Friday, Oct 22 2021 | Time 20:58 Hrs(IST)
Sports Share

ಟಿ-20: ಜಿಂಬಾಬ್ವೆ ಮಣಿಸಿ ಐರ್ಲೆಂಡ್

ಡಬ್ಲಿನ್, ಸೆ.3 (ಯುಎನ್ಐ)- ವೇಗದ ಬೌಲರ್ ಮಾರ್ಕ್ ಅಡೈರ್ (23ಕ್ಕೆ 4) ಉತ್ತಮ ದಾಳಿಯ ನೆರವಿನಿಂದ ಐರ್ಲೆಂಡ್ ಗುರುವಾರ ಇಲ್ಲಿ ನಡೆದ ನಾಲ್ಕನೇ ಟಿ 20 ಯಲ್ಲಿ ಜಿಂಬಾಬ್ವೆಯನ್ನು 60 ರನ್ ಳಿಂದ ಸೋಲಿಸಿ, ಐದು ಪಂದ್ಯಗಳ ಸರಣಿಯಲ್ಲಿ 3-1 ಮುನ್ನಡೆ ಸಾಧಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಐರ್ಲೆಂಡ್, ನಿಗದಿತ 20 ಓವರ್‌ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ 174 ರನ್ ಗಳಿಸಿತು. ಉತ್ತರವಾಗಿ, ಜಿಂಬಾಬ್ವೆ 20 ಓವರ್‌ಗಳಲ್ಲಿ ಒಂಬತ್ತು ವಿಕೆಟ್ ನಷ್ಟಕ್ಕೆ 110 ರನ್ ಗಳಿಸಲು ಸಾಧ್ಯವಾಯಿತು.

ಸ್ಟರ್ಲಿಂಗ್ 33 ಎಸೆತಗಳಲ್ಲಿ ನಾಲ್ಕು ಬೌಂಡರಿಗಳ ಸಹಾಯದಿಂದ 39, ಕೆವಿನ್ 39 ಎಸೆತಗಳಲ್ಲಿ ಆರು ಬೌಂಡರಿ ಮತ್ತು ಒಂದು ಸಿಕ್ಸರ್ ನೆರವಿನಿಂದ 47 ರನ್ ಗಳಿಸಿದರು ಮತ್ತು ಬಾಲ್ಬಿರ್ನಿ 22 ಎಸೆತಗಳಲ್ಲಿ ನಾಲ್ಕು ಬೌಂಡರಿ ಮತ್ತು ಒಂದು ಸಿಕ್ಸರ್ ನೆರವಿನಿಂದ 36 ರನ್ ಗಳಿಸಿದರು.

ವೇಗದ ಬೌಲರ್ ಮಾರ್ಕ್ ಅಡೈರ್, ಐರ್ಲೆಂಡ್ ಗೆಲುವಿನ ಹೀರೋ ಆದರು. ಇವರು ನಾಲ್ಕು ಓವರ್ ಗಳಲ್ಲಿ 23 ರನ್ ನೀಡಿ ನಾಲ್ಕು ವಿಕೆಟ್ ಪಡೆದರು. ಅವರನ್ನು ಹೊರತುಪಡಿಸಿ ಶೇನ್ ಗೆಕೆಟ್ ಎರಡು ವಿಕೆಟ್ ಪಡೆದರೆ, ಕ್ರೇಗ್ ಯಂಗ್, ಬ್ಯಾರಿ ಮೆಕಾರ್ಥಿ ಮತ್ತು ಸಿಮಿ ಸಿಂಗ್ ತಲಾ ಒಂದು ವಿಕೆಟ್ ಪಡೆದರು.

