Saturday, Oct 24 2020 | Time 19:49 Hrs(IST)
  • ದೇಶಾದ್ಯಂತ ಉಚಿತ ಕೋವಿಡ್‌ ಲಸಿಕೆ ದೊರೆಯಬೇಕು; ಕೇಜ್ರೀವಾಲ್‌
  • ವರುಣ್ ಚಕ್ರವರ್ತಿ ಮಾರಕ ಬೌಲಿಂಗ್ ಗೆ ತತ್ತರಿಸಿದ ಡೆಲ್ಲಿ
  • ಕೆಡುಕಿನ ವಿರುದ್ದ ಒಳಿತು ಸಾಧಿಸಿದ ವಿಜಯದ ಸಂಕೇತ ದಸರಾ- ಉಪರಾಷ್ಟಪತಿ
  • ತ್ರಿವರ್ಣ ಧ್ವಜ; ಮೆಹಬೂಬಾ ಮುಫ್ತಿ ಹೇಳಿಕೆಗೆ ಕಾಂಗ್ರೆಸ್, ಬಿಜೆಪಿ ಆಕ್ರೋಶ
  • ನಾಲ್ಕು ಕೈ, ಕಾಲುಗಳ ಬಾಲಕನಿಗೆ, ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ ಸರ್ಕಾರಿ ಆಸ್ಪತ್ರೆ ವೈದ್ಯರು
  • ಡೆಲ್ಲಿಗೆ 195 ರನ್ ಗುರಿ ನೀಡಿದ ಕೆಕೆಆರ್
  • ಕೋವಿಡ್-19 ಸ್ಥಿತಿಗತಿಗೆ ನಿರ್ಣಾಯಕವಾಗಲಿದೆ ಮುಂದಿನ ಎರಡು ತಿಂಗಳು
  • ತಿರುಪತಿ ತಿಮ್ಮಪ್ಪ ದೇಗಲ ಪ್ರಸಾದ ತಯಾರಿಕ ಕೇಂದ್ರದಲ್ಲಿ ಸ್ಪೋಟ- ಐವರು ಕಾರ್ಮಿಕರಿಗೆ ಗಾಯ
  • ಆದಾಯ ತೆರಿಗೆ ವಿವರ ಸಲ್ಲಿಕೆಗೆ ಡಿ 31 ರವರೆಗೆ ಗಡುವು ವಿಸ್ತರಣೆ
  • ಗುಜರಾತ್‌; ಕಿಸಾನ್‌ ಸೂರ್ಯೋದಯ ಸೇರಿ ಮೂರು ಯೋಜನೆಗೆ ಪ್ರಧಾನಿ ಮೋದಿ ಚಾಲನೆ
  • ಕೆಲವೆಡೆ ಆಯುಧ ಪೂಜೆ, ಇನ್ನೂ ಕೆಲವೆಡೆ ಸಿದ್ಧತೆ: ಕಾರ್ಮಿಕರಿಗಿಲ್ಲ ಬೋನಸ್ !!!
  • ಓಲಾ, ಉಬರ್, ಆಟೋ ಚಾಲಕ ಸಂಘದ ಪದಾಧಿಕಾರಿಗಳು ಕಾಂಗ್ರೆಸ್ ಗೆ ಸೇರ್ಪಡೆ
  • ಸೇನಾ ಕ್ಯಾಂಟೀನ್ ಗಳಲ್ಲಿ ಇನ್ನೂ ವಿದೇಶಿ ಮದ್ಯ ಲಭ್ಯವಿರುವುದಿಲ್ಲ
  • ಜಾತಿ ಒಡೆದು ರಾಜಕೀಯ ಮಾಡುವ ಅಗತ್ಯ ಇಲ್ಲ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್
  • ಮುಖ್ಯಮಂತ್ರಿಯಾಗಲು ಮೊದಲು ಪಕ್ಷ ಅಧಿಕಾರಕ್ಕೆ ಬರಬೇಕು- ಡಿ ಕೆ ಶಿವಕುಮಾರ್
Karnataka Share

