Saturday, Oct 24 2020 | Time 20:33 Hrs(IST)
  • ದಸರಾ-ಮೆರವಣಿಗೆ: ನಿಗದಿತ ಕಲಾತಂಡಗಳ ನಿಯೋಜನೆ
  • ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಪುತ್ರನಿಗೆ ಇಡಿ ಸಮನ್ಸ್
  • ಜಿಯೋಫೋನ್‌ನಲ್ಲಿ ಹೊಸ ಜಿಯೋ ಕ್ರಿಕೆಟ್ ಆಪ್: ಬಹುಮಾನ ಗೆಲ್ಲಲು ಅವಕಾಶ
  • ರಾಜಕಾಲುವೆ ಒತ್ತುವರಿದಾರರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ; ಆರ್ ಅಶೋಕ
  • ಜಂಬೂಸವಾರಿ 40 ನಿಮಿಷಕ್ಕೆ ಸೀಮಿತ: 300 ಜನರಿಗೆ ಮಾತ್ರ ಪ್ರವೇಶ; ಡಾ ಚಂದ್ರಗುಪ್ತ
  • ಎನ್‌ಸಿಬಿ ಅಧಿಕಾರಿಗಳ ಸೋಗಿನಲ್ಲಿ ಬೆಳ್ಳುಳ್ಳಿಯ ವ್ಯಾಪಾರಿಯ ದರೋಡೆ
  • ಚರ್ಚ್ ಕುಸಿದು 22 ಮಂದಿ ಸಾವು
  • ಉಪ ಚುನಾವಣೆ, ವಿಧಾನ ಪರಿಷತ್ ಚುನಾವಣೆಗಳಲ್ಲಿ ಬಿಜೆಪಿಗೆ ಗೆಲುವು: ಮುಖ್ಯಮಂತ್ರಿ ಯಡಿಯೂರಪ್ಪ ವಿಶ್ವಾಸ
  • ದೇಶಾದ್ಯಂತ ಉಚಿತ ಕೋವಿಡ್‌ ಲಸಿಕೆ ದೊರೆಯಬೇಕು; ಕೇಜ್ರೀವಾಲ್‌
  • ವರುಣ್ ಚಕ್ರವರ್ತಿ ಮಾರಕ ಬೌಲಿಂಗ್ ಗೆ ತತ್ತರಿಸಿದ ಡೆಲ್ಲಿ
  • ಕೆಡುಕಿನ ವಿರುದ್ದ ಒಳಿತು ಸಾಧಿಸಿದ ವಿಜಯದ ಸಂಕೇತ ದಸರಾ- ಉಪರಾಷ್ಟಪತಿ
  • ತ್ರಿವರ್ಣ ಧ್ವಜ; ಮೆಹಬೂಬಾ ಮುಫ್ತಿ ಹೇಳಿಕೆಗೆ ಕಾಂಗ್ರೆಸ್, ಬಿಜೆಪಿ ಆಕ್ರೋಶ
  • ನಾಲ್ಕು ಕೈ, ಕಾಲುಗಳ ಬಾಲಕನಿಗೆ, ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ ಸರ್ಕಾರಿ ಆಸ್ಪತ್ರೆ ವೈದ್ಯರು
  • ಡೆಲ್ಲಿಗೆ 195 ರನ್ ಗುರಿ ನೀಡಿದ ಕೆಕೆಆರ್
  • ಕೋವಿಡ್-19 ಸ್ಥಿತಿಗತಿಗೆ ನಿರ್ಣಾಯಕವಾಗಲಿದೆ ಮುಂದಿನ ಎರಡು ತಿಂಗಳು
Karnataka Share

ಮಹಾರಾಷ್ಟ್ರಕ್ಕೆ ಕೆ.ಎಎಸ್.ಆರ್.ಟಿ.ಸಿ. ಬಸ್ ಸೇವೆ

ಬೆಂಗಳೂರು, ಸೆ 18 [ಯುಎನ್ಐ] ಕೋವಿಡ್-೧೯ ಲಾಕ್‌ಡೌನ್ ತೆರವುಗೊಂಡಿರುವ ಹಿನ್ನೆಲೆಯಲ್ಲಿ ಗೋವಾ ನಂತರ ಇದೀಗ ಮಹಾರಾಷ್ಟ್ರಕ್ಕೆ ಕೆ.ಎಸ್.ಆರ್.ಟಿ.ಸಿ. ಬಸ್ ಗಳ: ಸಂಚಾರ ಆರಂಭವಾಗಿದೆ.

ಕೋವಿಡ್ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಅಂತಾರಾಜ್ಯ ಸಾರಿಗೆಗಳ ಕಾರ್ಯಾಚರಣೆಯನ್ನು ಸ್ಥಗಿತ ಗೊಳಿಸಿತ್ತು. ಈಗ ಲಾಕ್‌ಡೌನ್ ಸಡಿಲ ಗೊಂಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಮಹಾರಾಷ್ಟ್ರಕ್ಕೆ ಬೆಂಗಳೂರು, ದಾವಣಗೆರೆ, ಮಂಗಳೂರು ಒಳಗೊಂಡಂತೆ ರಾಜ್ಯದ ವಿವಿಧ ಸ್ಥಳಗಳಿಂದ ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ಸಾರಿಗೆಗಳ ಕಾರ್ಯಾಚರಣೆಯನ್ನು ಪುನರಾರಂಭಿಸಲಾಗುತ್ತಿದೆ.
ಎಲ್ಲಾ ಪ್ರಯಾಣಿಕರು ಕಡ್ಡಾಯವಾಗಿ ಸೋಂಕು ನಿಯಂತ್ರಣ ಕ್ರಮಗಳನ್ನು ಪರಿಪಾಲನೆ ಮಾಡಬೇಕು. ಮಾಸ್ಕ್ ಧರಿಸಿ ಪ್ರಯಾಣಿಸಬೇಕಾಗಿದೆ. ಮುಂಗಡ ಆಸನಗಳನ್ನು www.ksrtc.in ವೆಬ್‌ಸೈಟ್‌ಮತ್ತು ನಿಗಮದ /ಫ್ರಾಂಚೈಸಿ ಕೌಂಟರ್ಗಳ ಮುಖಾಂತರ ಕಾಯ್ದಿರಿಸಿ ಕೊಳ್ಳಬಹುದಾಗಿದೆ ಎಂದು ನಿಗಮದ ಪ್ರಕಟಣೆ ತಿಳಿಸಿದೆ.
ಯುಎನ್ಐ ವಿಎನ್ 1630