Sunday, Nov 29 2020 | Time 19:07 Hrs(IST)
  • ಆಜಾದ್ ಭವನ ನೂತನ ಕಟ್ಟಡ 1 ಕೋಟಿಯಲ್ಲಿ ನಿರ್ಮಿಸಿರುವುದು ಶ್ಲಾಘನೀಯ - ಎಚ್ ನಾಗೇಶ್
  • ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿಗೆ ಜನಬೆಂಬಲ; ಗೋವಿಂದ ಕಾರಜೋಳ
  • ಭಾರತದ ಬೌಲರ್‌ಗಳು ಪರಿಣಾಮಕಾರಿಯಾಗಿ ಬೌಲಿಂಗ್‌ ಮಾಡಲಿಲ್ಲ: ವಿರಾಟ್‌ ಕೊಹ್ಲಿ
  • ನಮ್ಮಿಂದಲೇ ಕಾಂಗ್ರೆಸ್ ಪಕ್ಷ ಎಂಬ ಭ್ರಮೆ ಬೇಡ: ಡಿ ಕೆ ಶಿವಕುಮಾರ್
  • ಕೃಷ್ಟಿ ಸುಧಾರಣೆಯಿಂದ ರೈತರಿಗೆ ಮುಕ್ತ ಅವಕಾಶ, ಹಕ್ಕು ಲಭ್ಯ; ಪ್ರಧಾನಿ ಪ್ರತಿಪಾದನೆ
  • ಮುಖ್ಯಮಂತ್ರಿ ಯಡಿಯೂರಪ್ಪ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದಾರೆ : ಮಹೇಶ್ ಕುಮಠಹಳ್ಳಿ ವಿಶ್ವಾಸ
  • ಸರ್ಕಾರದ ಮಾತುಕತೆಯ ಪ್ರಸ್ತಾಪವನ್ನು ತಿರಸ್ಕರಿಸಿದ ರೈತ ಸಂಘಟನೆಗಳು
  • ಮಹಿಳೆಗೆ ವಂಚಿಸಿದ ನೈಜೀರಿಯಾ ಪ್ರಜೆ ಬಂಧನ
  • ಯೋಗೇಶ್ವರ್ ಪರ ಮಾತನಾಡುವವರು ಸಚಿವ ಸ್ಥಾನ ತ್ಯಾಗ ಮಾಡಿಲಿ : ಎಂ ಪಿ ರೇಣುಕಾಚಾರ್ಯ
  • ಬಿಜೆಪಿ, ಆರ್‌ಎಸ್‌ಎಸ್‌ಗೆ ದಲಿತರು, ಆದಿವಾಸಿಗಳ ಅಭಿವೃದ್ಧಿ ಬೇಕಿಲ್ಲ; ರಾಹುಲ್‌
  • ಆರ್‌ಎಂಎಂ ಪದಾಧಿಕಾರಿಗಳೊಂದಿಗೆ ನಾಳೆ ರಜನೀಕಾಂತ್‍ ಮಹತ್ವದ ಭೇಟಿ: ರಾಜಕೀಯ ನಿಲುವು ಕುರಿತು ಸ್ಪಷ್ಟನೆ
  • ಮಾರಕಾಸ್ತ್ರಗಳಿಂದ ಕೊಚ್ಚಿ‌ ಯುವಕನ ಕೊಲೆ
  • ಸಾಗರ ಭದ್ರತೆಯನ್ನು ಹೆಚ್ಚಿಸುವಲ್ಲಿ ಭಾರತ, ಶ್ರೀಲಂಕಾ, ಮಾಲ್ಡೀವ್ಸ್ ನಿಂದ ಮಹತ್ವದ ಕ್ರಮ
  • ವಿದ್ಯುತ್ ತಂತಿ ತಗುಲಿ ಕಂಬದಲ್ಲೇ ಲೈನ್ ಮನ್ ಸಾವು: ಮತ್ತೋರ್ವ ಚಿಂತಾಜನಕ
  • ವಿದ್ಯುತ್ ಸ್ಪರ್ಶ: ಕಂಟೈನರ್ ಕ್ಲೀನರ್ ಗೆ ಗಂಭೀರ ಗಾಯ
National Share

