Saturday, Feb 29 2020 | Time 14:18 Hrs(IST)
 • ದುಬೈ ಟೆನಿಸ್‌ ಚಾಂಪಿಯನ್‌ಶಿಪ್ : ಪ್ರಶಸ್ತಿಗಾಗಿ ಜೊಕೊವಿಚ್, ಸಿಟ್ಸಿಪಸ್ ಕಾದಾಟ
 • ಅಪಾರ್ಟ್‌ಮೆಂಟ್ ಗಳಲ್ಲಿ ಶೌರಶಕ್ತಿ‌ ಫಲಕ ಅಳವಡಿಕೆ ಉತ್ತಮ ಪ್ರಯತ್ನ; ಡಾ ಅಶ್ವತ್ಥನಾರಾಯಣ
 • 10ನೇ ಬಾರಿ ವಿರಾಟ್ ಕೊಹ್ಲಿಯನ್ನು ಕೆಡವಿದ ಟಿಮ್ ಸೌಥಿ
 • ಕೊರೊನಾವೈರಸ್ ಆತಂಕ: ಅಮೆರಿಕದಿಂದ ಆಸಿಯಾನ್ ಶೃಂಗಸಭೆ ಮುಂದೂಡಿಕೆ
 • ಕಾಶ್ಮೀರ ಕಣಿವೆಯಲ್ಲಿ ಕರ್ತವ್ಯಕ್ಕೆ ಗೈರುಹಾಜರಾದ 40 ಜನರ ಅಮಾನತ್ತು
 • ರಜನೀಕಾಂತ್ ಜೊತೆ ಭಾರತೀಯ ಹಜ್ ಅಸೋಸಿಯೇಷನ್ ಅಧ್ಯಕ್ಷ ಮಾತುಕತೆ
 • ಪುಲ್ವಾಮಾ ಪ್ರಕರಣ: ಕಾಶ್ಮೀರದಲ್ಲಿ ಎನ್‌ಐಎ ದಾಳಿ ಮುಂದುವರಿಕೆ
 • ಮಹಿಳಾ ಟಿ20 ವಿಶ್ವಕಪ್: ಕೊನೆಯ ಪಂದ್ಯದಲ್ಲೂ ಭಾರತ ವನಿತೆಯರಿಗೆ ಭರ್ಜರಿ ಜಯ
 • ಮೈಸೂರಿನಲ್ಲಿ ಇಬ್ಬರು ಬಾಂಗ್ಲಾ ದೇಶ ಅಕ್ರಮ ವಲಸಿಗರ ಬಂಧನ
 • ಎರಡನೇ ಟೆಸ್ಟ್: ಭಾರತ 242ಕ್ಕೆ ಆಲೌಟ್ ; ನ್ಯೂಜಿಲೆಂಡ್‌ಗೆ ಮೊದಲ ದಿನದ ಗೌರವ
 • ಪ್ರಧಾನಿ ಆಗಮನಕ್ಕೂ ಮುನ್ನ ಪ್ರಯಾಗ್ ರಾಜ್ ನಲ್ಲಿ ಮೂರು ಗಿನ್ನೆಸ್ ವಿಶ್ವ ದಾಖಲೆ ನಿರ್ಮಾಣ
 • ಉತ್ತರ ಕಾಶ್ಮೀರದಲ್ಲಿ ಭಾರೀ ಹಿಮಪಾತ: ಹಲವು ಪ್ರದೇಶಗಳಿಗೆ ಸಂಪರ್ಕ ಕಡಿತ
 • ಮಾಜಿ ಸಚಿವರ ಸಹೋದರನ ಕೊಚ್ಚಿ ಕೊಲೆ
 • ಇಂದಿರಾ ಕ್ಯಾಂಟೀನ್ ಊಟ, ತಿಂಡಿ ದರ ಹೆಚ್ಚಳಕ್ಕೆ ಬಿಬಿಎಂಪಿ ಪರಿಶೀಲನೆ ?
 • ಉಗ್ರರ ಕಾಳಗದಲ್ಲಿ ರಾಜ್ಯದ ಯೋಧ ಹುತಾತ್ಮ: ಸಕಲ ಗೌರವದೊಂದಿಗೆ ಅಂತ್ಯಸಂಸ್ಕಾರ
National Share

