Saturday, Oct 24 2020 | Time 20:00 Hrs(IST)
  • ಉಪ ಚುನಾವಣೆ, ವಿಧಾನ ಪರಿಷತ್ ಚುನಾವಣೆಗಳಲ್ಲಿ ಬಿಜೆಪಿಗೆ ಗೆಲುವು: ಮುಖ್ಯಮಂತ್ರಿ ಯಡಿಯೂರಪ್ಪ ವಿಶ್ವಾಸ
  • ದೇಶಾದ್ಯಂತ ಉಚಿತ ಕೋವಿಡ್‌ ಲಸಿಕೆ ದೊರೆಯಬೇಕು; ಕೇಜ್ರೀವಾಲ್‌
  • ವರುಣ್ ಚಕ್ರವರ್ತಿ ಮಾರಕ ಬೌಲಿಂಗ್ ಗೆ ತತ್ತರಿಸಿದ ಡೆಲ್ಲಿ
  • ಕೆಡುಕಿನ ವಿರುದ್ದ ಒಳಿತು ಸಾಧಿಸಿದ ವಿಜಯದ ಸಂಕೇತ ದಸರಾ- ಉಪರಾಷ್ಟಪತಿ
  • ತ್ರಿವರ್ಣ ಧ್ವಜ; ಮೆಹಬೂಬಾ ಮುಫ್ತಿ ಹೇಳಿಕೆಗೆ ಕಾಂಗ್ರೆಸ್, ಬಿಜೆಪಿ ಆಕ್ರೋಶ
  • ನಾಲ್ಕು ಕೈ, ಕಾಲುಗಳ ಬಾಲಕನಿಗೆ, ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ ಸರ್ಕಾರಿ ಆಸ್ಪತ್ರೆ ವೈದ್ಯರು
  • ಡೆಲ್ಲಿಗೆ 195 ರನ್ ಗುರಿ ನೀಡಿದ ಕೆಕೆಆರ್
  • ಕೋವಿಡ್-19 ಸ್ಥಿತಿಗತಿಗೆ ನಿರ್ಣಾಯಕವಾಗಲಿದೆ ಮುಂದಿನ ಎರಡು ತಿಂಗಳು
  • ತಿರುಪತಿ ತಿಮ್ಮಪ್ಪ ದೇಗಲ ಪ್ರಸಾದ ತಯಾರಿಕ ಕೇಂದ್ರದಲ್ಲಿ ಸ್ಪೋಟ- ಐವರು ಕಾರ್ಮಿಕರಿಗೆ ಗಾಯ
  • ಆದಾಯ ತೆರಿಗೆ ವಿವರ ಸಲ್ಲಿಕೆಗೆ ಡಿ 31 ರವರೆಗೆ ಗಡುವು ವಿಸ್ತರಣೆ
  • ಗುಜರಾತ್‌; ಕಿಸಾನ್‌ ಸೂರ್ಯೋದಯ ಸೇರಿ ಮೂರು ಯೋಜನೆಗೆ ಪ್ರಧಾನಿ ಮೋದಿ ಚಾಲನೆ
  • ಕೆಲವೆಡೆ ಆಯುಧ ಪೂಜೆ, ಇನ್ನೂ ಕೆಲವೆಡೆ ಸಿದ್ಧತೆ: ಕಾರ್ಮಿಕರಿಗಿಲ್ಲ ಬೋನಸ್ !!!
  • ಓಲಾ, ಉಬರ್, ಆಟೋ ಚಾಲಕ ಸಂಘದ ಪದಾಧಿಕಾರಿಗಳು ಕಾಂಗ್ರೆಸ್ ಗೆ ಸೇರ್ಪಡೆ
  • ಸೇನಾ ಕ್ಯಾಂಟೀನ್ ಗಳಲ್ಲಿ ಇನ್ನೂ ವಿದೇಶಿ ಮದ್ಯ ಲಭ್ಯವಿರುವುದಿಲ್ಲ
  • ಜಾತಿ ಒಡೆದು ರಾಜಕೀಯ ಮಾಡುವ ಅಗತ್ಯ ಇಲ್ಲ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್
Karnataka Share