ಬೆಳೆ ದರ್ಶಕ್ ಆಪ್ ಬಿಡುಗಡೆ

ಬೆಂಗಳೂರು,ಸೆ.18 [ಯುಎನ್ಐ] ರೈತರೇ ಸ್ವತಃ ತಮ್ಮ ಜಮೀನಿನ ಬಗ್ಗೆ ತಾವೇ ಪ್ರಮಾಣಪತ್ರ ನೀಡುವ ರೈತ ಬೆಳೆ ಸಮೀಕ್ಷೆ ಆಪ್ ಯಶಸ್ವಿಯಾಗಿದ್ದು, ಸೆ.18 ಮಧ್ಯಾಹ್ನದವರೆಗೆ 1 ಕೋಟಿ 2ಲಕ್ಷದ 90 ಸಾವಿರ ರೈತರು ಆಪ್ ಗೆ ಅಪ್ಲೋಡ್ ಮಾಡಿದ್ದಾರೆ.
ಹೀಗೆ ಅಪ್ಲೋಡ್ ಮಾಡಿದ ಬೆಳೆ ಸಮೀಕ್ಷೆಯ ವಿವರಗಳನ್ನು ರೈತರು ಪಡೆಯಲು ಕೃಷಿ ಇಲಾಖೆ ಮತ್ತೊಂದು ಆಪ್ ಅನ್ನು ಬಿಡುಗಡೆ ಮಾಡಿದೆ. “ಬೆಳೆ ದರ್ಶಕ್ -2020” ಹೆಸರಿನ ಈ ಆಪ್ ಮೂಲಕ ರೈತರು ಅಪ್ಲೊಡ್ ಆಗಿರುವ ತಮ್ಮ ಬೆಳೆಯ ವಿವರಗಳ ಮಾಹಿತಿ ಪಡೆಯಬಹುದು.
ಅಲ್ಲದೇ ಬೆಳೆ ದರ್ಶಕ್-2020 ಆಪ್ ಮೂಲಕ ಅಪ್ಲೋಡ್ ಆದ ವಿವರಗಳು ಸರಿಯಾಗಿವೆಯೇ ಇಲ್ಲವೇ ಎಂಬುದನ್ನು ಖಚಿತಪಡಿಸಿಕೊಳ್ಳಬಹುದಾಗಿದೆ. ಒಂದು ವೇಳೆ ರೈತರಾಗಲೀ ಅಥವಾ ಖಾಸಗಿ ನಿವಾಸಿಗಳು ಸಮೀಕ್ಷೆ ಮಾಹಿತಿಯನ್ನು ತಪ್ಪಾಗಿ ದಾಖಲಿಸಿದ್ದಲ್ಲಿ ಆಕ್ಷೇಪಣೆ ಸಲ್ಲಿಸಿ ತಿದ್ದುಪಡಿಮಾಡಿಕೊಳ್ಳಲು ಬೆಳೆ ದರ್ಶಕ್ ನಲ್ಲಿ ಅವಕಾಶ ಕಲ್ಪಿಸಲಾಗಿದೆ.
ಕೃಷಿ ಕ್ಷೇತ್ರದಲ್ಲಿ ನವೀನ ತಂತ್ರಜ್ಞಾನ ಬಳಕೆ ಮತ್ತು ರೈತರಿಗೆ ಅನುಕೂಲ ಕಲ್ಪಿಸಲು ಹೊಸಹೊಸ ಹೆಜ್ಜೆಗಳನ್ನು ಇಡುತ್ತಿದ್ದು, ಕೃಷಿ ಸಚಿವ ಬಿ.ಸಿ.ಪಾಟೀಲ್ ಇಂದು ಬೆಳೆ ದರ್ಶಕ್-2020 ಆಪ್ ಅನ್ನು ಲೋಕಾರ್ಪಣೆ ಮಾಡಿದರು.
ಸೆ.23 ಬೆಳೆ ಸಮೀಕ್ಷೆ ಅಪ್ಲೋಡ್ ಮಾಡಲು ಕೊನೆಯ ದಿನವಾಗಿದ್ದು, ರೈತರು ಆದಷ್ಟು ಬೇಗ ತಮ್ಮ ಜಮೀನಿನ ಸಮೀಕ್ಷೆ ನಡೆಸಿ ಅಪ್ಲೊಡ್ ಮಾಡುವಂತೆ ಸಚಿವರು ಮನವಿ ಮಾಡಿದ್ದಾರೆ.
ಯುಎನ್ಐ ವಿಎನ್ 1628
More News
ಜಾತಿ ಒಡೆದು ರಾಜಕೀಯ ಮಾಡುವ ಅಗತ್ಯ ಇಲ್ಲ: ಕೆಪಿಸಿಸಿ ಅಧ್ಯಕ್ಷ  ಡಿ ಕೆ ಶಿವಕುಮಾರ್

ಜಾತಿ ಒಡೆದು ರಾಜಕೀಯ ಮಾಡುವ ಅಗತ್ಯ ಇಲ್ಲ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್

24 Oct 2020 | 5:33 PM

ಬೆಂಗಳೂರು,ಅ 24(ಯುಎನ್ಐ) ನಮಗೆ ಜಾತಿಯನ್ನು ಒಡೆದು ರಾಜಕೀಯ ಮಾಡುವ ಅಗತ್ಯ ಇಲ್ಲ. ತನ್ನನ್ನು ಬೆಳೆಸಿದ ಪಕ್ಷಕ್ಕೆ ಮೋಸ ಮಾಡಿದ್ದು,ಹೆತ್ತ ತಾಯಿಗೆ ದ್ರೋಹ ಬಗೆದಿದ್ದಾರೆ.ಇದಕ್ಕೆ ಜನ ತಕ್ಕ ಉತ್ತರ ನೀಡಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

 Sharesee more..