Monday, Aug 2 2021 | Time 15:30 Hrs(IST)
  • ಸಂಪುಟ : ಮೊದಲ ಹಂತದಲ್ಲಿ 15 ಸಚಿವರ ಪ್ರಮಾಣ ವಚನ ಸಂಭವ
  • ಕೊರೋನ ಅನಾಹುತ ತಡೆಗೆ ಸೂಕ್ತ ಕ್ರಮ ಕೈಗೊಳ್ಳಿ : ಸಿದ್ದರಾಮಯ್ಯ
  • ಮೇಲ್ಮನೆ ಸದಸ್ಯ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್ ರವಿಕುಮಾರ್ ಪರ ಮಠಾಧೀಶರು ವಕಾಲತ್ತು
  • ದೇಶದಲ್ಲಿ 41, 134 ಹೊಸ ಕೊರೋನ ಪ್ರಕರಣ: 422 ಜನರ ಸಾವು
  • ಅಫ್ಘಾನಿಸ್ತಾನದಲ್ಲಿ ನಿಲ್ಲದ ಕದನ, 20 ಮಂದಿ ಸಾವು
  • ಕ್ಯಾಲಿಫೋರ್ನಿಯಾದಲ್ಲಿ ಹೆಲಿಕಾಪ್ಟರ್ ಅಪಘಾತ: ನಾಲ್ವರ ಸಾವು
Karnataka Share

ಬಿಜೆಪಿ ಬಿಕ್ಕಟ್ಟು, ರಾಜ್ಯದಲ್ಲಿ ಸುರ್ಜೇವಾಲಾ ಬಿರುಸಿನ ಪ್ರವಾಸ

ಬಿಜೆಪಿ ಬಿಕ್ಕಟ್ಟು, ರಾಜ್ಯದಲ್ಲಿ ಸುರ್ಜೇವಾಲಾ ಬಿರುಸಿನ ಪ್ರವಾಸ
ಬಿಜೆಪಿ ಬಿಕ್ಕಟ್ಟು, ರಾಜ್ಯದಲ್ಲಿ ಸುರ್ಜೇವಾಲಾ ಬಿರುಸಿನ ಪ್ರವಾಸ

ಬೆಂಗಳೂರು, ಜುಲೈ 21(ಯುಎನ್ಐ) ಬಿಜೆಪಿಯಲ್ಲಿ ಬಿಕ್ಕಟ್ಟು, ನಾಯಕತ್ವ ಬದಲಾವಣೆ ಕುರಿತು ಬಿರುಸಿನ ವಿದ್ಯಮಾನ ಜರುಗುತ್ತಿರವಾಗಲೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ 5 ದಿನ ರಾಜ್ಯಕ್ಕೆ ಭೇಟಿ ನೀಡುತ್ತಿರುವುದು ಹೊಸ ಬೆಳವಣಿಗೆಗೆ ಕಾರಣವಾಗಲಿದೆ.

ಎಐಸಿಸಿ ಪ್ರಧಾನ ಕಾರ್ಯರ್ಶಿ ರಣದೀಪ್ ಸುರ್ಜೇವಾಲಾ ನಾಳೆ ರಾಜ್ಯಕ್ಕೆ ಆಗಮಿಸಿ, ಇದೇ 31 ವರೆಗೆ ಅನೇಕ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ ಎಂದು ಪಕ್ಷದ ಮೂಲಗಳು ಹೇಳಿವೆ .ಇದೆ 23 ರಂದು ಮಂಗಳೂರಿಗೆ ಭೇಟಿ ನೀಡಿ, ಶಾಸಕರು, ಮಾಜಿ ಶಾಸಕರು, ಮಾಜಿ ಸಂಸದರು, ಎಂಎಲ್ಸಿಗಳು, 2018ರ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಪಕ್ಷದ ಅಭ್ಯರ್ಥಿಗಳ ಜೊತೆ ಚರ್ಚೆನಡೆಸಲಿದ್ದಾರೆ.

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಪಕ್ಷದ ನಾಯಕರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ 25 ರಂದು ತುಮಕೂರಿನಲ್ಲಿ ಸಭೆ ನಡೆಯಲಿದೆ.

ವಿಧಾನ ಪರಿಷತ್ ಚುನಾವಣೆ, ವಿವಿಧ ಮಹಾನಗರ ಪಾಲಿಕೆ ಚುನಾವಣೆಗಳಲ್ಲಿ ಜಯಗಳಿಸಲು ಅನಸರಿಸಬೇಕಾದ ಕಾರ್ಯತಂತ್ರ ರೂಪಿಸಿಸುವುದು ರಾಜ್ಯಭೇಟಿಯ ಮುಖ್ಯ ಉದ್ದೇಶವಾಗಿದೆ ಎನ್ನಲಾಗಿದೆ .

ಈಗ ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ವಿಚಾರ ಭಾರೀ ಚರ್ಚೆಗೆ ಕಾರಣವಾಗಿದೆ. ಒಂದು ವೇಳೆ ಯಡಿಯೂರಪ್ಪ ರಾಜೀನಾಮೆ ನೀಡಿದರೆ ಅದರ ರಾಜಕೀಯ ಲಾಭವನ್ನು ಹೇಗೆ ಪಡೆಯುವ , ಮತ್ತು ಬಳಸಿಕೊಳ್ಳುವ ಬಗ್ಗೆ ಸುರ್ಜೇವಾಲಾ ರಾಜ್ಯ ನಾಯಕರೊಂದಿಗೆ ಸಮಾಲೋಚನೆ ಮಾಡಲಿದ್ದಾರೆ ಎನ್ನಲಾಗಿದೆ.

ಯುಎನ್ಐ ಕೆಎಸ್ಆರ್ 2039