Saturday, Oct 24 2020 | Time 21:10 Hrs(IST)
  • ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕೊರೊನಾ ಪಾಸಿಟಿವ್
  • ದಸರಾ-ಮೆರವಣಿಗೆ: ನಿಗದಿತ ಕಲಾತಂಡಗಳ ನಿಯೋಜನೆ
  • ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಪುತ್ರನಿಗೆ ಇಡಿ ಸಮನ್ಸ್
  • ಜಿಯೋಫೋನ್‌ನಲ್ಲಿ ಹೊಸ ಜಿಯೋ ಕ್ರಿಕೆಟ್ ಆಪ್: ಬಹುಮಾನ ಗೆಲ್ಲಲು ಅವಕಾಶ
  • ರಾಜಕಾಲುವೆ ಒತ್ತುವರಿದಾರರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ; ಆರ್ ಅಶೋಕ
  • ಜಂಬೂಸವಾರಿ 40 ನಿಮಿಷಕ್ಕೆ ಸೀಮಿತ: 300 ಜನರಿಗೆ ಮಾತ್ರ ಪ್ರವೇಶ; ಡಾ ಚಂದ್ರಗುಪ್ತ
  • ಎನ್‌ಸಿಬಿ ಅಧಿಕಾರಿಗಳ ಸೋಗಿನಲ್ಲಿ ಬೆಳ್ಳುಳ್ಳಿಯ ವ್ಯಾಪಾರಿಯ ದರೋಡೆ
  • ಚರ್ಚ್ ಕುಸಿದು 22 ಮಂದಿ ಸಾವು
  • ಉಪ ಚುನಾವಣೆ, ವಿಧಾನ ಪರಿಷತ್ ಚುನಾವಣೆಗಳಲ್ಲಿ ಬಿಜೆಪಿಗೆ ಗೆಲುವು: ಮುಖ್ಯಮಂತ್ರಿ ಯಡಿಯೂರಪ್ಪ ವಿಶ್ವಾಸ
  • ದೇಶಾದ್ಯಂತ ಉಚಿತ ಕೋವಿಡ್‌ ಲಸಿಕೆ ದೊರೆಯಬೇಕು; ಕೇಜ್ರೀವಾಲ್‌
  • ವರುಣ್ ಚಕ್ರವರ್ತಿ ಮಾರಕ ಬೌಲಿಂಗ್ ಗೆ ತತ್ತರಿಸಿದ ಡೆಲ್ಲಿ
  • ಕೆಡುಕಿನ ವಿರುದ್ದ ಒಳಿತು ಸಾಧಿಸಿದ ವಿಜಯದ ಸಂಕೇತ ದಸರಾ- ಉಪರಾಷ್ಟಪತಿ
  • ತ್ರಿವರ್ಣ ಧ್ವಜ; ಮೆಹಬೂಬಾ ಮುಫ್ತಿ ಹೇಳಿಕೆಗೆ ಕಾಂಗ್ರೆಸ್, ಬಿಜೆಪಿ ಆಕ್ರೋಶ
  • ನಾಲ್ಕು ಕೈ, ಕಾಲುಗಳ ಬಾಲಕನಿಗೆ, ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ ಸರ್ಕಾರಿ ಆಸ್ಪತ್ರೆ ವೈದ್ಯರು
  • ಡೆಲ್ಲಿಗೆ 195 ರನ್ ಗುರಿ ನೀಡಿದ ಕೆಕೆಆರ್
Karnataka Share

ರಾಜ್ಯದ ಅಭಿವೃದ್ಧಿ ಕುರಿತು ಚರ್ಚಿಸಲು ಪ್ರಧಾನಿ,ಕೇಂದ್ರ ಸಚಿವರ ಭೇಟಿ : ಬಿ ಎಸ್ ಯಡಿಯೂರಪ್ಪ

ನವದೆಹಲಿ,ಸೆ 18 (ಯುಎನ್ಐ)ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಕುರಿತು ಚರ್ಚಿಸಲು ತಾವು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ಹಲವು ಸಚಿವರನ್ನು ಭೇಟಿ ಮಾಡುತ್ತಿರುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು.

