Thursday, Jan 21 2021 | Time 04:53 Hrs(IST)
  • ಉಪ ಸಭಾಪತಿ ಚುನಾವಣೆ ನಂತರ ಸಭಾಪತಿ ಸ್ಥಾನಕ್ಕೆ ಕೆ ಪ್ರತಾಪ ಚಂದ್ರ ಶೆಟ್ಟಿ ರಾಜೀನಾಮೆ !?
  • ವಿಧಾನ ಮಂಡಲ ಕಲಾಪ ಅಧಿಸೂಚನೆಗೂ ಮುನ್ನವೇ ಸಭಾಪತಿ ವಿರುದ್ಧ ಅವಿಶ್ವಾಸ ನೋಟೀಸ್ ಸ್ವೀಕರಿಸಿದ ಕಾರ್ಯದರ್ಶಿ
Special Share

ವಿಧಾನ ಪರಿಷತ್ ಪರಿಷತ್ ಚುನಾವಣೆಯಲ್ಲೂ ಬಿಜೆಪಿಗೆ ಮುಖಭಂಗ

ಮುಂಬೈ ಡಿ, 4 (ಯುಎನ್ಐ) ಮಹಾರಾಷ್ಟ್ರದ 6 ವಿಧಾನ ಪರಿಷತ್ ಸ್ಥಾನಗಳಿಗೆ ನಡೆದ ಚುನಾವಣೆಯ 6 ಸ್ಥಾನಗಳ ಪೈಕಿ 4ರಲ್ಲಿ ಶಿವಸೇನಾ, ಕಾಂಗ್ರೆಸ್ ಮತ್ತು ಎನ್ಸಿಪಿ ಮಹಾಮೈತ್ರಿ ಕೂಟ ಗೆಲುವು ಸಾಧಿಸಿದ್ದು, ಬಿಜೆಪಿಗೆ ತೀವ್ರ ಮುಖಭಂಗವಾಗಿದೆ.
ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಪಡೆದಿದ್ದ ಬಿಜೆಪಿಗೆ ಮತ್ತೊಮ್ಮೆ ಮುಖಭಂಗವಾಗಿದೆ. ಈ ಕುರಿತು ಮಾತನಾಡಿದ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಚುನಾವಣೆಯಲ್ಲಿ ಮಹಾವಿಕಾಸ್ ಅಘಾಡಿ ಮೈತ್ರಿಕೂಟವನ್ನು ಲಘುವಾಗಿ ಪರಿಗಣಿಸಿದ್ದೇವು ಎಂದು ಹೇಳುವ ಮೂಲಕ ಪರೋಕ್ಷವಾಗಿ ಸೋಲೊಪ್ಪಿಕೊಂಡಿದ್ದಾರೆ.
ಮಹಾರಾಷ್ಟ್ರ ವಿಧಾನ ಪರಿಷತ್ ಚುನಾವಣೆಯಲ್ಲಿ ಆಡಳಿತಾರೂಢ ಶಿವಸೇನೆ-ಎನ್ಸಿಪಿ-ಕಾಂಗ್ರೆಸ್ ಒಕ್ಕೂಟ ನಾಲ್ಕು ಸ್ಥಾನಗಳನ್ನು ಗೆದ್ದಿದೆ. ಬಿಜೆಪಿ ಕೇವಲ ಒಂದು ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದರೆ, ಉಳಿದ ಒಂದು ಸ್ಥಾನ ಸ್ವತಂತ್ರ ಅಭ್ಯರ್ಥಿಯ ಪಾಲಾಗಿದೆ. ಈ ವಾರದ ಆರಂಭದಲ್ಲಿ ಮತದಾನ ನಡೆದಿತ್ತು. ಆಡಳಿತರೂಢ ಮಹಾವಿಕಾಸ್ ಅಘಾಡಿ ಮೈತ್ರಿ ನಾಲ್ಕು ಸ್ಥಾನ ಗಳಿಸಿದ್ದರೂ ಕೂಡ, ಶಿವಸೇನೆ ಒಂದೇ ಒಂದು ಸ್ಥಾನವನ್ನು ಗೆದ್ದಿಲ್ಲ .
ಶಿವಸೇನೆಯ ಏಕೈಕ ಅಭ್ಯರ್ಥಿ ಅಮರಾವತಿಯಲ್ಲಿ ಸ್ಪರ್ಧಿಸಿ ಸೋತಿದ್ದಾರೆ ಮಿತ್ರಪಕ್ಷಗಳಾದ ಕಾಂಗ್ರೆಸ್ ಮತ್ತು ಎನ್ಸಿಪಿ ತಲಾ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಎರಡರಲ್ಲಿಯೂ ಗೆಲುವು ಸಾಧಿಸಿವೆ.ಬಿಜೆಪಿ ತನ್ನ ಭದ್ರಕೋಟೆಗಳೆಂದು ಭಾವಿಸಿದ್ದ ಪದವೀಧರ ಕ್ಷೇತ್ರಗಳಲ್ಲಿ ಮತ್ತು ನಾಗಪುರದಲ್ಲಿ ಸೋಲು ಕಂಡಿರುವುದು ಬಹಳ ಮಹತ್ವವಾಗಿದೆ.
ಯುಎನ್ಐ ಕೆಎಸ್ಆರ್ 2059
More News
ಸ್ವಯಂ ಘೋಷಿತ ಆಧ್ಯಾತ್ಮಿಕ ನಾಯಕರ ಆಶ್ರಮಗಳ ವಿರುದ್ದ ಪಿಐಎಲ್ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಸ್ವಯಂ ಘೋಷಿತ ಆಧ್ಯಾತ್ಮಿಕ ನಾಯಕರ ಆಶ್ರಮಗಳ ವಿರುದ್ದ ಪಿಐಎಲ್ ತಿರಸ್ಕರಿಸಿದ ಸುಪ್ರೀಂ ಕೋರ್ಟ್

20 Jan 2021 | 3:56 PM

ನವದೆಹಲಿ, ಜ 20(ಯುಎನ್ಐ)- ಸ್ವಯಂ ಘೋಷಿತ ಆಧ್ಯಾತ್ಮಿಕ ಗುರುಗಳು ನಡೆಸುತ್ತಿರುವ ಆಶ್ರಮಗಳ ವಿರುದ್ಧ ಕ್ರಮ ಜರುಗಿಸಲು ಆದೇಶಿಸಬೇಕು ಎಂದು ಕೋರಿ ಸಲ್ಲಿಸಿದ್ದ ಖಟ್ಲೆಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.

 Sharesee more..