NationalPosted at: Jan 22 2021 6:01PM
Shareಸರ್ಕಾರದ ಪ್ರಸ್ತಾಪ ತಿರಸ್ಕರಿದ ರೈತರು, ಇಂದು 11 ನೇ ಸುತ್ತಿನ ಸಂಧಾನ ಸಭೆ
ಸರ್ಕಾರದ ಪ್ರಸ್ತಾಪ ತಿರಸ್ಕರಿದ ರೈತರು, ಇಂದು 11 ನೇ ಸುತ್ತಿನ ಸಂಧಾನ ಸಭೆನವದೆಹಲಿ, ಜ 22 (ಯುಎನ್ಐ) ಕೃಷಿ ಮಸೂದೆ ವಾಪಸ್ ಪಡೆಯುವಂತೆ ದೆಹಲಿ ಗಡಿಯಲ್ಲಿ ರೈತರ ಪ್ರತಿಭಟನೆ ಮುಂದುವರೆದಿದ್ದು, ಇಂದು 11ನೇ ಸುತ್ತಿನ ಮಾತುಕತೆ ನಡೆಯಲಿದ್ದರೂ ಬಿಕ್ಕಟು ಪರಿಹಾರವಾಗುವ ಯಾವ ಲಕ್ಷಣಗಳು ಕಾಣಿಸುತ್ತಿಲ್ಲ.
ಸರಕಾರ ಸದ್ಯ ಒಂದೂವರೆ ವರ್ಷಗಳ ಕಾಲ ಕಾಯಿದೆ ತಡೆಹಿಹಿಡಿಯಲು ಸಿದ್ದವಾಗಿದೆ ಎಂದು ಹೇಳಿದ್ದರೂ ಬಿಕ್ಕಟ್ಟು ಸುಲಭವಾಗಿ ಬಗೆಹರಿಯುತ್ತಿಲ್ಲ.
ಈ ಹಿನ್ನಲೆಯಲ್ಲಿ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಕೃಷಿ ಸಚಿವರ ಪ್ರಸ್ತಾವನೆಯನ್ನು ಸಂಯುಕ್ತ ಕಿಸಾನ್ ಮೋರ್ಚಾ ತಿರಸ್ಕರಿಸಿದೆ.
ಸಂಯುಕ್ತ ಕಿಸಾನ್ ಮೋರ್ಚಾದ ಸಭೆ ನಡೆಸಿದ್ದು, ಇದರಲ್ಲಿ ಸರ್ಕಾರದ ಪ್ರಸ್ತಾಪವನ್ನು ತಿರಸ್ಕರಿಸಲಾಗಿದೆ ಎಂದೂ ವರದಿಯಾಗಿದೆ. ಇಂದು ಪ್ರತಿಭಟನಾಕಾರ ರೈತ ಸಂಘಟನೆಗಳ ಮುಖಂಡರು ಮತ್ತು ಸರ್ಕಾರದ ನಡುವೆ 11ನೇ ಸುತ್ತಿನ ಪ್ರಮುಖ ಮಾತುಕತೆ ನಡೆಯಲಿದೆ.
ಯುಎನ್ಐ ಕೆಎಸ್ಆರ್ 0927