Friday, Oct 22 2021 | Time 21:00 Hrs(IST)
Sports Share

ಪ್ಯಾರಾ ಒಲಿಂಪಿಕ್ಸ್ : ಭಾರತಕ್ಕೆ ಮೊದಲ ಚಿನ್ನ

ಟೋಕಿಯೋ , ಆಗಸ್ಟ್ 30 (ಯುಎನ್ಐ) ಟೋಕಿಯೋ ಪ್ಯಾರಾ ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ಸಿಕ್ಕಿದೆ. ಮಹಿಳಾ ಶೂಟರ್ ಜೈಪುರ ಮೂಲದ 19 ವರ್ಷದ ಅವನಿ ಲೆಖಾರಾ 10 ಮೀಟರ್ ನ ಏರ್ ರೈಫಲ್ ಶೂಟಿಂಗ್ನಲ್ಲಿ ಚಿನ್ನ ಗೆಲ್ಲುವ ಮೂಲಕ ದೇಶಕ್ಕೆ ಕೀರ್ತಿ ತಂದಿದ್ದಾರೆ.
ದೇಶ ಕ್ರೀಡಾ ದಿನದ ಸಂಭ್ರಮದಲ್ಲಿರುವಾಗಲೇ ಭಾರತಕ್ಕೆ ಚಿನ್ನದ ಪದಕ ದೊರಕಿರುವುದು ದೇಶದ ಜನರ ಸಂತಸವನ್ನು ಇಮ್ಮಡಿಗೊಳಿಸಿದೆ.
ಜೈಪುರ ಮೂಲದ 19 ವರ್ಷದ ಅವನಿ ಲೆಖಾರಾ ಟೋಕಿಯೋ ಒಲಿಂಪಿಕ್ಸ್ನಲ್ಲಿ ಈ ಬಾರಿ ಭಾಗವಹಿಸಿದ ಅತಿ ಕಿರಿಯ ಪ್ಯಾರಾ ಅಥ್ಲೀಟ್ ಎನಿಸಿಕೊಂಡಿದ್ದರು. ಇದೀಗ ಸ್ವರ್ಣ ಪದಕ ಬೇಟೆಯಾಡುವುದರೊಂದಿಗೆ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ದೇಶದ ಮೊದಲ ಮಹಿಳಾ ಕ್ರೀಡಾಪಟು ಎನ್ನುವ ಕೀರ್ತಿಗೆಭಾಜನರಾಗಿದ್ದಾರೆ.
ಅವನಿ ಚಿನ್ನದ ಪದಕ ಮುಡಿಗೇರಿಸಿಕೊಂಡಿರುವುದನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿ, ಅಸಾಧಾರಣ ಪ್ರದರ್ಶನ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲೂ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.
ಯುಎನ್ಐ ಕೆಎಸ್ಆರ್ 0912
More News
ಭಾರತದಲ್ಲಿ ಗಲ್ಲಿ ಕ್ರಿಕೆಟಿಗ; ಓಮನ್ ನಲ್ಲಿ ಸ್ಟಾರ್ ಆಟಗಾರ!

ಭಾರತದಲ್ಲಿ ಗಲ್ಲಿ ಕ್ರಿಕೆಟಿಗ; ಓಮನ್ ನಲ್ಲಿ ಸ್ಟಾರ್ ಆಟಗಾರ!

21 Oct 2021 | 1:28 PM

ಭಾರತದ ಗಲ್ಲಿ ಗಲ್ಲಿಗಳಲ್ಲಿ ಆಡುತ್ತಿದ್ದ ಹುಡುಗ ಈಗ ಓಮನ್ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ. ಟಿ-20 ವಿಶ್ವಕಪ್ ನ ಅರ್ಹತಾ ಪಂದ್ಯಗಳಲ್ಲಿ ಆಡುತ್ತಿರುವ ಜತೀಂದರ್ ಸಿಂಗ್, ಓಮನ್ ತಂಡದ ಸ್ಟಾರ್ ಆಟಗಾರನಾಗಿದ್ದಾನೆ.

 Sharesee more..
ದ್ರಾವಿಡ್ ಆಯ್ಕೆಗೂ ಮುನ್ನ ಇಬ್ಬರು ಕ್ರಿಕೆಟ್ ದಿಗ್ಗಜರ ಜತೆ ಬಿಸಿಸಿಐ ಸಂಪರ್ಕ!

ದ್ರಾವಿಡ್ ಆಯ್ಕೆಗೂ ಮುನ್ನ ಇಬ್ಬರು ಕ್ರಿಕೆಟ್ ದಿಗ್ಗಜರ ಜತೆ ಬಿಸಿಸಿಐ ಸಂಪರ್ಕ!

21 Oct 2021 | 11:07 AM

ಭಾರತೀಯ ಕ್ರಿಕೆಟ್ ನ ಗೋಡೆ ಎಂದೇ ಕರೆಯಲ್ಪಡುವ ರಾಹುಲ್ ದ್ರಾವಿಡ್ ಬಿಸಿಸಿಐನಲ್ಲಿ ಹೊಸ ಜವಾಬ್ದಾರಿ ಹೊರುವುದು ಫಿಕ್ಸ್ ಆಗಿದೆ. ಭಾರತೀಯ ಕ್ರಿಕೆಟ್ ತಂಡದ ನೂತನ ಕೋಚ್ ಆಗಲಿರುವ ರಾಹುಲ್ ಅವರ ಹೆಸರು ಔಪಚಾರಿಕವಾಗಿ ಘೋಷಣೆ ಮಾಡೋದು ಮಾತ್ರ ಬಾಕಿ ಉಳಿದಿದೆ.

 Sharesee more..
ಟಿ-20 ವಿಶ್ವಕಪ್; ಸೂಪರ್ 12ರ ಘಟ್ಟಕ್ಕೆ ಜಿಗಿದ ಶ್ರೀಲಂಕಾ

ಟಿ-20 ವಿಶ್ವಕಪ್; ಸೂಪರ್ 12ರ ಘಟ್ಟಕ್ಕೆ ಜಿಗಿದ ಶ್ರೀಲಂಕಾ

21 Oct 2021 | 10:32 AM

ಐರ್ಲೆಂಡ್ ವಿರುದ್ಧ ಸಿಂಹಳೀಯರು ಸುಲಭ ಗೆಲುವು ದಾಖಲಿಸಿದ್ದಾರೆ. ಎರಡೂ ಪಂದ್ಯಗಳಲ್ಲಿ ವಿಜಯ ಸಾಧಿಸುವುದರ ಮೂಲಕ ಶ್ರೀಲಂಕಾ ಸೂಪರ್ 12 ಘಟ್ಟಕ್ಕೆ ಜಿಗಿಯಿತು.

 Sharesee more..
ಟಿ-20 ವಿಶ್ವಕಪ್; ಬೌಲಿಂಗ್ ಮಾಡಿದ ವಿರಾಟ್ ಕೊಹ್ಲಿ!

ಟಿ-20 ವಿಶ್ವಕಪ್; ಬೌಲಿಂಗ್ ಮಾಡಿದ ವಿರಾಟ್ ಕೊಹ್ಲಿ!

20 Oct 2021 | 7:55 PM

ದುಬೈ ಕ್ರಿಕೆಟ್ ಗ್ರೌಂಡ್ ನಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಅಚ್ಚರಿ ಕಾಣಿಸಿತು. ಅದುವೇ ವಿರಾಟ್ ಕೊಹ್ಲಿ ಬೌಲಿಂಗ್ ಮಾಡಿದ್ದು.

 Sharesee more..