ದುಂದು ವೆಚ್ಚದ ದಸರಾ ಇಲ್ಲ; ಸಚಿವ ಎಸ್.ಟಿ.ಸೋಮಶೇಖರ್

ಮೈಸೂರು, ಸೆ.18 (ಯುಎನ್ಐ) ಮೈಸೂರು ದಸರಾವನ್ನು ಸರಳವಾಗಿ ಆಚರಿಸಲು ಮುಖ್ಯಮಂತ್ರಿಗಳ ಸೂಚನೆ ಇದೆ. ಈ ಹಿನ್ನೆಲೆಯಲ್ಲಿ ದುಂದು ವೆಚ್ಚದ ಪ್ರಶ್ನೆಯೇ ಇಲ್ಲ. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.
ದಸರಾ ಹತ್ತು ದಿನದ ಕಾರ್ಯಕ್ರಮವಾಗಿದೆ. ಹಾಗಾಗಿ ಖರ್ಚು ವೆಚ್ಚಗಳು ಇರುತ್ತವೆ. ಇಷ್ಟಾದರೂ ಸಭೆಯಲ್ಲಿ ಸರಳ ಆಚರಣೆಗೆ ಒತ್ತು ನೀಡಿ ತೀರ್ಮಾನ ಕೈಗೊಳ್ಳುತ್ತೇವೆ. 5 ಕೋಟಿ ರೂ. ವನ್ನು ಮೂಡಾದವರು ಬಿಡುಗಡೆ ಮಾಡಿದ್ದಾರೆ. ಕಳೆದ ಬಾರಿಯ ದಸರಾ ಅನುದಾನದಲ್ಲೇ 8 ಕೋಟಿ ರೂ. ಅನುದಾನ ಬಾಕಿ ಇದೆ ಎಂದು ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಇಂದು ಸಂಜೆ ದಸರಾ ಕಮಿಟಿಗಳಿಗೆ ಸಂಬಂಧಪಟ್ಟಂತೆ ಸಭೆ ಕರೆಯಲಾಗಿದೆ. ಆಶಾ ಕಾರ್ಯಕರ್ತೆಯರು, ಪೌರಕಾರ್ಮಿಕರು ಸೇರಿದಂತೆ ಆಹ್ವಾನಿತರಾಗುತ್ತಿರುವ ಆಯಾ ಇಲಾಖೆಯ ತಲಾ ಒಬ್ಬರು ಉದ್ಘಾಟಕರ ಹೆಸರನ್ನು ಆಯ್ಕೆ ಮಾಡಿ ಕಳುಹಿಸುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಮೈಸೂರು ನಗರಕ್ಕೆ ಎಲ್ ಇ ಡಿ ಬೀದಿ ದೀಪ ಅಳವಡಿಸುವ ಸಂಬಂಧ ಬಹುವರ್ಷಗಳ ಬೇಡಿಕೆ ಇದೆ ಎಂದು ಶಾಸಕರಾದ ಎಲ್. ನಾಗೇಂದ್ರ , ಎಸ್.ಎ. ರಾಮದಾಸ್, ಸಂಸದರಾದ ಪ್ರತಾಪ್ ಸಿಂಹ ಸೇರಿದಂತೆ ಹಲವು ನಾಯಕರು ನನ್ನ ಬಳಿ ಚರ್ಚೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಸಂಪುಟದಲ್ಲಿ ಒಪ್ಪಿಗೆ ಪಡೆದು ಅನುಮೋದನೆ ಕೊಡಿಸಿದ್ದೇನೆ. ಇನ್ನು ಮುಂದೂ ಸಹ ಮೈಸೂರು ಅಭಿವೃದ್ಧಿಗೆ ಬೇಕಾದ ಕೆಲಸ ಹಾಗೂ ಸಹಕಾರವನ್ನು ಖಂಡಿತವಾಗಿ ಕೊಡುತ್ತೇನೆ ಎಂದು ಸಚಿವರು ತಿಳಿಸಿದರು.