ರಾಷ್ಟ್ರದ ರಾಜಧಾನಿಯಲ್ಲಿ 120 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕರ್ನಾಟಕ ಭವನ-1 “ ಕಾವೇರಿ ” ಕಟ್ಟಡದ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.ಎರಡು ತಳ ಮಹಡಿಗಳೂ,ನೆಲ ಮಹಡಿ ಹಾಗೂ ಆರು ಮಹಡಿ ಒಳಗೊಂಡಂತೆ ಒಟ್ಟು ಒಂಭತ್ತು ಮಹಡಿಗಳ ಈ ಕಟ್ಟಡ ವನ್ನು ನಿರ್ಮಾಣಕ್ಕೆ ಬಾಲಾಜಿ ಕೃಪಾ ಪ್ರಾಜೆಕ್ಸ್ ಪ್ರೈವೇಟ್ ಲಿಮಿಟೆಡ್ ಅವರಿಗೆ ವಹಿಸಿದ್ದು,ಮುಂದಿನ 24 ತಿಂಗ ಳಲ್ಲಿ ಕಟ್ಟಡದ ಕಾಮಗಾರಿಗಳು ಪೂರ್ಣಗೊಳ್ಳಲಿವೆ ಎಂದರು.

ತಮ್ಮ ಪುತ್ರ ಬಿ ವೈ ವಿಜಯೇಂದ್ರ ಅವರನ್ನು ಸೂಪರ್ ಸಿಎಂ ಎಂದು ಬಣ್ಣಿಸಿದ ಪ್ರತಿಪಕ್ಷ ನಾಯಕ ಸಿದ್ದರಾಮ ಯ್ಯ ಅವರ ಆರೋಪವನ್ನು ತಳ್ಳಿ ಹಾಕಿದ ಅವರು,ವಿಜಯೇಂದ್ರ ಅವರು ಭಾರತೀಯ ಜನತಾ ಪಕ್ಷದ ರಾಜ್ಯ ಘಟಕದಲ್ಲಿ ಉಪಾಧ್ಯಕ್ಷರಾಗಿ ರಾಜ್ಯದಲ್ಲಿ ಪಕ್ಷವನ್ನು ಸಂಘಟಿಸುವಲ್ಲಿ ಕಾರ್ಯನಿರ್ವ ಹಿಸುತ್ತಿದ್ದಾರೆಯೇ ಹೊರ ತು,ರಾಜ್ಯ ಸರ್ಕಾರದ ಯಾವುದೇ ಚಟುವಟಿಕೆಗಳಲ್ಲಿ ಹಸ್ತಕ್ಷೇಪ ಮಾಡುತಿಲ್ಲ ಎಂದು ಅವರು ಸ್ಪಷ್ಟಪಡಿಸಿದ ರು.

ಜಾತ್ಯಾತೀತ ಜನತಾ ದಳದ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹಾಗೂ ತಮ್ಮ ನಡುವಿನ ಇತ್ತೀಚಿನ ಭೇಟಿ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ,ಕುಮಾರಸ್ವಾಮಿ ಅವರು ಪ್ರತಿಪಕ್ಷದ ನಾಯಕರಲ್ಲೊಬ್ಬರು.ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚಿಸಲು ಆಗಮಿಸಿದ್ದರು.ಇಂತಹ ವಿಷ ಯಗಳಲ್ಲಿ ಅನಗತ್ಯ ಊಹಾಪೋಹ ಬೇಡ ಎಂದು ಉತ್ತರಿಸಿದರು.