ವಿಶ್ವ ಮಾನಸಿಕ ಆರೋಗ್ಯ ದಿನ: ಮಾನಸಿಕ ಆರೋಗ್ಯ ಕ್ಷೇತ್ರದಲ್ಲಿ ಹೂಡಿಕೆ ಹೆಚ್ಚಳಕ್ಕೆ ಒತ್ತು

ನವದೆಹಲಿ, ಅ 10 [ಯುಎನ್ಐ] ಇಂದು ವಿಶ್ವ ಮಾನಸಿಕ ಆರೋಗ್ಯ ದಿನ. ನಿರ್ಲಕ್ಷ್ಯಕ್ಕೆ ಒಳಗಾಗಿರುವ ಮಾನಸಿಕ ಆರೋಗ್ಯ ವಲಯದಲ್ಲಿ ಹೂಡಿಕೆ ಹೆಚ್ಚಿಸುವುದು ಈ ಬಾರಿಯ ಗುರಿಯಾಗಿದೆ.

ಕೋವಿಡ್-19 ಸಂಕಷ್ಟ ಪರಿಸ್ಥಿತಿಯಲ್ಲಿ ಮಾನಸಿಕ ಆರೋಗ್ಯ, ರಕ್ಷಣೆ ಈ ಬಾರಿಯ ಬಹುದೊಡ್ಡ ಸವಾಲಾಗಿದ್ದು, ಇಂತಹ ಪರಿಸ್ಥಿತಿಯಲ್ಲಿ ಸೋಂಕು ನಿಯಂತ್ರಣದಲ್ಲಿ ತೊಡಗಿರುವ ಕೊರೋನಾ ಸೇನಾನಿಗಳು, ಆರೋಗ್ಯ ಕಾರ್ಯಕರ್ತರ ಸೇವೆ ಸ್ಮರಿಸುವ ಉದ್ದೇಶ ಹೊಂದಲಾಗಿದೆ.

ಸೋಂಕು ನಿಯಂತ್ರಣ ಉದ್ದೇಶದಿಂದ ಶಾಲಾ ಚಟುವಟಿಕೆಯಿಲ್ಲದೆ ಮನೆಯಲ್ಲಿಯೇ ವಿದ್ಯಾರ್ಥಿಗಳು ಇರುವುದರಿಂದ ಅವರ ಮಾನಸಿಕ ಆರೋಗ್ಯ ಕ್ಷೀಣಿಸಿದೆ. ವಿಶ್ವ ಮಾನಸಿಕ ಆರೋಗ್ಯ ದಿನದ ಈ ಸಂದರ್ಭದಲ್ಲಿ ಮಾನಸಿಕ ಆರೋಗ್ಯ ರಕ್ಷಣೆಗೆ ಹೂಡಿಕೆ ಹೆಚ್ಚಿಸುವ ಧ್ಯೇಯ ಹೊಂದಲಾಗಿದೆ. ದೈಹಿಕ ಆರೋಗ್ಯಕ್ಕೆ ನೀಡುವಷ್ಟೇ ಮನ್ನಣೆಯನ್ನು ಮಾನಸಿಕ ಆರೋಗ್ಯಕ್ಕೂ ಕೊಡಬೇಕು ಎನ್ನುವುದು ವಿಶ್ವ ಆರೋಗ್ಯ ಸಂಸ್ಥೆಯ ಪ್ರಧಾನ ಆಶಯವಾಗಿದೆ.
ಬರುವ ದಿನಗಳಲ್ಲಿ ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದಲ್ಲಿ ರೂಪಿಸಿ ಜಾರಿಗೊಳಿಸುವ ಕಾರ್ಯಕ್ರಮಗಳಿಗೆ ಹೆಚ್ಚು ಹಣ ನಿಗದಿ ಮಾಡಬೇಕು. ಜಾಗತಿಕವಾಗಿ ಹಲವು ವರ್ಷಗಳಿಂದ ಮಾನಸಿಕ ಆರೋಗ್ಯ ಕ್ಷೇತ್ರಕ್ಕೆ ಹಣ ತೊಡಗಿಸದೆ ಆಗಿರುವ ನಿರ್ಲಕ್ಷ್ಯವನ್ನು ಸರಿಪಡಿಸುವುದು ಪ್ರಮುಖ ಉದ್ದೇಶವಾಗಿದೆ.

