Friday, Oct 22 2021 | Time 22:07 Hrs(IST)
Sports Share

ಪದಕ ಲಭಿಸದಕ್ಕೆ ಭಾವಿನಾ ಸಂತಸ

ನವದೆಹಲಿ, ಆ.29 (ಯುಎನ್ಐ)- ರಾಷ್ಟ್ರೀಯ ಕ್ರೀಡಾ ದಿನದಂದು ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದ ಮಹಿಳಾ ಸಿಂಗಲ್ಸ್ ನಾಲ್ಕನೇ ತರಗತಿಯ ಟೇಬಲ್ ಟೆನಿಸ್ ಆಟಗಾರ್ತಿ ಭಾವಿನಾಬೆನ್ ಪಟೇಲ್ ತನ್ನ ಪದಕದ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.

ಇದು ತನ್ನ ಕನಸು ನನಸಾದಂತಾಗಿದೆ. ಆದರೆ ಅದೇ ಸಮಯದಲ್ಲಿ ಅವರು ಸ್ವಲ್ಪ ನಿರಾಶೆಗೊಂಡಿದ್ದಾರೆ.

“ನನ್ನ ಪದಕವು ಅಂಗವಿಕಲರಾದ ಮತ್ತು ಅವರ ಅವಕಾಶಗಳು ಮತ್ತು ಲಭ್ಯತೆಯನ್ನು ನೀಡಿದ ಲಕ್ಷಾಂತರ ಜನರ ಧ್ವನಿಯಾದರೆ ನನಗೆ ಸಂತೋಷವಾಗುತ್ತದೆ. ನನ್ನ ಬೆಳ್ಳಿ ಪದಕವು ಯಾವುದೂ ಅಸಾಧ್ಯವಲ್ಲ ಎಂಬುದಕ್ಕೆ ವಿಕಲಚೇತನರಿಗೆ ಉದಾಹರಣೆಯಾಗಬೇಕು ಎಂದು ನಾನು ನಂಬುತ್ತೇನೆ'' ಎಂದು ಹೇಳಿದ್ದಾರೆ.

'ಮಹಿಳೆಯರಿಗೆ ನನ್ನ ಸಲಹೆ ಎಂದರೆ ನಿಮ್ಮ ಮೇಲೆ ವಿಶ್ವಾಸ ಇಟ್ಟುಕೊಂಡು ನಿಮ್ಮ ಹೆಜ್ಜೆ ಮುಂದಿಡಿ'' ಎಂದು ಭಾವಿನಾ ತಿಳಿಸಿದ್ದಾರೆ.

"ಟೋಕಿಯೊದಲ್ಲಿ ಭಾವಿನಾ ಅಭಿನಯ ಅದ್ಭುತವಾಗಿದೆ. ಅವರ ಆಟ, ಕೌಶಲ್ಯ, ತಾಳ್ಮೆ ಮತ್ತು ಏಕಾಗ್ರತೆ ಎಲ್ಲವೂ ವಿಶ್ವ ದರ್ಜೆಯದ್ದಾಗಿದೆ. ನಮ್ಮ ಬೆಳ್ಳಿ ಹುಡುಗಿ ರಾಷ್ಟ್ರೀಯ ಕ್ರೀಡಾ ದಿನದಂದು ಈ ಅದ್ಭುತ ಉಡುಗೊರೆಯನ್ನು ರಾಷ್ಟ್ರಕ್ಕೆ ನೀಡಿದ್ದಾರೆ. ಒಬ್ಬ ಆಟಗಾರನಿಗೆ ಇತಿಹಾಸವನ್ನು ಸೃಷ್ಟಿಸಲು ಇದಕ್ಕಿಂತ ಉತ್ತಮ ದಿನ ಇರಲು ಸಾಧ್ಯವಿಲ್ಲ ಎಂದು ನಾನು ನಂಬುತ್ತೇನೆ'' ಎಂದು ಭಾರತದ ಪ್ಯಾರಾಲಿಂಪಿಕ್ ಸಮಿತಿಯ ಅಧ್ಯಕ್ಷೆ ಡಾ.ದೀಪಾ ಮಲಿಕ್ ಹೇಳಿದ್ದಾರೆ.

ಯುಎನ್ಐ ವಿಎನ್ಎಲ್ 1925
More News
ಭಾರತದಲ್ಲಿ ಗಲ್ಲಿ ಕ್ರಿಕೆಟಿಗ; ಓಮನ್ ನಲ್ಲಿ ಸ್ಟಾರ್ ಆಟಗಾರ!

