Sunday, Nov 29 2020 | Time 18:40 Hrs(IST)
  • ನಮ್ಮಿಂದಲೇ ಕಾಂಗ್ರೆಸ್ ಪಕ್ಷ ಎಂಬ ಭ್ರಮೆ ಬೇಡ: ಡಿ ಕೆ ಶಿವಕುಮಾರ್
  • ಕೃಷ್ಟಿ ಸುಧಾರಣೆಯಿಂದ ರೈತರಿಗೆ ಮುಕ್ತ ಅವಕಾಶ, ಹಕ್ಕು ಲಭ್ಯ; ಪ್ರಧಾನಿ ಪ್ರತಿಪಾದನೆ
  • ಮುಖ್ಯಮಂತ್ರಿ ಯಡಿಯೂರಪ್ಪ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದಾರೆ : ಮಹೇಶ್ ಕುಮಠಹಳ್ಳಿ ವಿಶ್ವಾಸ
  • ಸರ್ಕಾರದ ಮಾತುಕತೆಯ ಪ್ರಸ್ತಾಪವನ್ನು ತಿರಸ್ಕರಿಸಿದ ರೈತ ಸಂಘಟನೆಗಳು
  • ಮಹಿಳೆಗೆ ವಂಚಿಸಿದ ನೈಜೀರಿಯಾ ಪ್ರಜೆ ಬಂಧನ
  • ಯೋಗೇಶ್ವರ್ ಪರ ಮಾತನಾಡುವವರು ಸಚಿವ ಸ್ಥಾನ ತ್ಯಾಗ ಮಾಡಿಲಿ : ಎಂ ಪಿ ರೇಣುಕಾಚಾರ್ಯ
  • ಬಿಜೆಪಿ, ಆರ್‌ಎಸ್‌ಎಸ್‌ಗೆ ದಲಿತರು, ಆದಿವಾಸಿಗಳ ಅಭಿವೃದ್ಧಿ ಬೇಕಿಲ್ಲ; ರಾಹುಲ್‌
  • ಆರ್‌ಎಂಎಂ ಪದಾಧಿಕಾರಿಗಳೊಂದಿಗೆ ನಾಳೆ ರಜನೀಕಾಂತ್‍ ಮಹತ್ವದ ಭೇಟಿ: ರಾಜಕೀಯ ನಿಲುವು ಕುರಿತು ಸ್ಪಷ್ಟನೆ
  • ಮಾರಕಾಸ್ತ್ರಗಳಿಂದ ಕೊಚ್ಚಿ‌ ಯುವಕನ ಕೊಲೆ
  • ಸಾಗರ ಭದ್ರತೆಯನ್ನು ಹೆಚ್ಚಿಸುವಲ್ಲಿ ಭಾರತ, ಶ್ರೀಲಂಕಾ, ಮಾಲ್ಡೀವ್ಸ್ ನಿಂದ ಮಹತ್ವದ ಕ್ರಮ
  • ವಿದ್ಯುತ್ ತಂತಿ ತಗುಲಿ ಕಂಬದಲ್ಲೇ ಲೈನ್ ಮನ್ ಸಾವು: ಮತ್ತೋರ್ವ ಚಿಂತಾಜನಕ
  • ವಿದ್ಯುತ್ ಸ್ಪರ್ಶ: ಕಂಟೈನರ್ ಕ್ಲೀನರ್ ಗೆ ಗಂಭೀರ ಗಾಯ
  • ಕುಂಬಳಕಾಯಿ ಕಳ್ಳ ಅಂದರೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿರುವುದೇಕೆ?: ಡಿ ಕೆ ಶಿವಕುಮಾರ್ ಪ್ರಶ್ನೆ
  • ಪ್ರಧಾನಿ ಭೇಟಿ ಹಿನ್ನೆಲೆ: ಸ್ವಾಗತಕ್ಕೆ ವಾರಾಣಸಿ ಸಜ್ಜು
  • ನಿವಾರ್ ಚಂಡಮಾರುತ: ಆಂಧ್ರದಲ್ಲಿ ಆರು ಮಂದಿ ಸಾವು, 543 ಕಿ ಮೀ ಉದ್ದದ ರಸ್ತೆ ಹಾನಿ
Entertainment Share

