Friday, Nov 15 2019 | Time 12:32 Hrs(IST)
  • ಜಾರ್ಖಂಡ್ ಸಂಸ್ಥಾಪನಾ ದಿನ, ರಾಷ್ಟ್ರಪತಿ ,ಪ್ರಧಾನಿ ಶುಭ ಹಾರೈಕೆ
  • ಕ್ಯಾನಿಫೋರ್ನಿಯಾದ ಶಾಲೆಯಲ್ಲಿ ಗುಂಡಿನ ದಾಳಿ: ಇಬ್ಬರು ವಿದ್ಯಾರ್ಥಿಗಳ ಸಾವು
  • ಕನಕದಾಸರ ಜಯಂತಿಗೆ ಮುಖ್ಯಮಂತ್ರಿ ಸೇರಿದಂತೆ ಗಣ್ಯರ ಶುಭಾಶಯ
  • ಕನಕದಾಸರ ಜಯಂತಿಗೆ ಮುಖ್ಯಮಂತ್ರಿ ಸೇರಿದಂತೆ ಗಣ್ಯರ ಶುಭಾಶಯ
  • ಕುಲಭೂಷಣ್ ಜಾಧವ್ ಪ್ರಕರಣ: ಭಾರತದ ಜೊತೆ ಒಪ್ಪಂದವಿಲ್ಲ ಪಾಕ್ ಸ್ಪಷ್ಟಣೆ
  • ಅಮೆರಿಕದಲ್ಲೂ ಉಸಿರಾಟದ ತೊಂದರೆ: ಮೃತರ ಸಂಖ್ಯೆ 42ಕ್ಕೆ ಏರಿಕೆ
  • ಸಹಕಾರಿ ಬ್ಯಾಂಕ್‌ ಸಾಲ ಮನ್ನಾಗೆ 1 ಸಾವಿರ ಕೋಟಿ : ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ
Karnataka Share

ಪ.ಜಾತಿ,ಪಂಗಡದ ಮೀಸಲು ಹೆಚ್ಚಳ ; ನ್ಯಾ.ನಾಗಮೋಹನ್ ದಾಸ್ ಆಯೋಗದ ಗಡುವು ವಿಸ್ತರಣೆ

ಬೆಂಗಳೂರು, ಅ 21 (ಯುಎನ್ಐ) ಪರಿಶಿಷ್ಟ ಜಾತಿ ಮತ್ತು ಪಂಗಡದವರ ಮೀಸಲು ಹೆಚ್ಚಿಸುವ ಕುರಿತು ಸಮಗ್ರ ಅಧ್ಯಯನ ನಡೆಸಲು ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ಅಧ್ಯಕ್ಷತೆಯಲ್ಲಿ ಈ ಹಿಂದೆ ರಚನೆಯಾಗಿದ್ದ ಏಕ ಸದಸ್ಯ ಆಯೋಗವನ್ನು ಮುಂದುವರಿಸಿ ಸರ್ಕಾರ ಆದೇಶ ಹೊರಡಿಸಿದೆ.

ಸಮ್ಮಿಶ್ರ ಸರ್ಕಾರ 2019ರ ಜುಲೈ 22ರಂದು ನ್ಯಾಯಮೂರ್ತಿ ನಾಗಮೋಹನ್ ದಾಸ್ ಅಧ್ಯಕ್ಷತೆಯಲ್ಲಿ ಏಕಸದಸ್ಯ ಆಯೋಗ ರಚಿಸಿ ಆದೇಶ ಹೊರಡಿಸಿತ್ತು. ಆದರೆ, ಯಡಿಯೂರಪ್ಪ ಮುಖ್ಯಮಂತ್ರಿಯಾದ ನಂತರ ಎಲ್ಲಾ ಆಯೋಗ ಮತ್ತು ಅಕಾಡೆಮಿಗಳ ನೇಮಕವನ್ನು ರದ್ದುಗೊಳಿಸಿತ್ತು.

ಈ ಹಿನ್ನೆಲೆಯಲ್ಲಿ ನಾಗಮೋಹನ್ ದಾಸ್ ಆಯೋಗವನ್ನು ರದ್ದಾಗಿತ್ತು. ಮರು ಆದೇಶ ಮಾಡಿದಲ್ಲಿ ಮಾತ್ರ ಕಾರ್ಯ ಮುಂದುವರಿಸುವುದಾಗಿ ದಾಸ್ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಅನುಮತಿ ಮೇರೆಗೆ ಸಮಾಜ ಕಲ್ಯಾಣ ಇಲಾಖೆ ಮರು ಆದೇಶ ಮಾಡಿದೆ. ಅಧ್ಯಯನ ನಡೆಸಿ ಎರಡು ತಿಂಗಳಲ್ಲಿ ವರದಿ ನೀಡುವಂತೆ ಆದೇಶದಲ್ಲಿ ತಿಳಿಸಲಾಗಿದೆ.

ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಕ್ರಮವಾಗಿ ಶೇ.2 ಮತ್ತು ಶೇ. 4ರಷ್ಟು ಮೀಸಲು ಹೆಚ್ಚಿಸುವ ಕುರಿತು ಅಧ್ಯಯನ ನಡೆಸಲು ಆಯೋಗ ರಚಿಸಲಾಗಿತ್ತು.

ಯುಎನ್ಐ ಎಸ್ಎಚ್ 2147