ಭಾರತದಲ್ಲಿ ಗಲ್ಲಿ ಕ್ರಿಕೆಟಿಗ; ಓಮನ್ ನಲ್ಲಿ ಸ್ಟಾರ್ ಆಟಗಾರ!

21 Oct 2021 | 1:28 PM

ಭಾರತದ ಗಲ್ಲಿ ಗಲ್ಲಿಗಳಲ್ಲಿ ಆಡುತ್ತಿದ್ದ ಹುಡುಗ ಈಗ ಓಮನ್ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ. ಟಿ-20 ವಿಶ್ವಕಪ್ ನ ಅರ್ಹತಾ ಪಂದ್ಯಗಳಲ್ಲಿ ಆಡುತ್ತಿರುವ ಜತೀಂದರ್ ಸಿಂಗ್, ಓಮನ್ ತಂಡದ ಸ್ಟಾರ್ ಆಟಗಾರನಾಗಿದ್ದಾನೆ.

 Sharesee more..
ದ್ರಾವಿಡ್ ಆಯ್ಕೆಗೂ ಮುನ್ನ ಇಬ್ಬರು ಕ್ರಿಕೆಟ್ ದಿಗ್ಗಜರ ಜತೆ ಬಿಸಿಸಿಐ ಸಂಪರ್ಕ!

ದ್ರಾವಿಡ್ ಆಯ್ಕೆಗೂ ಮುನ್ನ ಇಬ್ಬರು ಕ್ರಿಕೆಟ್ ದಿಗ್ಗಜರ ಜತೆ ಬಿಸಿಸಿಐ ಸಂಪರ್ಕ!

21 Oct 2021 | 11:07 AM

ಭಾರತೀಯ ಕ್ರಿಕೆಟ್ ನ ಗೋಡೆ ಎಂದೇ ಕರೆಯಲ್ಪಡುವ ರಾಹುಲ್ ದ್ರಾವಿಡ್ ಬಿಸಿಸಿಐನಲ್ಲಿ ಹೊಸ ಜವಾಬ್ದಾರಿ ಹೊರುವುದು ಫಿಕ್ಸ್ ಆಗಿದೆ. ಭಾರತೀಯ ಕ್ರಿಕೆಟ್ ತಂಡದ ನೂತನ ಕೋಚ್ ಆಗಲಿರುವ ರಾಹುಲ್ ಅವರ ಹೆಸರು ಔಪಚಾರಿಕವಾಗಿ ಘೋಷಣೆ ಮಾಡೋದು ಮಾತ್ರ ಬಾಕಿ ಉಳಿದಿದೆ.

 Sharesee more..
ಟಿ-20 ವಿಶ್ವಕಪ್; ಸೂಪರ್ 12ರ ಘಟ್ಟಕ್ಕೆ ಜಿಗಿದ ಶ್ರೀಲಂಕಾ

ಟಿ-20 ವಿಶ್ವಕಪ್; ಸೂಪರ್ 12ರ ಘಟ್ಟಕ್ಕೆ ಜಿಗಿದ ಶ್ರೀಲಂಕಾ

21 Oct 2021 | 10:32 AM

ಐರ್ಲೆಂಡ್ ವಿರುದ್ಧ ಸಿಂಹಳೀಯರು ಸುಲಭ ಗೆಲುವು ದಾಖಲಿಸಿದ್ದಾರೆ. ಎರಡೂ ಪಂದ್ಯಗಳಲ್ಲಿ ವಿಜಯ ಸಾಧಿಸುವುದರ ಮೂಲಕ ಶ್ರೀಲಂಕಾ ಸೂಪರ್ 12 ಘಟ್ಟಕ್ಕೆ ಜಿಗಿಯಿತು.

 Sharesee more..
ಟಿ-20 ವಿಶ್ವಕಪ್; ಬೌಲಿಂಗ್ ಮಾಡಿದ ವಿರಾಟ್ ಕೊಹ್ಲಿ!

ಟಿ-20 ವಿಶ್ವಕಪ್; ಬೌಲಿಂಗ್ ಮಾಡಿದ ವಿರಾಟ್ ಕೊಹ್ಲಿ!

20 Oct 2021 | 7:55 PM

ದುಬೈ ಕ್ರಿಕೆಟ್ ಗ್ರೌಂಡ್ ನಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಅಚ್ಚರಿ ಕಾಣಿಸಿತು. ಅದುವೇ ವಿರಾಟ್ ಕೊಹ್ಲಿ ಬೌಲಿಂಗ್ ಮಾಡಿದ್ದು.

 Sharesee more..