ರಾಜಕೀಯವನ್ನು ಅಪರಾಧಮುಕ್ತಗೊಳಿಸುವ ಸುಪ್ರೀಂಕೋರ್ಟ್ ತೀರ್ಪು ಸ್ವಾಗತಿಸಿದ ಕಾಂಗ್ರೆಸ್; ಕರ್ನಾಟಕದಲ್ಲಿ ಕಳಂಕಿತ ಸಚಿವರ ನೇಮಕದ ವಿರುದ್ಧ ವಾಗ್ದಾಳಿ

ರಾಜಕೀಯವನ್ನು ಅಪರಾಧಮುಕ್ತಗೊಳಿಸುವ ಸುಪ್ರೀಂಕೋರ್ಟ್ ತೀರ್ಪು ಸ್ವಾಗತಿಸಿದ ಕಾಂಗ್ರೆಸ್; ಕರ್ನಾಟಕದಲ್ಲಿ ಕಳಂಕಿತ ಸಚಿವರ ನೇಮಕದ ವಿರುದ್ಧ ವಾಗ್ದಾಳಿ
ರಾಜಕೀಯವನ್ನು ಅಪರಾಧಮುಕ್ತಗೊಳಿಸುವ ಸುಪ್ರೀಂಕೋರ್ಟ್ ತೀರ್ಪು ಸ್ವಾಗತಿಸಿದ ಕಾಂಗ್ರೆಸ್; ಕರ್ನಾಟಕದಲ್ಲಿ ಕಳಂಕಿತ ಸಚಿವರ ನೇಮಕದ ವಿರುದ್ಧ ವಾಗ್ದಾಳಿ

ನವದೆಹಲಿ, ಫೆ.13 (ಯುಎನ್‌ಐ) ಭಾರತೀಯ ರಾಜಕಾರಣವನ್ನು ಅಪರಾಧಮುಕ್ತಗೊಳಿಸುವ ಸುಪ್ರೀಂ ಕೋರ್ಟ್‌ನ ತೀರ್ಪನ್ನು ಸ್ವಾಗತಿಸಿರುವ ಕಾಂಗ್ರೆಸ್, ಕ್ರಿಮಿನಲ್ ಹಿನ್ನೆಲೆಯುಳ್ಳವರಿಗೆ ಬಿಜೆಪಿಯು ಸುರಕ್ಷಿತ ತಾಣ ಅಥವಾ ಆಶ್ರಯತಾಣವಾಗಿದೆ ಎಂದು ಗುರುವಾರ ಬಿಜೆಪಿಯ ವಿರುದ್ಧ ಟೀಕಾಪ್ರಹಾರ ನಡೆಸಿದೆ.

“ಮೋದಿಜಿ ಮತ್ತು ಬಿಜೆಪಿ ಮತ್ತೆ 'ಬಳ್ಳಾರಿ ಗ್ಯಾಂಗ್' ನ ರಕ್ಷಣೆಗೆ ಬರುತ್ತಿವೆ! ಕಳಂಕಿತ ನಾಯಕನಿಗೆ ಟಿಕೆಟ್ ನೀಡಿರುವ ಕಾರಣವನ್ನು ತಿಳಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ! ಕಳಂಕಿತರು ನಾಯಕರು ಮಾತ್ರ ಶಾಸಕರು ಅಲ್ಲ ಎಂದು ಮೋದಿಜಿ ಹೇಳುತ್ತಾರೆ. ಲೂಟಿ ಮಾಡಿದವರನ್ನೇ ಸಚಿವರನ್ನಾಗಿ ನೇಮಕ ಮಾಡಲಾಗಿದೆ! ಪ್ರಧಾನಿ ಮತ್ತು ಕರ್ನಾಟಕ ಮುಖ್ಯಮಂತ್ರಿಯವರ ವಿರುದ್ಧ ಸುಪ್ರೀಂಕೋರ್ಟ್ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುತ್ತದೆಯೇ ? ”ಎಂದು ಎಐಸಿಸಿ ಸಂವಹನ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಟ್ವೀಟ್ ಮಾಡಿದ್ದಾರೆ.

