NationalPosted at: Nov 22 2019 11:35PM Shareಪ್ಲಾಸ್ಟಿಕ್ ಪಾರ್ಕ್ ಗೆ ಕೇಂದ್ರದ ಸಮ್ಮತಿ : ಬಾಬೂಲ್ ಸುಪ್ರಿಯೋನವದೆಹಲಿ, ನ 22 (ಯುಎನ್ಐ) ಏಕಬಳಕೆಯ ಪ್ಲಾಸ್ಟಿಕ್ ನಿಷೇಧಕ್ಕಾಗಿ ಪ್ಲಾಸ್ಟಿಕ್ ಪಾರ್ಕ ರೂಪಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆಯಲ್ಲದೇ ಪ್ಲಾಸ್ಟಿಕ್ ಬಳಕೆ ನಿಯಂತ್ರಣಕ್ಕೆ ಕೇಂದ್ರ ಪರಿಸರ ಸಚಿವಾಲಯ ಎಲ್ಲ ಸಚಿವಾಲಯ ಹಾಗೂ ರಾಜ್ಯಗಳಿಗೆ ಹೊಸ ಮಾರ್ಗದರ್ಶಿ ಸೂತ್ರಗಳನ್ನು ಪ್ರಕಟಿಸಿದೆ. ಲೋಕಸಭೆಯಲ್ಲಿ ಶುಕ್ರವಾರ ಪ್ರಶ್ನೋತ್ತರ ಕಲಾಪದಲ್ಲಿ ಉತ್ತರಿಸಿದ ಪರಿಸರ ಖಾತೆ ರಾಜ್ಯ ಸಚಿವ ಬಬೂಲ್ ಸುಪ್ರಿಯೋ, ಏಕಬಳಕೆ ಪ್ಲಾಸ್ಟಿಕ್ ಬಳಕೆ ಮಾಡುವವರ ವಿರುದ್ದ ರಾಜ್ಯ ಸರ್ಕಾರಗಳು ಯಾವ ಕ್ರಮಕೈಗೊಳ್ಳಬೇಕು ಎಂಬ ಬಗ್ಗೆ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ ಎಂದರು. ಪ್ಲಾಸ್ಟಿಕ್ ಮುಕ್ತ ಭಾರತ ಗುರಿ ಸಾಕಾರಕ್ಕೆ, ದೇಶದ ಆರು ಕಡೆಗಳಲ್ಲಿ ಪ್ಲಾಸ್ಟಿಕ್ ಪಾರ್ಕ್ಗಳನ್ನು ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿದೆ. ಪರಿಸರ ಸ್ನೇಹಿ ಪಾರ್ಕ್ಗಳನ್ನು ತಮಿಳುನಾಡು, ಜಾರ್ಖಂಡ್, ಓಡಿಶಾ, ಮಧ್ಯಪ್ರದೇಶ ಮತ್ತು ಅಸ್ಸಾಂನಲ್ಲಿ ಸ್ಥಾಪಿಸಲು ನಿರ್ಧರಿಸಲಾಗಿದೆ. ಯುಎನ್ಐ ಜಿಎಸ್ಆರ್ 2332