Monday, Jan 20 2020 | Time 19:50 Hrs(IST)
 • 175 ಕಿ ಮೀ ವೇಗವಾಗಿ ಬೌಲಿಂಗ್ ಮಾಡಿದ 17ರ ಪ್ರಾಯದ ವೇಗಿ !
 • ಆಸ್ಟ್ರೇಲಿಯಾ ಓಪನ್: ಸೆರೇನಾ, ಜೊಕೊವಿಚ್, ಫೆಡರರ್ ಶುಭಾರಂಭ
 • ಪಕ್ಷ ಅಧಿಕಾರದಲ್ಲಿರದ ರಾಜ್ಯಗಳಲ್ಲಿ ಚುಕ್ಕಾಣಿ ಹಿಡಿಯಲು ತೀವ್ರ ಪ್ರಯತ್ನ- ಜೆ ಪಿ ನಡ್ಡಾ
 • ಕೆಪಿಸಿಸಿ ಅಧ್ಯಕ್ಷರ ಶೀಘ್ರ ನೇಮಕಾತಿಗೆ ಹೈಕಮಾಂಡ್‍ಗೆ ಪತ್ರ: ಕಾರ್ಯಾಧ್ಯಕ್ಷರ ನೇಮಕಕ್ಕೆ ಪರಮೇಶ್ವರ್ ಆಕ್ಷೇಪ
 • ಸರ್ಕಾರ ಮತ್ತು ಪೊಲೀಸರು ಸೇರಿ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ :ಎಚ್ ಡಿ ಕುಮಾರಸ್ವಾಮಿ ಗಂಭೀರ ಆರೋಪ
 • ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರಿಗೆ ನಳಿನ್ ಕುಮಾರ್ ಕಟೀಲ್ ಅಭಿನಂದನೆ
 • 1 12 ಕೋಟಿ ಅಂಕಪಟ್ಟಿ ಡಿಜಿಟಲ್ ಲಾಕರ್ ನಲ್ಲಿ : ಸುರೇಶ್ ಕುಮಾರ್
 • ಏಕದಿನ ಶ್ರೇಯಾಂಕ: ಅಗ್ರ ಸ್ಥಾನದಲ್ಲೇ ಮುಂದುವರಿದ ವಿರಾಟ್, ಬುಮ್ರಾ
 • ನಡ್ಡಾ ಯಾವುದೇ ಜವಾಬ್ದಾರಿಯನ್ನು ನಿಷ್ಠೆಯಿಂದ ನಿಭಾಯಿಸುತ್ತಾರೆ- ಮೋದಿ
 • ಸಾವಿನ ದವಡೆಯಲ್ಲಿ ಮಾಜಿ ಭೂಗತ ದೊರೆ ಮುತ್ತಪ್ಪ ರೈ :ಉಳಿದ ಬದಕು ಸಮಾಜಸೇವೆಗಾಗಿ ಮೀಸಲು
 • ಕೇಂದ್ರ ಬಜೆಟ್ ಹಿನ್ನೆಲೆ; ಹಣಕಾಸು ಸಚಿವಾಲಯದಿಂದ 'ಹಲ್ವಾ ' ಸಮಾರಂಭ
 • ಪರೀಕ್ಷಾ ಪೇ ಚೆರ್ಚಾ ವಿದ್ಯಾರ್ಥಿಗಳಿಗೆ ಪ್ರೇರಣೆ: ಸುರೇಶ್ ಕುಮಾರ್
 • ಅನಾರೋಗ್ಯ ಹಿನ್ನೆಲೆ: ಅಥ್ಲೆಟಿಕ್ ಸಂಸ್ಥೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಮುತ್ತಪ್ಪ ರೈ
 • ನಿಯಮಬಾಹಿರವಾಗಿ ಮಕ್ಕಳ ಹಕ್ಕುಗಳ ಆಯೋಗಕ್ಕೆ ತಾರಾ ಅನುರಾಧ ನೇಮಕಾತಿಗೆ ಯಡಿಯೂರಪ್ಪ ಶಿಫಾರಸ್ಸು
 • ಟಾಲಿವುಡ್ ನಲ್ಲಿ ಅನನ್ಯ ಪಾಂಡೆ
Karnataka Share

ನಾಲ್ಕೈದು ದಿನಗಳಲ್ಲಿ ಬಿಜೆಪಿ ಸರ್ಕಾರಅಸ್ಥಿತ್ವಕ್ಕೆ : ಬಿಎಸ್ ಯಡಿಯೂರಪ್ಪ ವಿಶ್ವಾಸ

ನಾಲ್ಕೈದು ದಿನಗಳಲ್ಲಿ ಬಿಜೆಪಿ ಸರ್ಕಾರಅಸ್ಥಿತ್ವಕ್ಕೆ : ಬಿಎಸ್ ಯಡಿಯೂರಪ್ಪ ವಿಶ್ವಾಸ
ನಾಲ್ಕೈದು ದಿನಗಳಲ್ಲಿ ಬಿಜೆಪಿ ಸರ್ಕಾರಅಸ್ಥಿತ್ವಕ್ಕೆ : ಬಿಎಸ್ ಯಡಿಯೂರಪ್ಪ ವಿಶ್ವಾಸ

ಬೆಂಗಳೂರು,ಜು 15(ಯುಎನ್ಐ) ಮುಂದಿನ ನಾಲ್ಕು- ಐದು ದಿನಗಳಲ್ಲಿ ನೂರಕ್ಕೆ ನೂರರಷ್ಟು ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ

ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಮೈತ್ರಿ ಸರ್ಕಾರ ಬದಲಾಗಬೇಕು ಎನ್ನುವುದು ಆರೂವರೆ ಕೋಟಿ ಜನರ ಅಪೇಕ್ಷೆಯಾಗಿದೆ ಅದು ಗುರುವಾರ ನೂರಕ್ಕೆ ನೂರಷ್ಟು ಈಡೇರಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಗುರುವಾರ ಪತನಗೊಳ್ಳಲು ಮುಹೂರ್ತ ನಿಗದಿಯಾಗಿದೆ. ಆ ನಂತರ ಬಿಜೆಪಿ ಸರ್ಕಾರ ರಚನೆಯಾಗಲಿದೆ. ಮುಂದಿನ ಮೂರು ದಿನದಲ್ಲಿ ಅತೃಪ್ತ ಶಾಸಕರು ಮತ್ತೆ ಮೈತ್ರಿ ಸರ್ಕಾರಕ್ಕೆ ಬೆಂಬಲಿಸುವುದು ಅಸಾಧ್ಯ. ಅದೂ ಸಹ ಒಬ್ಬರು ಇಬ್ಬರಲ್ಲ ಸರ್ಕಾರ ಉಳಿಯಬೇಕಾದರೆ ಐದರಿಂದ ಆರು ಶಾಸಕರು ವಾಪಸ್ ಬರಬೇಕು ಇದು ಸಾಧ್ಯವಿಲ್ಲ ಎಂದು ಯಡಿಯೂರಪ್ಪ ಹೇಳಿದರು.ರಾಜ್ಯಕ್ಕೆ ಉತ್ತಮ ಆಡಳಿತ ನೀಡುವಂತಹ ಬಿಜೆಪಿ ಸರ್ಕಾರ ಬರುವುದು ನಿಶ್ಚಿತ. ಈ ಬಗ್ಗೆ ನಾಡಿನ ಜನತೆ ಹಾಗೂ ಕಾರ್ಯಕರ್ತರಿಗೆ ಭರವಸೆ ನೀಡುತ್ತೇನೆ ಎಂದರು.

ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಯಾವುದೇ ಕಾರಣಕ್ಕೂ ವಿಶ್ವಾಸ ಮತ ಗೆಲ್ಲುವುದರಲ್ಲಿ ಯಶಸ್ವಿಯಾಗುವುದಿಲ್ಲ. ಇದು ಅವರಿಗೂ ತಿಳಿದಿದೆ. ಗುರುವಾರ ಮುಖ್ಯಮಂತ್ರಿ ಕೇವಲ ವಿದಾಯ ಭಾಷಣ ಮಾಡಿ ಹೋಗಬಹುದು ಎಂದು ಊಹಿಸಿದ್ದೇನೆ. ಕಾದು ನೋಡಣ. ಆದರೆ ನಾಲ್ಕೈದು ದಿನಗಳಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುವುದರಲ್ಲಿ ಎರಡು ಮಾತಿಲ್ಲ ಎಂದು ಭರವಸೆ ವ್ಯಕ್ತಪಡಿಸಿದರು.

ನಮ್ಮೆಲ್ಲ ಶಾಸಕರು ಇಂದು ರಾತ್ರಿ ತಮ್ಮೊಂದಿಗೆ ಉಳಿಯುವಂತೆ ಮನವಿ ಮಾಡಿದ್ದಾರೆ. ಹೀಗಾಗಿ ಗೋವಿಂದ ಕಾರಜೋಳ, ಮಾಧು ಸ್ವಾಮಿ ಅವರೊಂದಿಗೆ ರೆಸಾರ್ಟಿಗೆ ಹೋಗುತ್ತಿದ್ದೇನೆ. ಆರೂವರೆ ಕೋಟಿ ಕನ್ನಡಿಗರು ಬಿಜೆಪಿಗೆ ಆಶೀರ್ವಾದ ಮಾಡಿದ್ದಾರೆ. ಹೀಗಾಗಿ ಮೈತ್ರಿ ಸರ್ಕಾರ ಬದಲಾಗಬೇಕಿದೆ. ಅವರ ಆಸೆಯಂತೆ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಮತ್ತೊಮ್ಮೆ ಹೇಳಿದರು.

ವಿಧಾನಸಭಾ ಕಲಾಪದ ಬಳಿಕ ರಮಡಾ ಹೊಟೇಲಿಗೆ ಭೇಟಿ ನೀಡಿ ಬಿಜೆಪಿ ಶಾಸಕರ ಜೊತೆ ಚರ್ಚಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾನಾಡಿ, ಗುರುವಾರ ವಿಶ್ವಾಸಮತ ಯಾಚನೆ ಮಾಡುವುದಾಗಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಆದರೆ ಅವರಿಗೆ ಬಹುಮತ ಇಲ್ಲ ಎಂಬುದು ಗುರುವಾರ ಸ್ಪಷ್ಟವಾಗಲಿದೆ. ಅಲ್ಲಿಯವರೆಗೆ ಕಾದು ನೋಡಿ ಎಂದು ಹೇಳಿದರು.ರೆಸಾರ್ಟ್‌ನಲ್ಲಿರುವ ಶಾಸಕರ ಜೊತೆ ಸಮಾಲೋಚನೆ ನಡೆಸಲಾಗುವುದು. ಬಿಜೆಪಿಗೆ ರಿವರ್ಸ್‌ ಆಪರೇಷನ್‌ ಭಯವೇ ಇಲ್ಲ. ಸೋಮವಾರ ರಾತ್ರಿ ಶಾಸಕರೊಂದಿಗೆ ರೆಸಾರ್ಟ್‌ನಲ್ಲಿ ಕಳೆಯುತ್ತೇನೆ ಎಂದು ಯಡಿಯೂರಪ್ಪ ಹೇಳಿದರು.ಯುಎನ್ಐ ಎಸ್ಎಂಆರ್ ವಿಎನ್ 1813