Tuesday, Oct 22 2019 | Time 08:58 Hrs(IST)
  • ಉತ್ತರ ಕರ್ನಾಟಕದಲ್ಲಿ ಮತ್ತೆ ಅತಿವೃಷ್ಠಿ,ನೆರೆ : 6 ಜನ ಪ್ರವಾಹಕ್ಕೆ ಸಿಲುಕಿ ಸಾವು
  • ಹೈಕಮಾಂಡ್ ಮೇಲೆ ಒತ್ತಡ ಹಾಕಿ ಅಧಿಕಾರ ಪಡೆದಿದ್ದಾರೆ : ಸಿ ಟಿ ರವಿ ಆರೋಪ
International Share

ಟೈರ್ ಕಾರ್ಖಾನೆಯಲ್ಲಿ ಬೆಂಕಿ:ಸಾವು- ಬದುಕಿನ ನಡುವೆ ಕಾರ್ಮಿಕರ ಹೋರಾಟ

ಕರಾಚಿ, ಸೆ 16 (ಯುಎನ್‌ಐ) ಪಾಕಿಸ್ತಾನದ ಬಂದರು ನಗರಿ ಕರಾಚಿಯಲಿ ಟೈರ್ ಉತ್ಪಾದನಾ ಕಾರ್ಖಾನೆಯಲ್ಲಿ ಸೋಮವಾರ ಸಂಭವಿಸಿದ ಬೆಂಕಿ ದುರಂತದಲ್ಲಿ ಹಲವು ಕಾರ್ಮಿಕರು ಸಿಕ್ಕಿಕೊಂಡು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರ್ಖಾನೆಯೊಳಗೆ ಬೆಂಕಿ ಕಾಣಿಸಿಕೊಂಡು ನಂತರ ಖೈದಾ ಅಬಾದ್ ಪ್ರದೇಶದ ಕಾರ್ಖಾನೆಯ ಇತರ ಪ್ರದೇಶಗಳಿಗೆ ವ್ಯಾಪಿಸಿತು ಎಂದು ಚೀನಾದ ಸುದ್ದಿ ಸಂಸ್ಥೆ ಕ್ಸಿನ್ಹುವಾ ಸ್ಥಳೀಯ ಪೊಲೀಸರನ್ನು ಉಲ್ಲೇಖಿಸಿ ವರದಿ ಮಾಡಿದೆ. ರಕ್ಷಣಾ ತಂಡಗಳು ಬೆಂಕಿ ನಂದಿಸಲು ಪ್ರಯತ್ನಿಸಿ ಕಾರ್ಖಾನೆಯ ಒಂದೆರಡು ಕೋಣೆಗಳಲ್ಲಿ ಸಿಕ್ಕಿಬಿದ್ದ ಕೆಲವು ಕಾರ್ಮಿಕರನ್ನು ರಕ್ಷಿಸಿವೆ. ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ಬೆಂಕಿಯು ಹೊಸದಾಗಿ ಉತ್ಪಾದಿಸಲಾದ ಸಾವಿರಾರು ಟೈರ್‌ಗಳನ್ನು ಮತ್ತು ಕಾರ್ಖಾನೆಯ ಬಹ ಭಾಗವನ್ನು ಆವರಿಸಿದೆ. ಬೆಂಕಿಯ ಕಾರಣ ಇನ್ನೂ ತಿಳಿದುಬಂದಿಲ್ಲ. ಬೆಂಕಿಯನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದ ನಂತರ ತನಿಖೆ ಪ್ರಾರಂಭಿಸಲಾಗುವುದು ಎಂದೂ ಪೊಲೀಸರು ತಿಳಿಸಿದ್ದಾರೆ.
ಯುಎನ್ಐ ಕೆಎಸ್ಆರ್ 1545