Saturday, Oct 24 2020 | Time 19:43 Hrs(IST)
 • ದೇಶಾದ್ಯಂತ ಉಚಿತ ಕೋವಿಡ್‌ ಲಸಿಕೆ ದೊರೆಯಬೇಕು; ಕೇಜ್ರೀವಾಲ್‌
 • ವರುಣ್ ಚಕ್ರವರ್ತಿ ಮಾರಕ ಬೌಲಿಂಗ್ ಗೆ ತತ್ತರಿಸಿದ ಡೆಲ್ಲಿ
 • ಕೆಡುಕಿನ ವಿರುದ್ದ ಒಳಿತು ಸಾಧಿಸಿದ ವಿಜಯದ ಸಂಕೇತ ದಸರಾ- ಉಪರಾಷ್ಟಪತಿ
 • ತ್ರಿವರ್ಣ ಧ್ವಜ; ಮೆಹಬೂಬಾ ಮುಫ್ತಿ ಹೇಳಿಕೆಗೆ ಕಾಂಗ್ರೆಸ್, ಬಿಜೆಪಿ ಆಕ್ರೋಶ
 • ನಾಲ್ಕು ಕೈ, ಕಾಲುಗಳ ಬಾಲಕನಿಗೆ, ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ ಸರ್ಕಾರಿ ಆಸ್ಪತ್ರೆ ವೈದ್ಯರು
 • ಡೆಲ್ಲಿಗೆ 195 ರನ್ ಗುರಿ ನೀಡಿದ ಕೆಕೆಆರ್
 • ಕೋವಿಡ್-19 ಸ್ಥಿತಿಗತಿಗೆ ನಿರ್ಣಾಯಕವಾಗಲಿದೆ ಮುಂದಿನ ಎರಡು ತಿಂಗಳು
 • ತಿರುಪತಿ ತಿಮ್ಮಪ್ಪ ದೇಗಲ ಪ್ರಸಾದ ತಯಾರಿಕ ಕೇಂದ್ರದಲ್ಲಿ ಸ್ಪೋಟ- ಐವರು ಕಾರ್ಮಿಕರಿಗೆ ಗಾಯ
 • ಆದಾಯ ತೆರಿಗೆ ವಿವರ ಸಲ್ಲಿಕೆಗೆ ಡಿ 31 ರವರೆಗೆ ಗಡುವು ವಿಸ್ತರಣೆ
 • ಗುಜರಾತ್‌; ಕಿಸಾನ್‌ ಸೂರ್ಯೋದಯ ಸೇರಿ ಮೂರು ಯೋಜನೆಗೆ ಪ್ರಧಾನಿ ಮೋದಿ ಚಾಲನೆ
 • ಕೆಲವೆಡೆ ಆಯುಧ ಪೂಜೆ, ಇನ್ನೂ ಕೆಲವೆಡೆ ಸಿದ್ಧತೆ: ಕಾರ್ಮಿಕರಿಗಿಲ್ಲ ಬೋನಸ್ !!!
 • ಓಲಾ, ಉಬರ್, ಆಟೋ ಚಾಲಕ ಸಂಘದ ಪದಾಧಿಕಾರಿಗಳು ಕಾಂಗ್ರೆಸ್ ಗೆ ಸೇರ್ಪಡೆ
 • ಸೇನಾ ಕ್ಯಾಂಟೀನ್ ಗಳಲ್ಲಿ ಇನ್ನೂ ವಿದೇಶಿ ಮದ್ಯ ಲಭ್ಯವಿರುವುದಿಲ್ಲ
 • ಜಾತಿ ಒಡೆದು ರಾಜಕೀಯ ಮಾಡುವ ಅಗತ್ಯ ಇಲ್ಲ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್
 • ಮುಖ್ಯಮಂತ್ರಿಯಾಗಲು ಮೊದಲು ಪಕ್ಷ ಅಧಿಕಾರಕ್ಕೆ ಬರಬೇಕು- ಡಿ ಕೆ ಶಿವಕುಮಾರ್
Karnataka Share