‘ಕಾವೇರಿ’ ಕಟ್ಟಡ ಹಿನ್ನೆಲೆ :ನವದೆಹಲಿಯ ಚಾಣಕ್ಯಪುರಿಯಲ್ಲಿರುವ ಕೌಟಿಲ್ಯ ಮಾರ್ಗದ ಸಂಖ್ಯೆ-10 ರಲ್ಲಿ ಅಂದಿನ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ ಅವರ ಪರಿಕಲ್ಪನೆಯಲ್ಲಿ ರಾಜ್ಯದ ಗಣ್ಯಾತಿಗಣ್ಯರ ವಾಸ್ತವ್ಯಕ್ಕೆ ಎಂದೇ ಕರ್ನಾಟಕ ಭವನ ಕಟ್ಟಡವು 1967 ರಲ್ಲಿ ನಿರ್ಮಾಣಗೊಂಡಿತ್ತು.ಐವತ್ತು ವರ್ಷಗಳಿಗೂ ಹೆಚ್ಚು ಕಾಲದ ಈ ಕಟ್ಟಡದಲ್ಲಿ ಕಾಲಕಾಲಕ್ಕೆ ಹಲವು ಮಾರ್ಪಾಡುಗಳನ್ನು ಮಾಡಲಾಗಿದೆ.ಹವಾಮಾನ ವೈಪರೀತ್ಯಗಳಿಂದ ಕಟ್ಟಡವು ಶಿಥಿಲಗೊಳ್ಳುತ್ತಿರುವುದನ್ನು ಪರಿವೀಕ್ಷಿಸಿ ಹಳೆಯ ಕಟ್ಟಡವನ್ನು ಕೆಡವಿ, ಅದೇ ಸ್ಥಳದಲ್ಲಿ ಹೊಸ ಕಟ್ಟಡವನ್ನು ನಿರ್ಮಿಸುವುದು ಸೂಕ್ತ ಎಂದು 2018 ರ ಫೆಬ್ರವರಿ 1 ರಂದು ಸಿವಿಲ್ ಏಡ್ ಟೆಕ್ನೋ ಕ್ಲಿನಿಕ್ ತಾಂತ್ರಿಕ ಸಂಸ್ಥೆ ನೀಡಿದ ತಾಂತ್ರಿಕ ಶಿಫಾರಸ್ಸನ್ನು ಅಂಗೀಕರಿಸಿದ ರಾಜ್ಯ ಸರ್ಕಾರ ಕಟ್ಟಡ ಪುನನಿರ್ಮಾಣ ಕಾಮಗಾರಿಗಳಿಗೆ 87 ಕೋಟಿ ರೂ ಗಳಿಗೆ ಆಡಳಿತಾತ್ಮಕ ಅನುಮೋದನೆ ಹಾಗೂ 81 ಕೋಟಿ ರೂ ತಾಂತ್ರಿಕ ಮಂಜೂರಾತಿ ನೀಡಿದೆ.ಕಟ್ಟಡದ ನಿರ್ಮಾಣಕ್ಕೆ ಬಾಲಾಜಿ ಕೃಪಾ ಪ್ರಾಜೆಕ್ಸ್ ಪ್ರೈವೇಟ್ ಲಿಮಿಟೆಡ್ ಆಯ್ಕೆಯಾಗಿ ದ್ದು,ಮುಂದಿನ ಎರಡು ವರ್ಷಗಳಲ್ಲಿ ಮತ್ತೆ ಮೇಳೈಸಲಿರುವ ಕಾವೇರಿ ಕಟ್ಟಡವು ಕೌಟಿಲ್ಯ ಮಾರ್ಗದ ಹೆಗ್ಗುರು ತಾಗಿ ಮತ್ತೆ ಕಂಗೊಳಿಸಲಿದೆ.
ಉದ್ದೇಶಿತ ಕಟ್ಟಡದ ನೀಲನಕ್ಷೆ ಹಾಗೂ ಹಾಲಿ ಕಟ್ಟದ ಸ್ಥಳ ಸಮೀಕ್ಷೆ ಮಾಡಿ, ಕರ್ನಾಟಕ ಭವನದ ವಿವಿಧ ಕಚೇರಿಗಳಿಗೆ ನಿಗದಿಪಡಿಸಿದ ವಿಸ್ತೀರ್ಣವನ್ನು ಅವಶ್ಯಕತೆಗೆ ತಕ್ಕಂತೆ ಸೀಮಿತಗೊಳಿಸಲು ಹಾಗೂ ಪ್ರಸ್ತುತ ಕರ್ನಾ ಟಕ ಭವನಕ್ಕೆ ಹೊಂದಿಕೊಂಡಿರುವ ಅನೆಕ್ಸ್ ಕಟ್ಟಡದಲ್ಲಿರುವ ಐಷಾರಾಮಿ ಕೊಠಡಿಗಳನ್ನು ಉಪಯೋಗಿಸಲು ಹಾಗೂ ಒಂದು ಹೆಚ್ಚುವರಿ ಐಷಾರಾಮಿ ಕೊಠಡಿಯ ನಿರ್ಮಾಣವನ್ನು ಕೈಬಿಡಲು ಮುಖ್ಯಮಂತ್ರಿಯವರು ಸೂಚಿಸಿದ ಹಿನ್ನೆಲೆಯಲ್ಲಿ ಗಣ್ಯಾತಿಗಣ್ಯರ ಐಷಾರಾಮಿ ಕೊಠಡಿಗಳ ಸಂಖ್ಯೆ ನಾಲ್ಕರಿಂದ ಎರಡಕ್ಕೆ ಇಳಿಕೆಯಾ ಗಿದೆ.