ಡ್ರಗ್ಸ್ ಪ್ರಕರಣ : ನಿರ್ಮಾಪಕ ಸೌಂದರ್ಯ ಜಗದೀಶ್ ವಿಚಾರಣೆ

ಬೆಂಗಳೂರು, ಅ 21 (ಯುಎನ್‍ಐ) ಸ್ಯಾಂಡಲ್ ವುಡ್ ಡ್ರಗ್ಸ್ ಜಾಲ ಪ್ರಕರಣಕ್ಕೆ ಸಂಬಂಧಿಸಿ ಇದೇ ಮೊದಲ ಬಾರಿಗೆ ನಿರ್ಮಾಪಕರೊಬ್ಬರನ್ನು ಸಿಸಿಬಿ ವಿಚಾರಣೆಗೆ ಒಳಪಡಿಸಿದೆ.

ಬೆಂಗಳೂರಿನ ಒರಾಯನ್ ಮಾಲ್ ಬಳಿ ಪಬ್ ಒಂದನ್ನು ಹೊಂದಿರುವ ನಿರ್ಮಾಪಕ ಸೌಂದರ್ಯ ಜಗದೀಶ್ ಅವರು ವಿಚಾರಣೆಗೆ ಒಳಪಟ್ಟಿದ್ದಾರೆ. ಮಂಗಳವಾರವೇ ನೋಟಿಸ್ ಪಡೆದಿದ್ದ ಅವರು ಬುಧವಾರ ಅಧಿಕಾರಿಗಳ ಮುಂದೆ ಹಾಜರಾಗಿ ವಿಚಾರಣೆ ಎದುರಿಸಿದ್ದಾರೆ.

ನಟಿಯರಾದ ಸಂಜನಾ ಗಲ್ರಾನಿ, ರಾಗಿಣಿ ದ್ವಿವೇದಿ ಹಾಗೂ ಡ್ರಗ್ ಪೆಡ್ಲರ್ ವೀರೇನ್ ಖನ್ನಾರ ಮೋಜು ಮಸ್ತಿಯ ಪಾರ್ಟಿಯ ಕುರಿತ ಪ್ರಶ್ನೆಗಳಿಗೆ ಅವರು ಉತ್ತರಿಸಿದ್ದಾರೆ ಎನ್ನಲಾಗಿದೆ.

ನಿರ್ಮಾಪಕ ಸೌಂದರ್ಯ ಜಗದೀಶ್ ಸ್ಯಾಂಡಲ್ ವುಡ್ ನಲ್ಲಿ ಸುದೀಪ್ ಅಭಿನಯದ ‘ಮಸ್ತ್ ಮಜಾ ಮಾಡಿ’ ‘ಅಪ್ಪು-ಪಪ್ಪು’,’ ರಾಮ್ ಲೀಲಾ’ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ.

ಡ್ರಗ್ಸ್ ಪ್ರಕರಣ ಸಂಬಂಧ ಈಗಾಗಲೇ ಸಾಕಷ್ಟು ಮಂದಿಯನ್ನು ವಿಚಾರಣೆ ಮಾಡಲಾಗಿದೆ. ಸ್ಯಾಂಡಲ್ ವುಡ್ ಮತ್ತು ಕಿರುತೆರೆಯ ಅನೇಕ ಕಲಾವಿದರನ್ನು ಸಿಸಿಬಿ ವಿಚಾರಣೆಗೆ ಒಳಪಡಿಸಿದೆ.

