Monday, Nov 30 2020 | Time 10:56 Hrs(IST)
  • ವಾಯುಭಾರ ಕುಸಿತ: ಇನ್ನೂ ಕೆಲ ದಿನ ಕಾಡಲಿದೆ ಮಳೆ ಕಾಟ !!
  • ವಾರಾಣಸಿಗೆ ಇಂದು ಪ್ರಧಾನಿ ಭೇಟಿ: ಹಲವು ಕಾರ್ಯಕ್ರಮಗಳಲ್ಲಿ ಭಾಗಿ
  • ನೈಜೀರಿಯಾದಲ್ಲಿ ನರಮೇಧ: ಕನಿಷ್ಠ 110 ನಾಗರಿಕರು ಬಲಿ
  • ಎಫ್ ಬಿ ಐ ವಿರುದ್ದ ಡೊನಾಲ್ಡ್ ಟ್ರಂಪ್ ಆಕ್ರೋಶ
  • ನಾಯಿಯೊಂದಿಗೆ ಆಟ- ಬೈಡೆನ್ ಕಾಲಿನ ಮೂಳೆ ಮುರಿತ !!
  • ಸಾಕು ನಾಯಿ ಜೊತೆ ಆಟವಾಡುವಾಗ ಜಾರಿ ಬಿದ್ದು ಗಾಯಗೊಂಡ ಜೋ ಬೈಡನ್
  • ಶಿವಸೇನೆಗೆ ಉರ್ಮಿಳಾ ಮಾತೋಂಡ್ಕರ್ ?
  • ನ್ಯೂಯಾರ್ಕ್ ನಲ್ಲಿ ಡಿಸೆಂಬರ್ 7ರಿಂದ ಶಾಲೆಗಳು ಪುನರಾರಂಭ
  • ಇಂದು ವಾರಣಾಸಿಗೆ ಪ್ರಧಾನಿ ಮೋದಿ, ಹಲವು ಕಾರ್ಯಕ್ರಮಗಳಲ್ಲಿ ಭಾಗಿ
National Share

ಭೀಮಾ ಕೋರೆಗಾಂವ್ ಎಲ್ಗಾರ್ ಪರಿಷತ್ ಪ್ರಕರಣದಲ್ಲಿ ಎನ್ಐಎ ನಿಂದ ಮುಂಬೈನಲ್ಲಿ ಆರೋಪಪಟ್ಟಿ ಸಲ್ಲಿಕೆ

ಭೀಮಾ ಕೋರೆಗಾಂವ್ ಎಲ್ಗಾರ್ ಪರಿಷತ್ ಪ್ರಕರಣದಲ್ಲಿ ಎನ್ಐಎ ನಿಂದ ಮುಂಬೈನಲ್ಲಿ ಆರೋಪಪಟ್ಟಿ ಸಲ್ಲಿಕೆ
ಭೀಮಾ ಕೋರೆಗಾಂವ್ ಎಲ್ಗಾರ್ ಪರಿಷತ್ ಪ್ರಕರಣದಲ್ಲಿ ಎನ್ಐಎ ನಿಂದ ಮುಂಬೈನಲ್ಲಿ ಆರೋಪಪಟ್ಟಿ ಸಲ್ಲಿಕೆ

ನವದೆಹಲಿ, ಅ 9 (ಯುಎನ್ಐ) ಭೀಮಾ ಕೋರೆಗಾಂವ್ ಎಲ್ಗಾರ್ ಪರಿಷತ್ ಪ್ರಕರಣದ ಎಂಟು ಆರೋಪಿಗಳ ವಿರುದ್ಧ 10,000 ಪುಟಗಳ ಪೂರಕ ಆರೋಪಪಟ್ಟಿಯನ್ನು ಮುಂಬೈನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಗೊತ್ತುಪಡಿಸಿದ ನ್ಯಾಯಾಲಯದ ಮುಂದೆ ಸಲ್ಲಿಸಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಆರೋಪಿಗಳಾದ ಆನಂದ್ ತೆಲ್ತುಂಬ್ದೆ, ಗೌತಮ್‍ ನವಾಲ್‍ ಖಾ, ಹ್ಯಾನಿ ಬಾಬು, ಸಾಗರ್ ಗೋರ್ಖೆ, ರಮೇಶ್ ಗೈಚೋರ್, ಜ್ಯೋತಿ ಜಗ್‍ಪತ್, ಸ್ಟಾನ್ ಸ್ವಾಮಿ ಮತ್ತು ಮಿಲಿಂತ್ ತೆಲ್ತುಂಬ್ದೆ ವಿರುದ್ಧ ಕಾನೂನು ಬಾಹಿರ ಚಟುವಟಿಕೆ(ತಡೆ) ಕಾಯ್ದೆಯ ವಿವಿಧ ಸೆಕ್ಷನ್‍ ಗಳಡಿ ಆರೋಪಪಟ್ಟಿ ದಾಖಲಿಸಲಾಗಿದೆ.