ಗಣಿಗಾರಿಕೆ ಮತ್ತು ಅರಣ್ಯ ಪ್ರಕರಣಗಳಲ್ಲಿ ಆರೋಪಿಯಾಗಿರುವ ಆನಂದ್ ಸಿಂಗ್ ಅವರನ್ನು ಕರ್ನಾಟಕ ರಾಜ್ಯದ ಅರಣ್ಯ, ಪರಿಸರ ಮತ್ತು ಪರಿಸರ ಸಚಿವರಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇಮಕ ಮಾಡಿರುವುದನ್ನು ಪ್ರಸ್ತಾಪಿಸಿ ಕಾಂಗ್ರೆಸ್ ವಕ್ತಾರರು ಈ ಪ್ರತಿಕ್ರಿಯೆ ನೀಡಿದ್ದಾರೆ.

ಇಂದು ಬೆಳಗ್ಗೆ ಸುಪ್ರೀಂಕೋರ್ಟ್ ಮಹತ್ವದ ತೀರ್ಪೊಂದನ್ನು ನೀಡಿದ್ದು, ಚುನಾವಣೆಗೆ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ವಿರುದ್ಧ ಬಾಕಿ ಇರುವ ಪ್ರಕರಣಗಳ ವಿವರಗಳನ್ನು ಪತ್ರಿಕೆಗಳು, ಸಾಮಾಜಿಕ ಮಾಧ್ಯಮ ಮತ್ತು ಅವರ ವೆಬ್‌ಸೈಟ್‌ಗಳಲ್ಲಿ ಅಪ್‌ಲೋಡ್ ಮಾಡುವಂತೆ ರಾಜಕೀಯ ಪಕ್ಷಗಳಿಗೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿತ್ತು.

ರಾಜಕೀಯ ಪಕ್ಷಗಳು ಆದೇಶವನ್ನು ಪಾಲಿಸಲು ವಿಫಲವಾದರೆ ನ್ಯಾಯಾಂಗ ನಿಂದನೆಯನ್ನು ಎದುರಿಸಬೇಕಾಗುತ್ತದೆ ಎಂದು ಕೋರ್ಟ್ ಎಚ್ಚರಿಕೆ ನೀಡಿದೆ. ಅಂತಹ ಸಂದರ್ಭಗಳಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸುವಂತೆ ಚುನಾವಣಾ ಆಯೋಗಕ್ಕೆ ನ್ಯಾಯಪೀಠ ಸೂಚಿಸಿದೆ.

ರಾಜಕೀಯವನ್ನು ಶುದ್ಧೀಕರಿಸುವ ಸಂಬಂಧ ಸುಪ್ರೀಂ ಕೋರ್ಟ್ ಇಂದು ನೀಡಿರುವುದು ಐತಿಹಾಸಿಕ ತೀರ್ಪು. ರಾಜಕೀಯವನ್ನು ನ್ಯಾಯಸಮ್ಮತಗೊಳಿಸುವತ್ತ ಇದು ಒಂದು ಪ್ರಮುಖ ಹೆಜ್ಜೆಯಾಗಿದೆ ಎಂದು ಎಐಸಿಸಿ ವಕ್ತಾರ ಜೈವೀರ್ ಶೆರ್ಗಿಲ್ ಅವರು ಪಕ್ಷದ ಪ್ರಧಾನ ಕಚೇರಿಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಸುಪ್ರೀಂ ಕೋರ್ಟ್ ತೀರ್ಪು ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರ ರಾಜಕೀಯದ ಅಪರಾಧಿಗಳ ವಿರುದ್ಧದ ಹೋರಾಟ ಮತ್ತು ರಾಜಕೀಯ ಎಂಬುದು ಅಪರಾಧ ಮತ್ತು ಅಪರಾಧಿಗಳಿಂದ ಮುಕ್ತವಾಗಬೇಕೆಂಬ ಅವರ ನಿಲುವನ್ನು ಸಮರ್ಥಿಸುತ್ತದೆ ಎಂದು ಶೆರ್ಗಿಲ್ ಹೇಳಿದ್ದಾರೆ.

"ಈ ಐತಿಹಾಸಿಕ ತೀರ್ಪು ಬಂದ ದಿನ, ಬಿಜೆಪಿ ತನ್ನ ಶಾಸಕ ಆನಂದ್ ಸಿಂಗ್ ಅವರ ವಿರುದ್ಧ 15 ಭ್ರಷ್ಟಾಚಾರ ಪ್ರಕರಣಗಳು ಇದ್ದರೂ ಸಹ ಅವರನ್ನು ಕರ್ನಾಟಕದಲ್ಲಿ ಸಚಿವರನ್ನಾಗಿ ನೇಮಿಸಿದೆ ಎಂದು ಬಿಜೆಪಿಯ ವಿರುದ್ಧ ಅವರು ಟೀಕಾಪ್ರಹಾರ ನಡೆಸಿದ್ದಾರೆ.