ಇನ್ನು ಡ್ರಗ್ಸ್ ಪ್ರಕರಣ ಸಂಬಂಧ ಬಿಗ್ ಬಾಸ್ ಸ್ಪರ್ಧಿ ಮತ್ತು ಡ್ಯಾನ್ಸರ್ ಆಡಂ ಪಾಷಾರನ್ನು ಈಗಾಗಲೇ ಬಂಧಿಸಲಾಗಿದೆ.

ಬಂಧನಕ್ಕೆ ಒಳಗಾಗಿರುವ ಅನಿಕಾಳಿಂದ ಮಾದಕ ವಸ್ತುವನ್ನು ಆಡಂ ಪಾಷಾ ಖರೀದಿಸಿದ್ದಾರೆ ಎಂಬ ಆರೋಪದ ಮೇಲೆ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಆದರೆ 'ಅನಿಕಾ ನನ್ನ ಗೆಳತಿ, ಆಕೆಯೊಂದಿಗೆ ಆಪ್ತತೆ ಇದೆ, ಆದರೆ ಡ್ರಗ್ಸ್ ವ್ಯವಹಾರದ ಬಗ್ಗೆ ನನಗೆ ಗೊತ್ತಿಲ್ಲ' ಎಂದು ಆ್ಯಡಂ ಪಾಷಾ ಹೇಳಿದ್ದಾರೆ.

ಯುಎನ್‍ಐ ಎಸ್ಎ 1258
More News
ಟಾಲಿವುಡ್​ನಿಂದ ಬಾಲಿವುಡ್​ಗೆ ಬೆಲಂಕೊಂಡ ಸಾಯಿ ಶ್ರೀನಿವಾಸ್

ಟಾಲಿವುಡ್​ನಿಂದ ಬಾಲಿವುಡ್​ಗೆ ಬೆಲಂಕೊಂಡ ಸಾಯಿ ಶ್ರೀನಿವಾಸ್

28 Nov 2020 | 10:01 PM

ಬೆಂಗಳೂರು, ನ 28 (ಯುಎನ್‍ಐ) ಟಾಲಿವುಡ್​ನಲ್ಲಿ ಗುರುತಿಸಿಕೊಂಡಿರುವ ನಟ ಬೆಲಂಕೊಂಡ ಸಾಯಿ ಶ್ರೀನಿವಾಸ್​ ಇದೀಗ ಬಾಲಿವುಡ್​ ಚಿತ್ರರಂಗಕ್ಕೆ ಪದಾರ್ಪಣೆ ಮಾಡುವ ತಯಾರಿ ನಡೆಸಿದ್ದಾರೆ.

 Sharesee more..
“ರಾಣಿ ಜೇನು”  ರೊಮ್ಯಾಂಟಿಕ್ ಮ್ಯೂಸಿಕ್ ಆಲ್ಬಂ ಬಿಡುಗಡೆ

“ರಾಣಿ ಜೇನು” ರೊಮ್ಯಾಂಟಿಕ್ ಮ್ಯೂಸಿಕ್ ಆಲ್ಬಂ ಬಿಡುಗಡೆ

28 Nov 2020 | 9:58 PM

ಬೆಂಗಳೂರು, ನ 28 (ಯುಎನ್‍ಐ) ಸಂಗೀತ ಕ್ಷೇತ್ರದಲ್ಲಿ ತನ್ನದೇ ಹೆಸರು ಮಾಡಿರುವ ಜಂಕಾರ್ ಮ್ಯೂಸಿಕ್ ಸಂಸ್ಥೆ ಈವರೆಗೂ ಸಾಕಷ್ಟು ವಿಡಿಯೋ ಆಲ್ಬಂ ಬಿಡುಗಡೆ ಮಾಡಿದ್ದು, ಈ ಬಾರಿ ಸೋನಿ ಆಚಾರ್ಯ ಅವರ ಸಾರಥ್ಯದಲ್ಲಿ “ರಾಣಿ ಜೇನು” ಎಂಬ ರೊಮ್ಯಾಂಟಿಕ್ ವಿಡಿಯೋ ಬಿಡುಗಡೆಗೊಳಿಸಿದೆ.