ಮಾನಸಿಕ ಆರೋಗ್ಯ ಕುರಿತು ಸಮಸ್ಯೆಗಳು ಮತ್ತು ವಿವಿಧ ಕಾರ್ಯಕ್ರಮಗಳು, ಚಿಕಿತ್ಸೆ ಕುರಿತು ಅರಿವು ಮೂಡಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡಿದೆ.


ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್, ಮಾನಸಿಕ ಆರೋಗ್ಯ ರಕ್ಷಣೆಗೆ ಜಾಗೃತಿ ಮೂಡಿಸುವ ವಿಚಾರದಲ್ಲಿ ತೀರಾ ಹಿಂದುಳಿದಿದ್ದು, ಇದನ್ನು ಸರಿಪಡಿಸಬೇಕಾಗಿದೆ. ಇದೀಗ ಮಾನಸಿಕ ಚಿಕಿತ್ಸೆಗೆ ಒತ್ತು ನೀಡುವ ಕಾಲ ಎದುರಾಗಿದೆ. ಸಮಗ್ರ ಮತ್ತು ಗುಣಮಟ್ಟದ ಮಾನಸಿಕ ಆರೋಗ್ಯ ಸೇವೆ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.

ಯುಎನ್ಐ ವಿಎನ್ 1622
More News
ದೇಶದಲ್ಲಿ 41,810 ಹೊಸ ಕೋವಿಡ್‍-19 ಸೋಂಕು ಪ್ರಕರಣಗಳು ವರದಿ: ಒಟ್ಟು ಸಂಖ್ಯೆ 93 92 ಲಕ್ಷಕ್ಕೆ ಏರಿಕೆ

ದೇಶದಲ್ಲಿ 41,810 ಹೊಸ ಕೋವಿಡ್‍-19 ಸೋಂಕು ಪ್ರಕರಣಗಳು ವರದಿ: ಒಟ್ಟು ಸಂಖ್ಯೆ 93 92 ಲಕ್ಷಕ್ಕೆ ಏರಿಕೆ

29 Nov 2020 | 6:28 PM

ನವದೆಹಲಿ, ನ 29 (ಯುಎನ್‌ಐ) ಭಾರತದಲ್ಲಿ ಕೊರೋನಾವೈರಸ್ ನ 41,810 ಹೊಸ ಸೋಂಕು ಪ್ರಕರಣಗಳು ವರದಿಯಾಗುವುದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 93,92,920 ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತನ್ನ ನವೀಕೃತ ಮಾಹಿತಿಯಲ್ಲಿ ತಿಳಿಸಿದೆ.