ಸೆ‌. 21ರಿಂದ ಶಾಲೆ ತೆರೆಯಲಿದೆ; ತರಗತಿ ಪ್ರಾರಂಭ ಇಲ್ಲ; ಸಚಿವ ಎಸ್. ಸುರೇಶ್ ಕುಮಾರ್

ಮೈಸೂರು, ಸೆ.18 (ಯುಎನ್ಐ) ಇದೇ ತಿಂಗಳ 21ರಿಂದ ರಾಜ್ಯದಲ್ಲಿ ಶಾಲೆಗಳನ್ನು ತೆರೆಯಲಾಗುತ್ತದೆ. ಆದರೆ ತರಗತಿ ಪ್ರಾರಂಭವಾಗುವುದಿಲ್ಲ. ಸೆ.30ರೊಳಗೆ 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆ ಮುಗಿಸಬೇಕು ಎಂದು ಸೂಚಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.
ಮೈಸೂರಿನ ನಜರ್ ಬಾದ್ ನ ಪೀಪಲ್ಸ್ ಪಾರ್ಕ್ ನಲ್ಲಿ ನೂತನವಾಗಿ ನಿರ್ಮಿಸಲಾದ ನಗರ ಕೇಂದ್ರ ಗ್ರಂಥಾಲಯವನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರ ಜೊತೆಗೂಡಿ ಉದ್ಘಾಟಿಸಿ ಅವರು ಮಾತನಾಡಿದರು.
ಬಳಿಕ ಡಿಜಿಟಲ್ ಗ್ರಂಥಾಲಯ ವಿಭಾಗವನ್ನು ಕಂಪ್ಯೂಟರ್ ಮೂಲಕ ವೀಕ್ಷಣೆ ಮಾಡಿ, ಪುಸ್ತಕಗಳು, ಅಧ್ಯಯನ ವಿಭಾಗ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ವಿಭಾಗಗಳನ್ನು ವೀಕ್ಷಿಸಿದರು. ಜೊತೆಗೆ ಪುಸ್ತಕಗಳ ಸಂಗ್ರಹಣೆ ಹಾಗೂ ವಿಷಯಗಳ ಬಗ್ಗೆ ಮಾಹಿತಿ ಪಡೆದರು.
ಸುರೇಶ್ ಕುಮಾರ್ ಮಾತನಾಡಿ, ಕೇವಲ ಒಂದು ಅವಧಿಯ ಶುಲ್ಕವನ್ನು ಮಾತ್ರ ಖಾಸಗಿ ಶಾಲೆ ಪಡೆಯಬೇಕು. ಆಗೊಮ್ಮೆ ಸಮಸ್ಯೆ ಆದರೆ ಡಿಡಿಪಿಐ, ಬಿಇಓ ಈ‌ ಬಗ್ಗೆ ಕ್ರಮ‌ ಕೈಗೊಳ್ಳಲಿದ್ದಾರೆ. ಅವರಿಗೆ ಈಗಾಗಲೇ ಸರ್ಕಾರದಿಂದ ಸೂಚನೆ ಕೊಟ್ಟಿದ್ದೇವೆ. ಯಾವುದೇ ಪೋಷಕರಿಗೆ ಇದರಿಂದ ಸಮಸ್ಯೆ ಆದರೆ ಸ್ಥಳೀಯ ಬಿಇಒ ಅವರನ್ನು ಸಂಪರ್ಕಿಸಬಹುದು ಎಂದರು.
ಖಾಸಗಿ ಶಾಲೆಯಿಂದ ಸರ್ಕಾರಿ ಶಾಲೆಯತ್ತ ಮಕ್ಕಳ ವರ್ಗಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು, ರಾಜ್ಯದಲ್ಲಿ ಸಕಾರಾತ್ಮಕ ಬೆಳವಣಿಗೆ ಆಗುತ್ತಿದೆ. ಸರ್ಕಾರಿ ಶಾಲೆಯತ್ತ ಪೋಷಕರು, ಮಕ್ಕಳು ಮುಖ ಮಾಡುತ್ತಿದ್ದಾರೆ. ಇದರಿಂದ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಹೆಚ್ಚಾಗುತ್ತಿದೆ. ಎಷ್ಟೇ ಮಕ್ಕಳು ಬಂದರೂ ಅವರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುತ್ತೇವೆ. ಖಾಸಗಿ ಶಾಲೆಯಿಂದ ವರ್ಗಾವಣೆ ಪ್ರಮಾಣ ಪತ್ರ ಕೊಡದಿದ್ದರೆ ಬಿಇಓಯಿಂದ ಕೊಡಿಸುವ ವ್ಯವಸ್ಥೆ ಮಾಡಲಾಗುವುದು. ಹೋದಲೆಲ್ಲ ಶಾಲೆ ಯಾವಾಗ ಶುರುವಾಗುತ್ತದೆ ಎಂದು ಮಕ್ಕಳು ಕೇಳುತ್ತಿದ್ದಾರೆ. ಆದರೆ ಪೋಷಕರು ಮಾತ್ರ ಸಾಕಷ್ಟು ಆತಂಕದಲ್ಲಿ ಇದ್ದಾರೆ. ಇದನ್ನು ನಿವಾರಿಸುವ ಕೆಲಸ ನಮ್ಮ‌ ಇಲಾಖೆ ಮಾಡಲಿದೆ ಎಂದು ಭರವಸೆ ನೀಡಿದರು.