ಗಣ್ಯರನ್ನು ಭೇಟಿ ಮಾಡಲು ಆಗಮಿಸುವ ಸಂದರ್ಶಕರಿಂದ, ಗಣ್ಯರ ಖಾಸಗೀತನಕ್ಕೆ ಧಕ್ಕೆಯಾಗದಂತೆ ನೋಡಿ ಕೊಳ್ಳಲು ಪ್ರತಿ ಐಷಾರಾಮಿ ಕೊಠಡಿಯಲ್ಲೂ ಒಂದು ಹೆಚ್ಚಿನ ಶೌಚಾಲಯವನ್ನು ನಿರ್ಮಿಸಲು ಯೋಜಿಸಲಾ ಗಿದೆ. ಅದರಂತೆ, ಮಾರ್ಪಡಿತ ಅಂದಾಜುಪಟ್ಟಿ ಮೊತ್ತ 120 ಕೋಟಿ ರೂ ಗಳಿಗೆ ಪರಿಷ್ಕೃತ ಆಡಳಿತಾತ್ಮಕ ಅನು ಮೋದನೆ ದೊರೆತಿದೆ.

ಕರ್ನಾಟಕ ಭವನದಲ್ಲಿ ಕಚೇರಿಗಳ ಉಪಯೋಗಕ್ಕಾಗಿ ನಿಗದಿಪಡಿಸಿದ ಕಚೇರಿ ವಿಸ್ತೀರ್ಣವನ್ನು ಮಿತಗೊಳಿಸಿ, ಈ ಸ್ಥಳವನ್ನು ಬಳಸಿಕೊಂಡು ಗಣ್ಯರ ಐಷಾರಾಮಿ ಕೊಠಡಿಗಳ ಸಂಖ್ಯೆಯನ್ನು 14 ರಿಂದ 31 ಕ್ಕೆ ಹಾಗೂ ಗಣ್ಯರ ಕೊಠಡಿಗಳ ಸಂಖ್ಯೆಯನ್ನು 12 ರಿಂದ 15 ಕ್ಕೆ, ಒಟ್ಟಾರೆ ಗಣ್ಯಾತಿಗಣ್ಯರ ಕೊಠಡಿಗಳನ್ನು 30 ರಿಂದ 48 ಕ್ಕೆ ಹೆಚ್ಚಿಸಲಾಗಿದೆ.
ಕಾವೇರಿ ಕಟ್ಟಡದಲ್ಲಿ ಏನೇನಿದೆ : ಕರ್ನಾಟಕ ಭವನ-1 ಕಾವೇರಿ ಕಟ್ಟಡದ ಕೆಳತಳ ( ಲೋವರ್ ಬೇಸ್‍ ಮೆಂ ಟ್ ) ಮಹಡಿ ಹಾಗೂ ಮೇಲ್ತಳ ( ಅಪ್ಪರ್ ಬೇಸ್‍ಮೆಂಟ್ ) ಮಹಡಿಯಲ್ಲಿ ತಲಾ 2335 ಚದುರ ಮೀಟರ್ ಪ್ರದೇಶವಿದೆ. ಕೆಳತಳ ಮಹಡಿಯಲ್ಲಿ ನಾಲ್ಕು ಚಕ್ರಗಳ 151 ವಾಹನಗಳು ಹಾಗೂ 107 ದ್ವಿ-ಚಕ್ರ ವಾಹನಗಳ ನಿಲುಗಡೆಗೆ ಅವಕಾಶವಿರುತ್ತದೆ. ಮೇಲ್ತಳ ಮಹಡಿಯಲ್ಲಿ ವಾಹನ ಚಾಲಕರ ಕೊಠಡಿ, ಭ್ರದ್ರತಾ ಸಿಬ್ಬಂದಿಯ ವಿಶ್ರಾಂತಿ ಕೊಠಡಿ, ಬಟ್ಟೆ ಶುಚಿಗೊಳಿಸಿ ಇಸ್ತ್ರಿ ಮಾಡುವ ಲಾಂಡ್ರಿ ಕೂಡಾ ಇರುತ್ತದೆ.

