿ ಬಜೆಟ್ ಅಧಿವೇಶನ – ಸಂಪುಟ ತೀರ್ಮಾನಬೆಂಗಳೂರು, ಜ 13 [ಯುಎನ್ಐ] ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನ ಜನವರಿ ೨೮ ಫೆಬ್ರವರಿ ೫ ರವರೆಗೆ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧು ಸ್ವಾಮಿ, ಸಂಪ್ರದಾಯದಂತೆ ರಾಜ್ಯಪಾಲ ವಜೂಭಾಯಿ ವಾಲಾ ಅವರು ಜನವರಿ 28 ರಂದು ವಿಧಾನಮಂಡಲದ ಉಭಯ ಸದನಗಳನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದರು.
ಮಾರ್ಚ್ ನಲ್ಲಿ ಬಜೆಟ್ ಅಧಿವೇಶನ ನಡೆಯಲಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಜೆಟ್ ಮಂಡಿಸಲಿದ್ದಾರೆ. ಆದರೆ ಆಯವ್ಯಯ ಅಧಿವೇಶನಕ್ಕೆ ಇನ್ನೂ ದಿನಾಂಕ ನಿಗದಿಯಾಗಿಲ್ಲ ಎಂದು ಜೆ.ಸಿ. ಮಾಧು ಸ್ವಾಮಿ ಹೇಳಿದರು.
ಯುಎನ್ಐ ಎಂ.ಎಸ್.ಆರ್ ವಿಎನ್ 1536