15,300 ಕೋಟಿ ರೂ.ಕೊಡಲು ಈಗಾಗಲೇ ಚಾಲನೆ ಕೊಟ್ಟಿದ್ದೇವೆ. ಇದರಲ್ಲಿ ಈಗಾಗಲೇ 12 ಲಕ್ಷ ರೈತರಿಗೆ 7 ಸಾವಿರ ಕೋಟಿಗೂ ಅಧಿಕ ಸಾಲವನ್ನು ನೀಡಿದ್ದೇವೆ. ಇನ್ನು ಆರ್ಥಿಕ ಸ್ಪಂದನ ಕಾರ್ಯಕ್ರಮದಡಿ 39 ಸಾವಿರ ಕೋಟಿ ರೂಪಾಯಿ ಸಾಲವನ್ನು ರೈತರು, ಅತಿ ಸಣ್ಣ ಉದ್ಯಮಿಗಳು ಸೇರಿದಂತೆ ಹಲವು ಕ್ಷೇತ್ರಗಳಿಗೆ ನೀಡಲಾಗುತ್ತಿದ್ದು, 4 ವಿಭಾಗಳ ಮೂಲಕ ಸಾಲ ನೀಡಲಾಗುತ್ತದೆ. ಈಗಾಗಲೇ ಬೆಂಗಳೂರು ವಿಭಾಗದಲ್ಲಿ ಮೊನ್ನೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಚಾಲನೆ ನೀಡಲಾಗಿದ್ದು, ಉಳಿದಂತೆ ಮೈಸೂರು, ಕಲಬುರಗಿ ಹಾಗೂ ಬೆಳಗಾವಿ ವಿಭಾಗಗಳಲ್ಲಿ ಶೀಘ್ರವಾಗಿ ಪ್ರಾ ರಂಭಿಸಲಾಗುವುದು ಎಂದು ಸಚಿವ ಸೋಮಶೇಖರ್ ತಿಳಿಸಿದರು.
ಸಚಿವ ಸ್ಥಾನಕ್ಕೆ ಆಕಾಂಕ್ಷಿಗಳನ್ನು ಆಯ್ಕೆ ಮಾಡುವ ಪರಮಾಧಿಕಾರ ಮುಖ್ಯಮಂತ್ರಿಗಳದ್ದು, ಹೀಗಾಗಿ ಈ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಸಚಿವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.
ಯುಎನ್ಐ ಎಸ್ಎಂಆರ್ ಎಎಚ್ 1056
More News
ಜಾತಿ ಒಡೆದು ರಾಜಕೀಯ ಮಾಡುವ ಅಗತ್ಯ ಇಲ್ಲ: ಕೆಪಿಸಿಸಿ ಅಧ್ಯಕ್ಷ  ಡಿ ಕೆ ಶಿವಕುಮಾರ್

ಜಾತಿ ಒಡೆದು ರಾಜಕೀಯ ಮಾಡುವ ಅಗತ್ಯ ಇಲ್ಲ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್

24 Oct 2020 | 5:33 PM

ಬೆಂಗಳೂರು,ಅ 24(ಯುಎನ್ಐ) ನಮಗೆ ಜಾತಿಯನ್ನು ಒಡೆದು ರಾಜಕೀಯ ಮಾಡುವ ಅಗತ್ಯ ಇಲ್ಲ. ತನ್ನನ್ನು ಬೆಳೆಸಿದ ಪಕ್ಷಕ್ಕೆ ಮೋಸ ಮಾಡಿದ್ದು,ಹೆತ್ತ ತಾಯಿಗೆ ದ್ರೋಹ ಬಗೆದಿದ್ದಾರೆ.ಇದಕ್ಕೆ ಜನ ತಕ್ಕ ಉತ್ತರ ನೀಡಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

 Sharesee more..