Friday, Nov 15 2019 | Time 12:32 Hrs(IST)
  • ಜಾರ್ಖಂಡ್ ಸಂಸ್ಥಾಪನಾ ದಿನ, ರಾಷ್ಟ್ರಪತಿ ,ಪ್ರಧಾನಿ ಶುಭ ಹಾರೈಕೆ
  • ಕ್ಯಾನಿಫೋರ್ನಿಯಾದ ಶಾಲೆಯಲ್ಲಿ ಗುಂಡಿನ ದಾಳಿ: ಇಬ್ಬರು ವಿದ್ಯಾರ್ಥಿಗಳ ಸಾವು
  • ಕನಕದಾಸರ ಜಯಂತಿಗೆ ಮುಖ್ಯಮಂತ್ರಿ ಸೇರಿದಂತೆ ಗಣ್ಯರ ಶುಭಾಶಯ
  • ಕನಕದಾಸರ ಜಯಂತಿಗೆ ಮುಖ್ಯಮಂತ್ರಿ ಸೇರಿದಂತೆ ಗಣ್ಯರ ಶುಭಾಶಯ
  • ಕುಲಭೂಷಣ್ ಜಾಧವ್ ಪ್ರಕರಣ: ಭಾರತದ ಜೊತೆ ಒಪ್ಪಂದವಿಲ್ಲ ಪಾಕ್ ಸ್ಪಷ್ಟಣೆ
  • ಅಮೆರಿಕದಲ್ಲೂ ಉಸಿರಾಟದ ತೊಂದರೆ: ಮೃತರ ಸಂಖ್ಯೆ 42ಕ್ಕೆ ಏರಿಕೆ
  • ಸಹಕಾರಿ ಬ್ಯಾಂಕ್‌ ಸಾಲ ಮನ್ನಾಗೆ 1 ಸಾವಿರ ಕೋಟಿ : ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ
Karnataka Share

ಪತ್ರಕರ್ತರಿಗೆ ನಿವೇಶನ ನೀಡಲು ತಕ್ಷಣ ಕ್ರಮ: ಸಚಿವ ಆರ್.ಅಶೋಕ್ ಭರವಸೆ

ಪತ್ರಕರ್ತರಿಗೆ ನಿವೇಶನ ನೀಡಲು ತಕ್ಷಣ ಕ್ರಮ: ಸಚಿವ ಆರ್.ಅಶೋಕ್ ಭರವಸೆ
ಪತ್ರಕರ್ತರಿಗೆ ನಿವೇಶನ ನೀಡಲು ತಕ್ಷಣ ಕ್ರಮ: ಸಚಿವ ಆರ್.ಅಶೋಕ್ ಭರವಸೆ

ಮಂಗಳೂರು, ಅ.21 (ಯುಎನ್ಐ) ಪತ್ರಕರ್ತರಿಗೆ ನಿವೇಶನ ನೀಡಲು ಸರಕಾರ ತಕ್ಷಣ ಕ್ರ‌ಮ ಕೈಗೊಳ್ಳಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಭರವಸೆ ನೀಡಿದ್ದಾರೆ.

ಪತ್ರಕರ್ತರಿಗೆ ನಿವೇಶನ ಒಸಗಿಸುವುದಕ್ಕೆ ಸಂಬಂಧಿಸಿದಂತೆ ಕಂದಾಯ ಸಚಿವ ಆರ್.ಅಶೋಕ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿದ ಸಚಿವರು ಪತ್ರಕರ್ತರಿಗೆ ನಿವೇಶನ ನೀಡುವ ಕುರಿತು ಬೆಂಗಳೂರಿನಿಂದಲೂ ಮನವಿ ಬಂದಿದ್ದು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಾಸಕರಾದ ಸಂಜೀವ ಮಠಂದೂರು, ರಾಜೇಶ್ ನಾಯ್ಕ್ , ವೇದವ್ಯಾಸ್ ಕಾಮತ್, ಹರೀಶ್ ಪೂಂಜ, ಪತ್ರಕರ್ತರ ಸಂಘದ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಭಾಸ್ಕರ್ ರೈ ಕಟ್ಟ ಉಪಸ್ಥಿತರಿದ್ದರು.

ಯುಎನ್ಐ ಎಎಚ್ 2037