ಅಲ್ಲದೆ,ಇದೇ ಕಟ್ಟಡದಲ್ಲಿ 1030 ಚದುರ ಮೀಟರ್ ಪ್ರದೇಶದ ನೆಲ ಮಹಡಿ ಮಾತ್ರವಲ್ಲದೆ,ಅದೇ ವಿಸ್ತೀರ್ಣದ ಆರು ಮಹಡಿಗಳು ಇರುತ್ತವೆ.ನೆಲಮಹಡಿಯಲ್ಲಿ ಸ್ವಾಗತ ಮತ್ತು ನಿರೀಕ್ಷಣಾ ಕೊಠಡಿ,ವೀಡಿಯೋ ಸಮ್ಮೇಳನ ಕೊಠಡಿ,ಅಡುಗೆ ವಸ್ತುಗಳ ಉಗ್ರಾಣ ( ಪ್ಯಾಂಟ್ರಿ ),ಗಣ್ಯಾತಿಗಣ್ಯರ ವಿಶ್ರಾಂತಿ ಕೊಠಡಿ,ಭೋಜನಾಲಯ,ಸಭಾ ಕೊಠಡಿ,ಶ್ರವ್ಯ-ದೃಶ್ಯ ಕೊಠಡಿ,ಚರ್ಚಾ ಕೊಠಡಿ,ಸಮೃದ್ಧ ಭೋಜನಾಲಯ ಹಾಗೂ ಶೌಚಾಲಯಗಳಿರುತ್ತವೆ.
ಮೊದಲ ಮಹಡಿಯಲ್ಲಿ ಸಮನ್ವಯ ಶಾಖೆ,ಭದ್ರತಾ ಕೊಠಡಿ,ವಾಸ್ತವ್ಯ ಮತ್ತು ಉಗ್ರಾಣ ವಿಭಾಗದ ವ್ಯವಸ್ಥಾಪ ಕರ ಕೊಠಡಿ,ಸಹಾಯಕ ಕಾರ್ಯಪಲಕ ಅಭಿಯಂತರರ ಕೊಠಡಿ,ಲೆಕ್ಕಪತ್ರ ವಿಭಾಗ ಮತ್ತು ಕೊಠಡಿ,ಗಣಕ ನಿಯಂತ್ರಣ ಕೊಠಡಿ,ಆಡಳಿತ ವಿಭಾಗ,ಶಿಷ್ಠಾಚಾರ ಕಚೇರಿ,ತಾಂತ್ರಿಕ ವಿಭಾಗ,ವೈದ್ಯಕೀಯ ಸೇವಾ ಕೊಠಡಿ ಹಾಗೂ ಅಡುಗೆ ವಸ್ತುಗಳ ಉಗ್ರಾಣ( ಪ್ಯಾಂಟ್ರಿ )ಗೆ ಅವಕಾಶ ಕಲ್ಪಿಸಲಾಗಿದೆ.

