Sunday, Aug 25 2019 | Time 02:12 Hrs(IST)
National Share

ಶಾಸಕರ ರಾಜೀನಾಮೆ ಅಂಗೀಕಾರಕ್ಕೆ ಸ್ಪೀಕರ್ ವಿನಾಕಾರಣ ವಿಳಂಬ: ಪ್ರಹ್ಲಾದ್ ಜೋಷಿ

ಶಾಸಕರ ರಾಜೀನಾಮೆ ಅಂಗೀಕಾರಕ್ಕೆ ಸ್ಪೀಕರ್ ವಿನಾಕಾರಣ ವಿಳಂಬ: ಪ್ರಹ್ಲಾದ್ ಜೋಷಿ
ಶಾಸಕರ ರಾಜೀನಾಮೆ ಅಂಗೀಕಾರಕ್ಕೆ ಸ್ಪೀಕರ್ ವಿನಾಕಾರಣ ವಿಳಂಬ: ಪ್ರಹ್ಲಾದ್ ಜೋಷಿ

ನವದೆಹಲಿ, ಜು 16 [ಯುಎನ್ಐ] ಮೈತ್ರಿ ಸರ್ಕಾರದ ನಾಯಕತ್ವದ ವಿರುದ್ಧ ಬಂಡಾಯ ಎದ್ದು ತಮ್ಮ ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ ಶಾಸಕರು ತಮ್ಮ ರಾಜೀನಾಮೆಯನ್ನು ಅಂಗೀಕರಿಸಲು ಸ್ಪೀಕರ್ ರಮೇಶ್ ಕುಮಾರ್ ವಿನಾಕಾರಣ ವಿಳಂಬ ಮಾಡುತ್ತಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಷಿ ಆಕ್ಷೇಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖುದ್ದಾಗಿ ಸಭಾಧ್ಯಕ್ಷರಿಗೆ ರಾಜೀನಾಮೆ ಸಲ್ಲಿಸಬೇಕೆಂದು ಸುಪ್ರೀಂಕೋರ್ಟ್ ಸೂಚಿಸಿದೆ. ನ್ಯಾಯಾಲಯದ ಸೂಚನೆಯಂತೆ ಆ ಶಾಸಕರು ತಾವೇ ಸ್ವತಃ ತಮ್ಮ ರಾಜೀನಾಮೆ ಪತ್ರಗಳನ್ನು ಸಲ್ಲಿಸಿದರೂ ಅವುಗಳನ್ನು ಸಾಂವಿಧಾನಿಕ ಹುದ್ದೆಯಲ್ಲಿರುವವರು ಸೂಕ್ತ ಕ್ರಮ ತೆಗೆದುಕೊಂಡಿಲ್ಲ ಎಂದರು.

ಸಭಾಧ್ಯಕ್ಷರ ಸ್ಥಾನದಲ್ಲಿರುವವರು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕೆಂದು ಜನತೆ ಮತ್ತು ಪ್ರತಿಪಕ್ಷಗಳು ನಿರೀಕ್ಷೆ ಮಾಡುತ್ತವೆ. ಆದರೆ, ಸದ್ಯದ ಸಂದರ್ಭದಲ್ಲಿ ಸಭಾಧ್ಯಕ್ಷ ರಮೇಶ್‌ಕುಮಾರ್ ತಮ್ಮ ಹುದ್ದೆಯ ಘನತೆಗೆ ತಕ್ಕಂತೆ ವರ್ತಿಸುತ್ತಿಲ್ಲ. ಇದೊಂದು ದುರುದೃಷ್ಟಕರ ಬೆಳವಣಿಗೆ ಎಂದರು.

ಯುಎನ್ಐ ವಿಎನ್ 2027