Saturday, Oct 24 2020 | Time 20:44 Hrs(IST)
 • ದಸರಾ-ಮೆರವಣಿಗೆ: ನಿಗದಿತ ಕಲಾತಂಡಗಳ ನಿಯೋಜನೆ
 • ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಪುತ್ರನಿಗೆ ಇಡಿ ಸಮನ್ಸ್
 • ಜಿಯೋಫೋನ್‌ನಲ್ಲಿ ಹೊಸ ಜಿಯೋ ಕ್ರಿಕೆಟ್ ಆಪ್: ಬಹುಮಾನ ಗೆಲ್ಲಲು ಅವಕಾಶ
 • ರಾಜಕಾಲುವೆ ಒತ್ತುವರಿದಾರರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ; ಆರ್ ಅಶೋಕ
 • ಜಂಬೂಸವಾರಿ 40 ನಿಮಿಷಕ್ಕೆ ಸೀಮಿತ: 300 ಜನರಿಗೆ ಮಾತ್ರ ಪ್ರವೇಶ; ಡಾ ಚಂದ್ರಗುಪ್ತ
 • ಎನ್‌ಸಿಬಿ ಅಧಿಕಾರಿಗಳ ಸೋಗಿನಲ್ಲಿ ಬೆಳ್ಳುಳ್ಳಿಯ ವ್ಯಾಪಾರಿಯ ದರೋಡೆ
 • ಚರ್ಚ್ ಕುಸಿದು 22 ಮಂದಿ ಸಾವು
 • ಉಪ ಚುನಾವಣೆ, ವಿಧಾನ ಪರಿಷತ್ ಚುನಾವಣೆಗಳಲ್ಲಿ ಬಿಜೆಪಿಗೆ ಗೆಲುವು: ಮುಖ್ಯಮಂತ್ರಿ ಯಡಿಯೂರಪ್ಪ ವಿಶ್ವಾಸ
 • ದೇಶಾದ್ಯಂತ ಉಚಿತ ಕೋವಿಡ್‌ ಲಸಿಕೆ ದೊರೆಯಬೇಕು; ಕೇಜ್ರೀವಾಲ್‌
 • ವರುಣ್ ಚಕ್ರವರ್ತಿ ಮಾರಕ ಬೌಲಿಂಗ್ ಗೆ ತತ್ತರಿಸಿದ ಡೆಲ್ಲಿ
 • ಕೆಡುಕಿನ ವಿರುದ್ದ ಒಳಿತು ಸಾಧಿಸಿದ ವಿಜಯದ ಸಂಕೇತ ದಸರಾ- ಉಪರಾಷ್ಟಪತಿ
 • ತ್ರಿವರ್ಣ ಧ್ವಜ; ಮೆಹಬೂಬಾ ಮುಫ್ತಿ ಹೇಳಿಕೆಗೆ ಕಾಂಗ್ರೆಸ್, ಬಿಜೆಪಿ ಆಕ್ರೋಶ
 • ನಾಲ್ಕು ಕೈ, ಕಾಲುಗಳ ಬಾಲಕನಿಗೆ, ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ ಸರ್ಕಾರಿ ಆಸ್ಪತ್ರೆ ವೈದ್ಯರು
 • ಡೆಲ್ಲಿಗೆ 195 ರನ್ ಗುರಿ ನೀಡಿದ ಕೆಕೆಆರ್
 • ಕೋವಿಡ್-19 ಸ್ಥಿತಿಗತಿಗೆ ನಿರ್ಣಾಯಕವಾಗಲಿದೆ ಮುಂದಿನ ಎರಡು ತಿಂಗಳು
Karnataka Share

ಹಿರಿಯ ಪತ್ರಕರ್ತ ನಾಗರಾಜ್ ದೀಕ್ಷಿತ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ಬೆಂಗಳೂರು, ಸೆ 18 (ಯುಎನ್ಐ) ನಾಗರಾಜ್ ದೀಕ್ಷಿತ್ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ನಾಗರಾಜ್ ದೀಕ್ಷಿತ್ ಎಚ್. ಬಿ: ಟೈಮ್ಸ್ ಆಫ್ ಇಂಡಿಯಾ, ವಿಜಯ ಕರ್ನಾಟಕ, ಜನಶ್ರೀ, ಟಿವಿ 9 ಕನ್ನಡ ಹೀಗೆ ಪತ್ರಿಕೋದ್ಯಮದಲ್ಲಿ 25 ವರ್ಷಕ್ಕೂ ಹೆಚ್ಚು ಕಾಲ ದುಡಿದಿದ್ದಾರೆ.
ಕೆಲ ಕಾಲ ಅನಾರೋಗ್ಯಪೀಡಿತರಾಗಿದ್ದ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಇತ್ತೀಚೆಗೆ ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಕಂಡು ಬಂದಿತ್ತು. ಆದರೆ, ಗುರುವಾರ ತಡರಾತ್ರಿ ಬಹು ಅಂಗಾಂಗ ವೈಫಲ್ಯ, ಹೃದಯಾಘಾತಕ್ಕೀಡಾಗಿ ನಿಧನರಾಗಿದ್ದಾರೆ. ಪತ್ರಕರ್ತರಲ್ಲದೆ ರಂಗಭೂಮಿಯಲ್ಲೂ ನಟನೆ ಮೂಲಕ ಹಲವು ಹವ್ಯಾಸಿ ರಂಗ ತಂಡಗಳ ಜೊತೆಯೂ ಸಕ್ರೀಯವಾಗಿ ಗುರುತಿಸಿಕೊಂಡಿದ್ದರು.
ಜನವಾಹಿನಿ ದಿನಪತ್ರಿಕೆ, ಜನಶ್ರೀ ಹಾಗೂ ಟಿ. ವಿ 9 ಸುದ್ದಿ ವಾಹಿನಿಗಳಲ್ಲಿ ಕಾರ್ಯನಿರ್ವಹಿಸಿದ್ದ ಅವರದ್ದು ಬಹುಮುಖ ಪ್ರತಿಭೆ. ತಮ್ಮ ಶ್ರಮದಿಂದಲೇ ಪ್ರತಿಕೋದ್ಯಮದಲ್ಲಿ ಗುರುತಿಸಿಕೊಂಡಿದ್ದ ಇವರ ನಿಧನದಿಂದ ಮಾಧ್ಯಮರಂಗ ಪ್ರತಿಭಾವಂತರೊಬ್ಬರನ್ನು ಕಳೆದುಕೊಂಡಂತಾಗಿದೆ.ಭಗವಂತ ಮೃತರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದೂ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಯುಎನ್ಐ ಕೆಎಸ್ಆರ್ 1241