ಎರಡನೇ ಮಹಡಿಯಲ್ಲಿ ನಿವಾಸಿ ಆಯುಕ್ತರು,ಅಪರ ನಿವಾಸಿ ಆಯುಕ್ತರು,ಮನೆ ವಾರ್ತೆ ವಿಭಾಗದ ಉಪ ನಿವಾ ಸಿ ಆಯುಕ್ತರು ಮತ್ತು ಸಾರ್ವಜನಿಕ ಸಂಪರ್ಕ ವಿಭಾಗದ ಉಪ ನಿವಾಸಿ ಆಯುಕ್ತರು,ಸಹಾಯಕ ನಿವಾಸಿ ಆಯು ಕ್ತರು ಹಾಗೂ ಬೆಂಬಲಿತ ಸಿಬ್ಬಂದಿಯ ಕಚೇರಿಗಳು ಇರುತ್ತವೆ.ಅಧಿಕಾರಿಗಳ ವಿಶ್ರಾಂತಿ ಗೃಹ,ಅಧಿಕಾರಿಗಳ ಭೋಜನಾಲಯ,ಮನರಂಜನಾ ತಾಣ ಹಾಗೂ ಅಡುಗೆ ವಸ್ತುಗಳ ಉಗ್ರಾಣ ( ಪ್ಯಾಂಟ್ರಿ ) ಅವಕಾಶ ಕಲ್ಪಿಸಲು ಯೋಜಿಸಲಾಗಿದೆ.

ಮೂರನೇ ಮಹಡಿಯಲ್ಲಿ ಮುಖ್ಯ ನ್ಯಾಯಮೂರ್ತಿಗಳ ಕೊಠಡಿ, ಕಾನೂನು ಕೋಶ ಮತ್ತು ಸಂಸದರ ಕೋಶದ ಕಚೇರಿಗಳು,ವಿಶೇಷ ಮತ್ತು ಅಪರ ಪ್ರತಿನಿಧಿಗಳ ಕಚೇರಿಗಳು ಹಾಗೂ ಆಪ್ತ ಕಾರ್ಯದರ್ಶಿಗಳ ಕೊಠಡಿ,ಕಚೇರಿ ವಿಸ್ತೀರ್ಣ,ಗ್ರಂಥಾಲಯ,ಅತಿಥಿ ಗೃಹ,ವ್ಯಾಯಾಮ ಶಾಲೆ ಹಾಗೂ ಅಡುಗೆ ವಸ್ತುಗಳ ಉಗ್ರಾಣ ( ಪ್ಯಾಂಟ್ರಿ ) ಕ್ಕೆ ವಿನ್ಯಾಸ ರೂಪಿಸಲಾಗಿದೆ.
ನಾಲ್ಕನೇ ಮಹಡಿಯಲ್ಲಿ ಗಣ್ಯಾತಿಗಣ್ಯರ ಕೊಠಡಿಗಳು,ಆರು ಐಷಾರಾಮಿ ಕೊಠಡಿಗಳು,ಯೋಗ ಕೇಂದ್ರ, ವ್ಯಾಯಾಮ ಶಾಲೆ ಹಾಗೂ ಅಡುಗೆ ವಸ್ತುಗಳ ಉಗ್ರಾಣ ( ಪ್ಯಾಂಟ್ರಿ ) ಒಳಗೊಂಡಿದೆ.
ಐದನೇ ಮಹಡಿಯಲ್ಲಿ ಗಣ್ಯಾತಿಗಣ್ಯರ ಕೊಠಡಿ ಮಲ್ಲಿಗೆ ಒಳಗೊಂಡಂತೆ ಮೂರು ಐಷಾರಾಮಿ ಕೊಠಡಿಗಳು ದ್ದು,ಆರನೇ ಮಹಡಿಯಲ್ಲಿ ಗಣ್ಯಾತಿಗಣ್ಯರ ಕೊಠಡಿ ಸಂಪಿಗೆ ಒಳಗೊಂಡಂತೆ ಐರು ಐಷಾರಾಮಿ ಕೊಠಡಿಗಳು ಇರುತ್ತವೆ.
ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಖಾತೆಗಳ ಹೊತ್ತ ಉಪ ಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ,ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ ಸದಾನಂದಗೌಡ, ಕೇಂದ್ರ ಸಂಸದೀಯ ವ್ಯಹಾರಗಳು,ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ ಸೇರಿದಂತೆ ಸಂಸದರು, ಸಚಿವರು,ಶಾಸಕರು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯ್ ಭಾಸ್ಕರ್,ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

ಯುಎನ್ಐ ಎಸ್ಎಂಆರ್ ವಿಎನ್ 1255