 Sharesee more..
ನಿವಾರ್ ಚಂಡಮಾರುತ: ಆಂಧ್ರದಲ್ಲಿ ಆರು ಮಂದಿ ಸಾವು, 543 ಕಿ ಮೀ ಉದ್ದದ ರಸ್ತೆ ಹಾನಿ

ನಿವಾರ್ ಚಂಡಮಾರುತ: ಆಂಧ್ರದಲ್ಲಿ ಆರು ಮಂದಿ ಸಾವು, 543 ಕಿ ಮೀ ಉದ್ದದ ರಸ್ತೆ ಹಾನಿ

29 Nov 2020 | 6:20 PM

ತಿರುಪತಿ, ನ 29 (ಯುಎನ್‌ಐ) ಕಳೆದ ವಾರ ತಮಿಳುನಾಡು ಕರಾವಳಿಯನ್ನು ಅಪ್ಪಳಿಸಿದ ನಿವಾರ್ ಚಂಡಮಾರುತ, ಚಿತ್ತೂರು ಜಿಲ್ಲೆಯ 21 ಮಂಡಲಗಳ 245 ಗ್ರಾಮಗಳ ಮೇಲೆ ಪರಿಣಾಮ ಬೀರಿದೆ.

 Sharesee more..
ಆರ್‌ಎಂಎಂ ಪದಾಧಿಕಾರಿಗಳೊಂದಿಗೆ ನಾಳೆ ರಜನೀಕಾಂತ್‍ ಮಹತ್ವದ ಭೇಟಿ: ರಾಜಕೀಯ ನಿಲುವು ಕುರಿತು ಸ್ಪಷ್ಟನೆ

ಆರ್‌ಎಂಎಂ ಪದಾಧಿಕಾರಿಗಳೊಂದಿಗೆ ನಾಳೆ ರಜನೀಕಾಂತ್‍ ಮಹತ್ವದ ಭೇಟಿ: ರಾಜಕೀಯ ನಿಲುವು ಕುರಿತು ಸ್ಪಷ್ಟನೆ

29 Nov 2020 | 5:15 PM

ಚೆನ್ನೈ, ನ 29 (ಯುಎನ್‌ಐ) ಸೂಪರ್‌ಸ್ಟಾರ್ ರಜನಿಕಾಂತ್ ಅವರು ನಾಳೆ ರಜಿನಿ ಮಕ್ಕಳ್‍ ಮಂದಿರಂ (ಆರ್ ಎಂಎಂ) ಪದಾಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದು, ನಾಲ್ಕೈದು ತಿಂಗಳಲ್ಲಿ ಎದುರಾಗುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ರಾಜಕೀಯಕ್ಕೆ ಪ್ರವೇಶಿಸಬೇಕೇ, ಬೇಡವೇ ಎಂಬ ಕುರಿತು ನಿರ್ಧರಿಸಲಿದ್ದಾರೆ.

 Sharesee more..
ಬಿಜೆಪಿ, ಆರ್‌ಎಸ್‌ಎಸ್‌ಗೆ ದಲಿತರು, ಆದಿವಾಸಿಗಳ ಅಭಿವೃದ್ಧಿ ಬೇಕಿಲ್ಲ; ರಾಹುಲ್‌

ಬಿಜೆಪಿ, ಆರ್‌ಎಸ್‌ಎಸ್‌ಗೆ ದಲಿತರು, ಆದಿವಾಸಿಗಳ ಅಭಿವೃದ್ಧಿ ಬೇಕಿಲ್ಲ; ರಾಹುಲ್‌

29 Nov 2020 | 5:10 PM

ನವದೆಹಲಿ, ನ 29 (ಯುಎನ್ಐ) ಹಣದ ಕೊರತೆಯ ನೆಪವೊಡ್ಡಿ ಕೇಂದ್ರ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವಿದ್ಯಾರ್ಥಿ ವೇತನ ತಡೆಹಿಡಿದಿದೆ ಎಂದು ಆರೋಪಿಸಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸೋಮವಾರ, ಎಸ್‌ಸಿ ಮತ್ತು ಎಸ್‌ಟಿ ಯಾವಾಗಲೂ ಹಿಂದುಳಿದಿರಬೇಕು ಎಮದು ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಬಯಸುತ್ತದೆ ಎಂದು ಆರೋಪಿಸಿದ್ದಾರೆ.

 Sharesee more..