"ಆನಂದ್ ಸಿಂಗ್ ಅವರನ್ನು ಬಿಜೆಪಿ ನೇಮಕ ಮಾಡುವುದರ ಮೂಲಕ ಬಳ್ಳಾರಿ ಗ್ಯಾಂಗ್ ಅನ್ನು ಆಡಳಿತಕ್ಕೆ ಕರೆತರುವ ತನ್ನ ಬದ್ಧತೆಯನ್ನು ಈಡೇರಿಸಿದೆ" ಎಂದು ಅವರು ವ್ಯಂಗ್ಯವಾಡಿದರು.

"ಆನಂದ್ ಸಿಂಗ್ ನೇಮಕ ಮೂಲಕ ಕರ್ನಾಟಕದಲ್ಲಿ ನಡೆಯುತ್ತಿರುವ ಬಳ್ಳಾರಿ ಗಣಿಗಾರಿಕೆ ಹಗರಣಗಳಿಗೆ ದೇಶದ ಪ್ರಧಾನಿ ಮತ್ತು ಕರ್ನಾಟಕದ ಮುಖ್ಯಮಂತ್ರಿ ಅನುಮೋದನೆ ನೀಡಿದಂತಾಗಿದೆ ಎಂದು ಅವರು ವ್ಯಾಖ್ಯಾನಿಸಿದರು.

"ಅಪರಾಧದ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ಮತ್ತು ಚಾರ್ಜ್‌ಶೀಟ್ ಎದುರಿಸುತ್ತಿರುವ ಯಾವುದೇ ಸಚಿವರನ್ನು ಸೇರಿಸಿಕೊಳ್ಳಬಾರದು ಎಂಬ ಸುಪ್ರೀಂ ಕೋರ್ಟ್‌ನ ನಿರ್ದೇಶನವನ್ನು ಪ್ರಧಾನಿ ಉಲ್ಲಂಘಿಸಿದ್ದಾರೆ ಎಂದು ಶೆರ್ಗಿಲ್ ಹೇಳಿದರು.

ಹೆಸರಾಂತ ಸಂಸ್ಥೆಯೊಂದರ ಪ್ರಕಾರ, ಶೇಕಡಾ 42 ರಷ್ಟು ಬಿಜೆಪಿ ಅಭ್ಯರ್ಥಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಬಾಕಿ ಇದೆ.

106 ಸಂಸದರ ವಿರುದ್ಧ ಗಂಭೀರ ಅಪರಾಧ-ಕೊಲೆ, ಅಪಹರಣ ಇತ್ಯಾದಿ ಪ್ರಕರಣಗಳು ಇವೆ. ಈ ಪೈಕಿ 92 ಸಂಸದರು ಬಿಜೆಪಿಯವರು ಎಂದು ಅವರು ಆರೋಪಿಸಿದರು.

ಶೇ.55 ರಷ್ಟು ಬಿಜೆಪಿ ಸಂಸದರ ವಿರುದ್ಧ ಗಂಭೀರ ಸ್ವರೂಪದ ಪ್ರಕರಣಗಳು ಬಾಕಿ ಇವೆ. ಕೆಲವು ಬಿಜೆಪಿ ಸಂಸದರು ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳಲ್ಲೂ ಆರೋಪಿಗಳಾಗಿದ್ದಾರೆ. ದೆಹಲಿ ವಿಧಾನಸಭಾ ಚುನಾವಣೆಯ ನಂತರ, ಹೊಸ ಬಿಜೆಪಿ ಶಾಸಕರಲ್ಲಿ, ಶೇಕಡಾ 64 ರಷ್ಟು ಬಿಜೆಪಿ ಶಾಸಕರ (5/8) ವಿರುದ್ಧ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ ಎಂದು ಕಾಂಗ್ರೆಸ್ ವಕ್ತಾರರು ವಿವರಿಸಿದರು.

ಯುಎನ್ಐ ಎಎಚ್ 2210