Friday, Oct 22 2021 | Time 22:01 Hrs(IST)
Sports Share

ಐಪಿಎಲ್‌ ಆಡಲು ಚಮೀರಾ ಮತ್ತು ಹಸರಂಗಾಗೆ ಅನುಮತಿ

ಕೊಲಂಬೊ, ಆ.29 (ಯುಎನ್ಐ)- ಶ್ರೀಲಂಕಾ ಕ್ರಿಕೆಟ್ ಭಾನುವಾರ ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ನಡೆಯಲಿರುವ ಐಪಿಎಲ್ ನ ಉಳಿದ ಭಾಗಗಳಿಗಾಗಿ ವೇಗಿ ದುಷ್ಮಂತ್ ಚಮೀರಾ ಮತ್ತು ಸ್ಪಿನ್ ಆಲ್ ರೌಂಡರ್ ವನಿಂದು ಹಸರಂಗ ಅವರಿಗೆ ನಿರಾಕ್ಷೇಪಣಾ ಪ್ರಮಾಣ ಪತ್ರ (ಎನ್ಒಸಿ) ನೀಡಿದೆ.

ಟಿಮ್ ಡೇವಿಡ್ ಜೊತೆಗೆ, ಇಬ್ಬರೂ ಆಟಗಾರರನ್ನು ಐಪಿಎಲ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ್ಯಾಯ ಆಟಗಾರರನ್ನಾಗಿ ಆಯ್ಕೆ ಮಾಡಿದೆ. ಏಕೆಂದರೆ ಫಿನ್ ಅಲೆನ್, ಸ್ಕಾಟ್ ಕುಗೆಲೆಜ್ನ್, ಆಡಮ್ ಜಂಪಾ, ಡೇನಿಯಲ್ ಸ್ಯಾಮ್ಸ್ ಮತ್ತು ಕೇನ್ ರಿಚರ್ಡ್ಸನ್ ಅವರು ವಿವಿಧ ಕಾರಣಗಳಿಂದ ಪಡೆಯಲು ಸಾಧ್ಯವಾಗಲಿಲ್ಲ.

ಶ್ರೀಲಂಕಾ ಕ್ರಿಕೆಟ್ ಅಧಿಕೃತ ಹೇಳಿಕೆಯಲ್ಲಿ, "ಎಸ್‌ಎಲ್‌ಸಿ, ತಾಂತ್ರಿಕ ಸಲಹಾ ಸಮಿತಿ ಸಮಾಲೋಚಿಸಿ, ಶ್ರೀಲಂಕಾದ ದಕ್ಷಿಣ ಆಫ್ರಿಕಾ ಪ್ರವಾಸ ಮುಗಿದ ನಂತರ ಸೆಪ್ಟೆಂಬರ್ 15 ರಿಂದ ಆಟಗಾರರು ತಮ್ಮ ಐಪಿಎಲ್ ತಂಡಗಳಿಗೆ ಸೇರಲು ಅವಕಾಶ ನೀಡಿದೆ” ಎಂದು ತಿಳಿಸಿದೆ. ಆಟಗಾರರು ಅಕ್ಟೋಬರ್ 10 ರಂದು ಶ್ರೀಲಂಕಾ ತಂಡವನ್ನು ಸೇರಿಕೊಂಡು ಟಿ 20 ವಿಶ್ವಕಪ್ ಅರ್ಹತಾ ಪಂದ್ಯಗಳಿಗೆ ಮುಂಚಿತವಾಗಿ ಎರಡು ಅಭ್ಯಾಸ ಪಂದ್ಯಗಳನ್ನು ಆಡಲಿದ್ದಾರೆ.
ಯುಎನ್ಐ ವಿಎನ್ಎಲ್ 2223
More News
ಭಾರತದಲ್ಲಿ ಗಲ್ಲಿ ಕ್ರಿಕೆಟಿಗ; ಓಮನ್ ನಲ್ಲಿ ಸ್ಟಾರ್ ಆಟಗಾರ!

ಭಾರತದಲ್ಲಿ ಗಲ್ಲಿ ಕ್ರಿಕೆಟಿಗ; ಓಮನ್ ನಲ್ಲಿ ಸ್ಟಾರ್ ಆಟಗಾರ!

