Sunday, Dec 15 2019 | Time 18:09 Hrs(IST)
 • ಪೌರತ್ವ ತಿದ್ದುಪಡಿ ಮಸೂದೆ ಜಾರಿಯಿಂದ ದೇಶ ರಕ್ಷಣೆಯಾಗಿದೆ; ಪ್ರಧಾನಿ
 • ಪಂತ್-ಅಯ್ಯರ್ ಅರ್ಧಶತಕ: ವೆಸ್ಟ್‌ ಇಂಡೀಸ್‌ಗೆ 289 ರನ್ ಗುರಿ
 • ಸೈಫ್ ಪುತ್ರಿಯಾಗಿ ಅನನ್ಯ !
 • ದಬಾಂಗ್ -3 ಕುರಿತು ಸಲ್ಮಾನ್ ಮಾತು
 • ಎಚ್ ಡಿ ರೇವಣ್ಣ ಮಂಡ್ಯ ಉಸಾಬರಿಗೆ ಬರುವುದು ಬೇಡ: ನಾರಾಯಣಗೌಡ
 • ಧೋನಿ ನನ್ನ ನೆಚ್ಚಿನ ಕ್ರಿಕೆಟರ್; ಸಲ್ಮಾನ್ ಖಾನ್
 • ಬ್ಯಾಡ್ಮಿಂಟನ್ : ಲಕ್ಷ್ಯ ಸೇನ್‌ಗೆ ಬಾಂಗ್ಲಾದೇಶ ಇಂಟರ್‌ನ್ಯಾಷನಲ್ ಚಾಲೆಂಜ್ ಮುಕುಟ
 • ಭಾರತಕ್ಕೆೆ ಪಂತ್, ಅಯ್ಯರ್ ಅರ್ಧಶತಕಗಳ ಆಸರೆ
 • ರಾಹುಲ್ ಗಾಂಧಿ ವಿರುದ್ದ ಮಾನನಷ್ಟ ಮೊಕದ್ದಮೆ ಹೂಡುವೆ; ರಂಜಿತ್ ಸಾರ್ವಕರ್
 • ಅಸ್ಸಾಂ ಪರಿಸ್ಥಿತಿ ಕುರಿತು ಮೋದಿ, ಅಮಿತ್‍ ಷಾಗೆ ಮಾಹಿತಿ ನೀಡಲಿರುವ ಸೋನೋವಾಲ್‍
 • ವೃತ್ತಿ ಜೀವನದ 11ನೇ ಬಿಡಬ್ಲ್ಯುಎಫ್ ಫೈನಲ್ಸ್‌ ಗೆದ್ದ ಕೆಂಟೊ ಮೊಮೊಟಾ
 • ಕಾಂಗ್ರೆಸ್ ದ್ವಿಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದೆ; ಮಾಯಾವತಿ ಲೇವಡಿ
 • ಭಾರತೀಯ ಮೀನುಗಾರರ ದೋಣಿಗಳ ಮೇಲೆ ಶ್ರೀಲಂಕಾ ನೌಕಾಪಡೆಯಿಂದ ದಾಳಿ
 • ವಿಶ್ವ ಸುಂದರಿ ಪಟ್ಟ, ಭಾರತದ ಸುಮನ್ ರಾವ್ ಗೆ ದ್ವಿತೀಯ ಸ್ಥಾನ
 • ಫಿಲಿಪೈನ್ಸ್‌ನಲ್ಲಿ 6 8 ತೀವ್ರತೆಯ ಭೂಕಂಪನ
Entertainment Share

ಮುಂದಿನ ತಿಂಗಳು ‘ಕನ್ನಡ್ ಗೊತ್ತಿಲ್ಲ'

ಬೆಂಗಳೂರು, ಅ ೨೧ (ಯುಎನ್‌ಐ) ರಾಮರತ್ನ ಪ್ರೊಡಕ್ಷನ್ಸ್ ಮೂಲಕ ಕುಮಾರ ಕಂಠೀರವ ಅವರು ನಿರ್ಮಿಸಿರುವ ‘ಕನ್ನಡ್ ಗೊತ್ತಿಲ್ಲ‘ ಮುಂದಿನ ತಿಂಗಳು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.
ಆರ್ ಜೆ ಮಯೂರ್ ನಿರ್ದೇಶನದಲ್ಲಿ ಮೂಡಿಬಂದಿರುವ ‘ಕನ್ನಡ್ ಗೊತ್ತಿಲ್ಲ‘ ಕನ್ನಡ ಭಾಷಾ ಪ್ರೇಮವನ್ನು ಸಾರುವ ಚಿತ್ರವಾಗಿದೆ. ಈ ಚಿತ್ರ ನವಂಬರ್ ನಲ್ಲೇ ತೆರೆಗೆ ಬರುತ್ತಿರುವುದು ವಿಶೇಷ.
ಹೊರ ರಾಜ್ಯಗಳಿಂದ ಬರುವ ಅನ್ಯಭಾಷಿಗರು ಹಲವಾರು ವರ್ಷಗಳಿಂದಲೂ ಕರ್ನಾಟಕದಲ್ಲೇ ನೆಲೆಸಿದ್ದರೂ ಕನ್ನಡ ಭಾಷೆಯನ್ನು ಕಲಿತಿರುವುದಿಲ್ಲ. ಅವರನ್ನು ಕನ್ನಡದಲ್ಲಿ ಮಾತನಾಡಿಸಲು ಪ್ರಯತ್ನಿಸಿದರೂ ಕೂಡ ಸಾರಿ, ನಮಗೆ ಕನ್ನಡ್ ಗೊತ್ತಿಲ್ಲ ಎಂದು ಬಹಳ ಸುಲಭವಾಗಿ ಹೇಳಿಬಿಡುತ್ತಾರೆ. ಇಂಥದೇ ವಿಷಯವನ್ನು ಪ್ರಮುಖವಾಗಿಟ್ಟುಕೊಂಡು ನಿರ್ಮಿಸಿರುವ ‘ಕನ್ನಡ್ ಗೊತ್ತಿಲ್ಲ‘ ಒಂದು ಥ್ರಿಲ್ಲರ್ ಚಿತ್ರವಾಗಿದೆ.
ಈ ಚಿತ್ರದಲ್ಲಿ ಬೆಡಗಿ ಹರಿಪ್ರಿಯಾ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಸುಧಾರಾಣಿ, ಪವನ್ ಕುಮಾರ್, ಧರ್ಮಣ್ಣ, ಸಂತೋಷ್ ಕರ್ಕಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಗಿರಿಧರ್ ದಿವಾನ್ ಅವರ ಛಾಯಾಗ್ರಹಣ ಹಾಗೂ ಸಂಕಲನವಿದೆ. ನಕುಲ್ ಅಭಯಂಕರ ಅವರ ಸಂಗೀತ ಸಂಯೋಜನೆಯಿದೆ.
ಯುಎನ್‌ಐ ಎಸ್‌ಎ ವಿಎನ್ ೨೦೫೨