SpecialPosted at: Dec 1 2020 2:39PM Shareಬಿಜೆಪಿ ಬಗ್ಗು ಬಡಿಯಲು ಬಂಗಾಳಿ ಹೆಮ್ಮೆ: ಮಮತಾ ಹೊಸ ದಾಳಕೋಲ್ಕತಾ , ಡಿ 1 (ಯುಎನ್ಐ) ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ರಣತಂತ್ರ ರೂಪಿಸುತ್ತಿರುವ ಟಿಎಂಸಿ, ನಾಯಕಿ , ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಿಜೆಪಿಯ ಹಿಂದುತ್ವ ತಂತ್ರಕ್ಕೆ ಪ್ರತಿತಂತ್ರವಾಗಿ 'ಬಂಗಾಳಿ ಹೆಮ್ಮೆ' ಎಂಬ ಹೊಸ ದಾಳ ಉರುಳಿಸಲು ನಿರ್ಧರಿಸಿದ್ದಾರೆ . ತಮ್ಮ ಪಕ್ಷದ ಬಗ್ಗೆ ಪಕ್ಷಕ್ಕೆ ನಿರ್ದಿಷ್ಟ ಸಿದ್ಧಾಂತವೇ ಇಲ್ಲ ಎಂದು ಆಡಿಕೊಳ್ಳುವವರ ಬಾಯಿ ಮುಚ್ಚಿಸಲು ಮುಂದಾದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಬಂಗಾಳ ಆಧಾರಿತ ರಾಷ್ಟ್ರೀಯವಾದವನನ್ನು ಮುಂದಿಟ್ಟು ಚುನಾವಣೆ ಎದುರಿಸಲು ಸಿದ್ಧರಾಗಿದ್ದಾರೆ.ಅದರಂತೆ ಈ ಸಿದ್ದಾಂತದ ಬಗ್ಗೆ ತಿಳಿಸಿದ ಟಿಎಂಸಿ ನಾಯಕ ಸಂಸದ ಸೌಗತಾ ರಾಯ್ 'ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಅಭಿವೃದ್ಧಿ ಜೊತೆ ಜೊತೆಗೆ ಬಂಗಾಳ ಹೆಮ್ಮೆ ಎಂಬುದೂ ನಮ್ಮ ಚುನಾವಣೆಯ ಮುಖ್ಯ ಧ್ಯೇಯವಾಗಿರಲಿದೆ. ಬಂಗಾಳ ಹೆಮ್ಮೆ ಎಂಬುದು ಕೇವಲ ಬಂಗಾಳಿಗಳ ಕುರಿತಾದದ್ದಲ್ಲ. ಇಲ್ಲಿನ ಮಣ್ಣಿನ ಮಕ್ಕಳ ಬದುಕು ಕುರಿತದ್ದು ಎಂದೂ ಅವರು ಸ್ಪಷ್ಟಪಡಿಸಿದರು. ಯುಎನ್ಐ ಕೆಎಎಸ್ ಆರ್ 1439