ಸೇತು ಬಂಧ ಕಾರ್ಯಕ್ರಮ ಚಂದನ ವಾಹಿನಿಯಲ್ಲಿ ಉತ್ತಮ ರೀತಿಯಲ್ಲಿ ಪ್ರಸಾರವಾಗುತ್ತಿದೆ. ಹಳ್ಳಿ ಹಳ್ಳಿಗಳಲ್ಲಿ ವಿದ್ಯಾಗಮ ಕಾರ್ಯಕ್ರಮಕ್ಕೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ಕೇಂದ್ರ ಸರ್ಕಾರ ಆದೇಶ ಮೇರೆಗೆ ಮುಂದಿನ ತೀರ್ಮಾನಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದರು.
ಕೇಬಲ್ ಸಂಸ್ಥೆಗಳ ಮಾಲೀಕರು ಹೆಚ್ಚಿನ ಹಣ ಕೇಳುತ್ತಿದ್ದಾರೆ. ಚಂದನ ವಾಹಿನಿಯಲ್ಲಿ ಈಗಾಗಲೇ ಸೇತುಬಂಧ ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದೆ. ಚಂದನ ವಾಹಿನಿಗೆ ನೀಡುವಷ್ಟು ಹಣವನ್ನು ಸ್ಥಳೀಯ ಕೇಬಲ್ ಟಿವಿಯವರಿಗೆ ನೀಡಬಹುದು. ಅಷ್ಟು ಹಣಕ್ಕೆ ತರಗತಿ ನಡೆಸಿಕೊಡಿ ಎಂದು ಕೇಳಿದ್ದೇವೆ. ಕೇಬಲ್ ಟಿವಿಯವರು ಅದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಟೆಂಡರ್ ಪ್ರಕ್ರಿಯೆ ಶುರುವಾಗಿದ್ದು, ಪೂರ್ಣಗೊಂಡ ಬಳಿಕ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು‌ ಎಂದು ಪ್ರಶ್ನೆಯೊಂದಕ್ಕೆ ಸಚಿವರು ಮಾಹಿತಿ ನೀಡಿದರು.
ಶಾಸಕರಾದ ಎಲ್. ನಾಗೇಂದ್ರ, ಎಸ್.ಎ. ರಾಮದಾಸ್, ಹರ್ಷವರ್ಧನ್, ಜಿ.ಟಿ.ದೇವೇಗೌಡ, ಜಿಲ್ಲಾಧಿಕಾರಿ ಬಿ.ಶರತ್, ಮೇಯರ್ ತಸ್ನಿಂ, ಪಾಲಿಕೆ ಆಯುಕ್ತರಾದ ಗುರುದತ್ತ ಹೆಗಡೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಯುಎನ್ಐ ಎಎಚ್ 1351
More News
ಜಾತಿ ಒಡೆದು ರಾಜಕೀಯ ಮಾಡುವ ಅಗತ್ಯ ಇಲ್ಲ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್

ಜಾತಿ ಒಡೆದು ರಾಜಕೀಯ ಮಾಡುವ ಅಗತ್ಯ ಇಲ್ಲ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್

24 Oct 2020 | 5:33 PM

ಬೆಂಗಳೂರು,ಅ 24(ಯುಎನ್ಐ) ನಮಗೆ ಜಾತಿಯನ್ನು ಒಡೆದು ರಾಜಕೀಯ ಮಾಡುವ ಅಗತ್ಯ ಇಲ್ಲ. ತನ್ನನ್ನು ಬೆಳೆಸಿದ ಪಕ್ಷಕ್ಕೆ ಮೋಸ ಮಾಡಿದ್ದು,ಹೆತ್ತ ತಾಯಿಗೆ ದ್ರೋಹ ಬಗೆದಿದ್ದಾರೆ.ಇದಕ್ಕೆ ಜನ ತಕ್ಕ ಉತ್ತರ ನೀಡಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

 Sharesee more..