Sunday, Dec 6 2020 | Time 00:32 Hrs(IST)
Karnataka Share

ಬಿಬಿಎಂಪಿ ಆಸ್ಪತ್ರೆಗಳಲ್ಲಿ ಹೆಚ್ಚು ತಜ್ಞರ ವೈದ್ಯರನ್ನು ನೇಮಿಸಿ; ಗೌರವ್ ಗುಪ್ತ

ಬೆಂಗಳೂರು, ಅ 21 (ಯುಎನ್ಐ) ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆ ಸುಧಾರಣೆಗಾಗಿ ಹೆಚ್ಚಿನ ತಜ್ಞ ವೈದ್ಯರನ್ನು ನ್ನೇಮಿಸಿಕೊಳ್ಳುವಂತೆ ಆಡಳಿತಾಧಿಕಾರಿ ಗೌರವ್ ಗುಪ್ತ ಸಲಹೆ ನೀಡಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ಜನಸಂಖ್ಯೆ ಹೆಚ್ಚಳವಾಗಿರುವುದರಿಂದ ಸಾರ್ವಜನಿಕ ಆರೋಗ್ಯ ಸೇವೆ ಮತ್ತು ಕ್ಲಿನಿಕಲ್ ಸೇವೆಗಳ ಕುರಿತು ಬಿಬಿಎಂಪಿ ಆರೋಗ್ಯ ವಿಭಾಗದ ಅಧಿಕಾರಿಗಳ ಜೊತೆ ಅವರು ಬುಧವಾರ ಸಭೆ ನಡೆಸಿದ ಅವರು, ಗೌರವ ಧನದ ಆಧಾರದಲ್ಲಿ ವೈದ್ಯರನ್ನು ನೇಮಿಸುವಂತೆ ಸೂಚನೆ ನೀಡಿದರು.
ರೆಫರಲ್ ಆಸ್ಪತ್ರೆಗಳಿಗೆ ಎಕ್ಸ‌್‌ ರೇ ಯಂತ್ರಗಳ ಅವಶ್ಯಕತೆ ಇದೆ. ಹೊಸದಾಗಿ ಸರಬರಾಜಾಗಿರುವ ಎಕ್ಸ್‌ ರೇ ಯಂತ್ರಗಳನ್ನು ತಕ್ಷಣವೇ ಬಳಸಲು ಕ್ರಮವಹಿಸಬೇಕು ಎಂದು ತಿಳಿಸಿದರು.
ಸಾರ್ವಜನಿಕ ಆರೋಗ್ಯ ಸಂರಕ್ಷಣೆಗೆ ಸಂಬಂಧಿಸಿದ ಸರ್ಕಾರದ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕಾಗಿ ಕೇಂದ್ರ ಕಚೇರಿ ಮತ್ತು ವಲಯ ಮಟ್ಟದಲ್ಲಿ ಕಾರ್ಯಕ್ರಮ ಅಧಿಕಾರಿಗಳನ್ನು ನೇಮಿಸಿಕೊಳ್ಳಬೇಕು. ಹೊರ ಗುತ್ತಿಗೆ ಆಧಾರದಲ್ಲಿ ಸಿಬ್ಬಂದಿಗಳನ್ನು ನೇಮಿಸಿಕೊಳ್ಳುವ ಸಂದರ್ಭದಲ್ಲಿ ಕನಿಷ್ಠ ವೇತನದ ನಿಯಮಗಳ ಪಾಲನೆ ಆಗುವಂತೆ ಕ್ರಮವಹಿಸಬೇಕು ಎಂದು ಸೂಚನೆ ನೀಡಿದರು.
ಯುಎನ್ಐ ಎಸ್ಎಚ್ 2137