Monday, Mar 1 2021 | Time 02:37 Hrs(IST)
Karnataka Share

ಶಿವಮೊಗ್ಗ ದುರಂತ; ಉನ್ನತ ಮಟ್ಟದ ತನಿಖೆಗೆ ಮುಖ್ಯಮಂತ್ರಿ ಆದೇಶ

ಶಿವಮೊಗ್ಗ ದುರಂತ; ಉನ್ನತ ಮಟ್ಟದ ತನಿಖೆಗೆ ಮುಖ್ಯಮಂತ್ರಿ ಆದೇಶ
ಶಿವಮೊಗ್ಗ ದುರಂತ; ಉನ್ನತ ಮಟ್ಟದ ತನಿಖೆಗೆ ಮುಖ್ಯಮಂತ್ರಿ ಆದೇಶ

ಬೆಂಗಳೂರು, ಜ.22 (ಯುಎನ್ಐ) ಶಿವಮೊಗ್ಗದ ಬಳಿ ನಿನ್ನೆ ರಾತ್ರಿ ಸಂಭವಿಸಿದ ಭಾರಿ ಅನಾಹುತದಲ್ಲಿ ಅನೇಕ ಮಂದಿ ಸಾವನ್ನಪ್ಪಿರುವ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೀವ್ರ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಇದೊಂದು ಆಘಾತಕಾರಿ, ದುರದೃಷ್ಟಕರ ಘಟನೆ. ಮೃತರ ಆತ್ಮಕ್ಕೆ ಶಾಂತಿಯನ್ನು ಕೋರಿ, ಕುಟುಂಬದವರಲ್ಲಿ ಸಂತಾಪ ವ್ಯಕ್ತಪಡಿಸುತ್ತೇನೆ ಎಂದು ತಿಳಿಸಿದ್ದಾರೆ.

ರಕ್ಷಣಾ ಕಾರ್ಯಾಚರಣೆ ಸೇರಿದಂತೆ ಎಲ್ಲ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ನಿನ್ನೆ ತಡರಾತ್ರಿಯೇ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಘಟನೆ ಕುರಿತಂತೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ನಿಶ್ಚಿತ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಯುಎನ್ಐ ಎಎಚ್ 0842