21 Oct 2021 | 1:28 PM

ಭಾರತದ ಗಲ್ಲಿ ಗಲ್ಲಿಗಳಲ್ಲಿ ಆಡುತ್ತಿದ್ದ ಹುಡುಗ ಈಗ ಓಮನ್ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ. ಟಿ-20 ವಿಶ್ವಕಪ್ ನ ಅರ್ಹತಾ ಪಂದ್ಯಗಳಲ್ಲಿ ಆಡುತ್ತಿರುವ ಜತೀಂದರ್ ಸಿಂಗ್, ಓಮನ್ ತಂಡದ ಸ್ಟಾರ್ ಆಟಗಾರನಾಗಿದ್ದಾನೆ.

 Sharesee more..
ದ್ರಾವಿಡ್ ಆಯ್ಕೆಗೂ ಮುನ್ನ ಇಬ್ಬರು ಕ್ರಿಕೆಟ್ ದಿಗ್ಗಜರ ಜತೆ ಬಿಸಿಸಿಐ ಸಂಪರ್ಕ!

ದ್ರಾವಿಡ್ ಆಯ್ಕೆಗೂ ಮುನ್ನ ಇಬ್ಬರು ಕ್ರಿಕೆಟ್ ದಿಗ್ಗಜರ ಜತೆ ಬಿಸಿಸಿಐ ಸಂಪರ್ಕ!

21 Oct 2021 | 11:07 AM

ಭಾರತೀಯ ಕ್ರಿಕೆಟ್ ನ ಗೋಡೆ ಎಂದೇ ಕರೆಯಲ್ಪಡುವ ರಾಹುಲ್ ದ್ರಾವಿಡ್ ಬಿಸಿಸಿಐನಲ್ಲಿ ಹೊಸ ಜವಾಬ್ದಾರಿ ಹೊರುವುದು ಫಿಕ್ಸ್ ಆಗಿದೆ. ಭಾರತೀಯ ಕ್ರಿಕೆಟ್ ತಂಡದ ನೂತನ ಕೋಚ್ ಆಗಲಿರುವ ರಾಹುಲ್ ಅವರ ಹೆಸರು ಔಪಚಾರಿಕವಾಗಿ ಘೋಷಣೆ ಮಾಡೋದು ಮಾತ್ರ ಬಾಕಿ ಉಳಿದಿದೆ.

 Sharesee more..
ಟಿ-20 ವಿಶ್ವಕಪ್; ಸೂಪರ್ 12ರ ಘಟ್ಟಕ್ಕೆ ಜಿಗಿದ ಶ್ರೀಲಂಕಾ

ಟಿ-20 ವಿಶ್ವಕಪ್; ಸೂಪರ್ 12ರ ಘಟ್ಟಕ್ಕೆ ಜಿಗಿದ ಶ್ರೀಲಂಕಾ

21 Oct 2021 | 10:32 AM

ಐರ್ಲೆಂಡ್ ವಿರುದ್ಧ ಸಿಂಹಳೀಯರು ಸುಲಭ ಗೆಲುವು ದಾಖಲಿಸಿದ್ದಾರೆ. ಎರಡೂ ಪಂದ್ಯಗಳಲ್ಲಿ ವಿಜಯ ಸಾಧಿಸುವುದರ ಮೂಲಕ ಶ್ರೀಲಂಕಾ ಸೂಪರ್ 12 ಘಟ್ಟಕ್ಕೆ ಜಿಗಿಯಿತು.

 Sharesee more..
ಟಿ-20 ವಿಶ್ವಕಪ್; ಬೌಲಿಂಗ್ ಮಾಡಿದ ವಿರಾಟ್ ಕೊಹ್ಲಿ!

ಟಿ-20 ವಿಶ್ವಕಪ್; ಬೌಲಿಂಗ್ ಮಾಡಿದ ವಿರಾಟ್ ಕೊಹ್ಲಿ!

20 Oct 2021 | 7:55 PM

ದುಬೈ ಕ್ರಿಕೆಟ್ ಗ್ರೌಂಡ್ ನಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಅಚ್ಚರಿ ಕಾಣಿಸಿತು. ಅದುವೇ ವಿರಾಟ್ ಕೊಹ್ಲಿ ಬೌಲಿಂಗ್ ಮಾಡಿದ್ದು.

 Sharesee more..