ಡಿ 31, 2017 ರಂದು ಕಬೀರ್ ಕಲಾ ಮಂಚ್‌ನ ಕಾರ್ಯಕರ್ತರು ಪುಣೆಯ ಶನಿವಾರ್‍ವಾಡ ಪ್ರದೇಶದಲ್ಲಿ ಆಯೋಜಿಸಿದ್ದ ಎಲ್ಗಾರ್ ಪರಿಷತ್ ಸಭೆಯಲ್ಲಿ ಜನರನ್ನು ಪ್ರಚೋದಿಸುವ ಮತ್ತು ಪ್ರಚೋದನಕಾರಿ ಭಾಷಣ ಮಾಡುವ ಬಗ್ಗೆ ಪುಣೆಯ ವಿಶ್ರಮ್ ಬಾಗ್ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿತ್ತು. ಇದು ವಿವಿಧ ಜಾತಿ ಗುಂಪುಗಳ ನಡುವೆ ದ್ವೇಷವನ್ನು ಹುಟ್ಟುಹಾಕಿತ್ತು ಮತ್ತು ಹಿಂಸಾಚಾರಕ್ಕೆ ಕಾರಣವಾಗಿತ್ತು. ಇದರಿಂದ ಮಹಾರಾಷ್ಟ್ರದಲ್ಲಿ ಪ್ರಾಣಹಾನಿ ಮತ್ತು ಆಸ್ತಿಪಾಸ್ತಿಗೆ ನಷ್ಟವಾಗಿತ್ತು.

ಯುಎನ್ಐ ಎಸ್ಎಲ್ಎಸ್ 2129

More News
ಆಫ್ಘನ್‍ ಭದ್ರತಾ ಪಡೆಗಳೊಂದಿಗೆ ಘರ್ಷಣೆ: 30 ತಾಲಿಬಾನ್ ಉಗ್ರರು ಹತ

ಆಫ್ಘನ್‍ ಭದ್ರತಾ ಪಡೆಗಳೊಂದಿಗೆ ಘರ್ಷಣೆ: 30 ತಾಲಿಬಾನ್ ಉಗ್ರರು ಹತ

29 Nov 2020 | 8:35 PM

ಕಾಬೂಲ್, ನ 29 (ಯುಎನ್‍ಐ)- ಆಫ್ಥಾನಿಸ್ತಾನದ ಪೂರ್ವ ಪ್ರಾಂತ್ಯವಾದ ಲಾಗ್ಮಾನ್‌ನಲ್ಲಿ ಆಫ್ಘನ್‍ ಭದ್ರತಾ ಪಡೆಗಳೊಂದಿಗೆ ನಡೆದ ಘರ್ಷಣೆಯಲ್ಲಿ ಆರು ಕಮಾಂಡರ್‌ಗಳು ಸೇರಿದಂತೆ 30 ತಾಲಿಬಾನ್ ಉಗ್ರರು ಹತರಾಗಿದ್ದು, ಇತರ 17 ಮಂದಿ ಗಾಯಗೊಂಡಿದ್ದಾರೆ ಎಂದು ಆಫ್ಘಾನಿಸ್ತಾನ ಸೇನೆಯ ಪೂರ್ವ ವಿಭಾಗ ಭಾನುವಾರ ತಿಳಿಸಿದೆ.

 Sharesee more..