Friday, Feb 28 2020 | Time 11:05 Hrs(IST)
 • ರೈಲಿಗೆ ತಲೆಕೊಟ್ಟು ಪ್ರಿಯಕರ ಆತ್ಮಹತ್ಯೆ
 • ರವಿಚಂದ್ರನ್ ಅಶ್ವಿನ್ ಬ್ಯಾಟಿಂಗ್ ಸುಧಾರಣೆಯಾಗಬೇಕು: ರವಿಶಾಸ್ತ್ರಿ
 • ಪ್ರಕಾಶ್ ರಾಜ್ ಗೆ ಮದ್ರಾಸ್ ಹೈಕೋರ್ಟ್ ನಿಂದ ನೋಟೀಸ್ ಜಾರಿ
 • ಜಪಾನ್, ದಕ್ಷಿಣ ಕೋರಿಯಾ ಆಗಮನ ವೀಸಾ ಸೌಲಭ್ಯ ತಾತ್ಕಾಲಿಕ ರದ್ದು; ಭಾರತ ನಿರ್ಧಾರ
 • ಕೇರಳದ ಇಡುಕ್ಕಿಯಲ್ಲಿ ಲಘು ಭೂಕಂಪ
 • ಹತ್ತನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ; ಶಿಕ್ಷಕ ಪೊಲೀಸರ ವಶಕ್ಕೆ
 • ಖ್ಯಾತ ಇತಿಹಾಸಕಾರ ಷ ಷೆಟ್ಟರ್ ನಿಧನ
 • ದೀರ್ಘಾವಧಿ ಬಳಿಕ ರಾಷ್ಟ್ರೀಯ ಫುಟ್ಬಾಲ್ ಶಿಬಿರಕ್ಕೆ ಮರಳಿದ ಸಂದೇಶ್‌, ಜೆಜೆ
 • ದಕ್ಷಿಣ ಕೊರಿಯಾದಲ್ಲಿ ಮತ್ತೆ 256 ಕೊರೊನಾ ಸೋಂಕು ಪ್ರಕರಣ ದಾಖಲು
 • ಕೊರೊನಾ ಸೋಂಕು : ಹಜ್ ಯಾತ್ರೆಗೆ ನಿರ್ಬಂಧ
 • ಸಿರಿಯಾದಿಂದ ವೈಮಾನಿಕ ದಾಳಿ; 34 ಟರ್ಕಿ ಸೈನಿಕರು ಬಲಿ
 • ಚೀನಾಗೆ ಭಾರತದಿಂದ ವೈದ್ಯಕೀಯ ನೆರವು
 • ಮಹಾದಾಯಿ ನ್ಯಾಯಾಧಿರಣ ಅಧಿಸೂಚನೆ ಪ್ರಕಟ : ಯಡಿಯೂರಪ್ಪ ಹುಟ್ಟು ಹಬ್ಬಕ್ಕೆ ಕೇಂದ್ರದ ಭರ್ಜರಿ ಕೊಡುಗೆ
Karnataka Share

ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ನಳಿನ್ ಕುಮಾರ್ ಕಟೀಲ್ ಅಭಿನಂದನೆ

ಬೆಂಗಳೂರು, ಜ 20(ಯುಎನ್‍ಐ)_ ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಸೋಮವಾರ ಆಯ್ಕೆಯಾಗಿರುವ ಜೆ ಪಿ ನಡ್ಡಾ ಅವರಿಗೆ ಪಕ್ಷದ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಭಿನಂದಿಸಿದ್ದಾರೆ.
ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಜೆ.ಪಿ.ನಡ್ಡಾ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ನಂತರ ನಡೆದ ಪದಗ್ರಹಣ ಸಮಾರಂಭದಲ್ಲಿ ನಿಕಟಪೂರ್ವ ಅಧ್ಯಕ್ಷ ಅಮಿತ್ ಶಾ, ಪ್ರಧಾನಿ ನರೇಂದ್ರಮೋದಿ ಸೇರಿದಂತೆ ಪಕ್ಷದ ಹಿರಿಯ ಮುಖಂಡರು ಕೇಂದ್ರ ಸಚಿವರು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಜೆ ಪಿ ನಡ್ಡಾ ಅವರನ್ನು ಭೇಟಿ ಮಾಡಿದ ಕಟೀಲ್ ಅವರನ್ನು ಭೇಟಿ ಅಭಿನಂದಿಸಿದ್ದಾರೆ.
‘ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಪದಗ್ರಹಣ ಮಾಡಿರುವ ಜಗತ್ ಪ್ರಸಾದ್ ನಡ್ಡಾ ಅವರಿಗೆ ಅಭಿನಂದನೆಗಳು. ಪಕ್ಷದ ಅನೇಕ ಉನ್ನತ ಸ್ಥಾನಗಳಲ್ಲಿ ಕಾರ್ಯನಿರ್ವಹಿಸಿರುವ ಅವರು, ಕೇಂದ್ರ ಸಚಿವರಾಗಿ ಯಶಸ್ವಿಯಾಗಿ ತಮ್ಮ ಕಾರ್ಯವನ್ನು ನಿರ್ವಹಿಸಿದ್ದಾರೆ. ಪಕ್ಷಕ್ಕಾಗಿ ದಶಕಗಳ ಕಾಲ ಶ್ರಮಿಸಿರುವ ಅವರ ನಾಯಕತ್ವದಲ್ಲಿ ಪಕ್ಷದ ಸಂಘಟನೆಗಾಗಿ ನಾವೆಲ್ಲರೂ ಶ್ರಮಿಸಲಿದ್ದೇವೆ. ಅವರ ಮಾರ್ಗದರ್ಶನದಲ್ಲಿ ಪಕ್ಷವನ್ನು ಮತ್ತಷ್ಟು ಬಲಪಡಿಸಲು ನಾವೆಲ್ಲರೂ ಅವರೊಂದಿಗೆ ಸಾಗಲಿದ್ದೇವೆ.’ ಎಂದು ನಳಿನ್ ಕುಮಾರ್ ಕಟೀಲ್ ಪ್ರಕಟಣೆಯಲ್ಲಿ ಹೇಳಿದ್ದಾರೆ.
ಯುಎನ್‍ಐ ಎಸ್‍ಎಲ್‍ಎಸ್ 1756