 Sharesee more..
'ಆ ಒಂದು ಕನಸು' ಶೀರ್ಷಿಕೆ ಅನಾವರಣ

'ಆ ಒಂದು ಕನಸು' ಶೀರ್ಷಿಕೆ ಅನಾವರಣ

28 Nov 2020 | 9:56 PM

ಬೆಂಗಳೂರು, ನ 28 (ಯುಎನ್ಐ) ರಂಗು ಕ್ರಿಯೇಷನ್ಸ್ ಲಾಂಛನದಲ್ಲಿ ದಿಲೀಪ ಬಿ.ಎಂ ನಿರ್ಮಿಸುತ್ತಿರುವ ನೂತನ ಚಿತ್ರ 'ಆ ಒಂದು ಕನಸು' ಚಿತ್ರದ ಶೀರ್ಷಿಕೆಯನ್ನು ಹಿರಿಯ ನಟರಾದ ಎಸ್ ಉಮೇಶ್ , ಹೊನ್ನವಳ್ಳಿ ಕೃಷ್ಣ ಹಾಗೂ ಹಿರಿಯ ಕಂಠದಾನ ಕಲಾವಿದೆ ಆಶಾ ಬಿಡುಗಡೆ ಮಾಡಿದ್ದಾರೆ.

 Sharesee more..
“ಆಕ್ಟ್-1978” ಬೆಂಗಳೂರು ಡಿಸಿಪಿ ನಿಶಾ ಜೇಮ್ಸ್ ಮೆಚ್ಚುಗೆ

“ಆಕ್ಟ್-1978” ಬೆಂಗಳೂರು ಡಿಸಿಪಿ ನಿಶಾ ಜೇಮ್ಸ್ ಮೆಚ್ಚುಗೆ

28 Nov 2020 | 9:52 PM

ಬೆಂಗಳೂರು, ನ 28 (ಯುಎನ್‍ಐ) ಲಾಕ್ ಡೌನ್ ಬಳಿಕ ಬಿಡುಗಡೆಯಾದ ದಕ್ಷಿಣದ ಮೊದಲ ನೂತನ ಚಿತ್ರ ಎಂಬ ಹೆಗ್ಗಳಿಗೆ ಪಾತ್ರವಾಗಿರುವ “ಆಕ್ಟ್ -1978” ಚಿತ್ರಕ್ಕೆ ಡಿಸಿಪಿ ನಿಶಾ ಜೇಮ್ಸ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

 Sharesee more..
ಆಲ್ಬಂ ಹಾಡಿಗೆ ಹೆಜ್ಜೆ ಹಾಕಲಿದ್ದಾರೆ

ಆಲ್ಬಂ ಹಾಡಿಗೆ ಹೆಜ್ಜೆ ಹಾಕಲಿದ್ದಾರೆ "ಜೊತೆ ಜೊತೆಯಲಿ" ಮೇಘಾ ಶೆಟ್ಟಿ

28 Nov 2020 | 9:49 PM

ಬೆಂಗಳೂರು, ನ 28 (ಯುಎನ್‍ಐ) ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಜನಪ್ರಿಯತೆ ಪಡೆದು, ಗೋಲ್ಡನ್ ಸ್ಟಾರ್ ಗಣೇಶ್ ಚಿತ್ರವೊಂದಕ್ಕೆ ನಾಯಕಿಯಾಗಿ ಆಯ್ಕೆಯಾಗಿರುವ ನಟಿ ಮೇಘಾ ಶೆಟ್ಟಿ, ಇದೀಗ ಆಲ್ಬಂ ಹಾಡೊಂದಕ್ಕೆ ಹೆಜ್ಜೆ ಹಾಕಲಿದ್ದಾರೆ.

 Sharesee more..