Friday, Sep 17 2021 | Time 12:30 Hrs(IST)
Special Share

ಭದ್ರತಾ ಪಡೆ ಗುಂಡಿಗೆ ಇಬ್ಬರು ಉಗ್ರರು ಹತ್ಯೆ

ಶ್ರೀನಗರ, ಜುಲೈ31 (ಯುಎನ್ಐ) ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭಾನುವಾರ ನಡೆದ ಎನ್ ಕೌಂಟರ್ ನಲ್ಲಿ ಭದ್ರತಾ ಪಡೆ ಗುಂಡಿಗೆ ಇಬ್ಬರು ಉಗ್ರರು ಹತರಾಗಿದ್ದಾರೆ.
ಪುಲ್ವಾಮಾ ಜಿಲ್ಲೆಯ ನಾಗ್ ಬೆರಾನ್- ತರ್ಸಾರ್ ಅರಣ್ಯ ಪ್ರದೇಶದಲ್ಲಿ ಈ ಗುಂಡಿನ ಕಾರ್ಯಾಚರಣೆ ನಡೆಸಲಾಗಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ.
ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆ ಆರಂಭಿಸುತ್ತಿದ್ದಂತೆ ಅಡಗಿದ್ದ ಭಯೋತ್ಪಾದಕರು ಮನಬಂದಂತೆ ಗುಂಡಿನ ದಾಳಿ ನಡೆಸಿದರು, ಇದಕ್ಕೆ ಪ್ರತಿಯಾಗಿ ಭದ್ರತಾಪಡೆ ಪ್ರತಿದಾಳಿ ನಡೆಸಿದಾಗ ಇಬ್ಬರು ಹತರಾಗಿದ್ದಾರೆ ಪೊಲೀಸರು ಹೇಳಿದ್ದಾರೆ.
ಯುಎನ್ಐ ಕೆಎಸ್ಆರ್ 1004