ಬೌಲಿಂಗ್‌ನಲ್ಲಿ ಹೆಚ್ಚಿನ ಸಾಧನೆ ಮಾಡದ ನಂತರ, ಜಿಂಬಾಬ್ವೆ ಕೂಡ ಬ್ಯಾಟಿಂಗ್‌ನಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿತು. ಯಾವುದೇ ಬ್ಯಾಟ್ಸ್‌ಮನ್ 30 ರನ್ ಗಳಿಸಲು ಸಾಧ್ಯವಾಗಲಿಲ್ಲ. ನಾಯಕ ಕ್ರೇಗ್ ಎರ್ವಿನ್ ಮೂರು ಬೌಂಡರಿಗಳ ಸಹಾಯದಿಂದ 28 ರನ್ ಗಳಿಸಿದರು. ಅವರ ಹೊರತಾಗಿ, ಲ್ಯೂಕ್ ಜೊಂಗ್ವೆ 20 ಎಸೆತಗಳಲ್ಲಿ ಎರಡು ಬೌಂಡರಿಗಳ ಸಹಾಯದಿಂದ 24 ರನ್ ಗಳಿಸಿದರು.

ಬೌಲಿಂಗ್‌ನಲ್ಲಿ ವೆಲ್ಲಿಂಗ್ಟನ್ ಮಸಕಡ್ಜಾ ಎರಡು, ರಿಚರ್ಡ್ ನ್ಗರ್ವಾ ಮತ್ತು ಲ್ಯೂಕ್ ಜಾಂಗ್ವೆ ತಲಾ ಒಂದು ವಿಕೆಟ್ ಪಡೆದರು.
ಯುಎನ್ಐ ವಿಎನ್ಎಲ್ 2026
More News
ಭಾರತದಲ್ಲಿ ಗಲ್ಲಿ ಕ್ರಿಕೆಟಿಗ; ಓಮನ್ ನಲ್ಲಿ ಸ್ಟಾರ್ ಆಟಗಾರ!

ಭಾರತದಲ್ಲಿ ಗಲ್ಲಿ ಕ್ರಿಕೆಟಿಗ; ಓಮನ್ ನಲ್ಲಿ ಸ್ಟಾರ್ ಆಟಗಾರ!

21 Oct 2021 | 1:28 PM

ಭಾರತದ ಗಲ್ಲಿ ಗಲ್ಲಿಗಳಲ್ಲಿ ಆಡುತ್ತಿದ್ದ ಹುಡುಗ ಈಗ ಓಮನ್ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ. ಟಿ-20 ವಿಶ್ವಕಪ್ ನ ಅರ್ಹತಾ ಪಂದ್ಯಗಳಲ್ಲಿ ಆಡುತ್ತಿರುವ ಜತೀಂದರ್ ಸಿಂಗ್, ಓಮನ್ ತಂಡದ ಸ್ಟಾರ್ ಆಟಗಾರನಾಗಿದ್ದಾನೆ.

 Sharesee more..
ದ್ರಾವಿಡ್ ಆಯ್ಕೆಗೂ ಮುನ್ನ ಇಬ್ಬರು ಕ್ರಿಕೆಟ್ ದಿಗ್ಗಜರ ಜತೆ ಬಿಸಿಸಿಐ ಸಂಪರ್ಕ!

ದ್ರಾವಿಡ್ ಆಯ್ಕೆಗೂ ಮುನ್ನ ಇಬ್ಬರು ಕ್ರಿಕೆಟ್ ದಿಗ್ಗಜರ ಜತೆ ಬಿಸಿಸಿಐ ಸಂಪರ್ಕ!

21 Oct 2021 | 11:07 AM

ಭಾರತೀಯ ಕ್ರಿಕೆಟ್ ನ ಗೋಡೆ ಎಂದೇ ಕರೆಯಲ್ಪಡುವ ರಾಹುಲ್ ದ್ರಾವಿಡ್ ಬಿಸಿಸಿಐನಲ್ಲಿ ಹೊಸ ಜವಾಬ್ದಾರಿ ಹೊರುವುದು ಫಿಕ್ಸ್ ಆಗಿದೆ. ಭಾರತೀಯ ಕ್ರಿಕೆಟ್ ತಂಡದ ನೂತನ ಕೋಚ್ ಆಗಲಿರುವ ರಾಹುಲ್ ಅವರ ಹೆಸರು ಔಪಚಾರಿಕವಾಗಿ ಘೋಷಣೆ ಮಾಡೋದು ಮಾತ್ರ ಬಾಕಿ ಉಳಿದಿದೆ.

 Sharesee more..
ಟಿ-20 ವಿಶ್ವಕಪ್; ಸೂಪರ್ 12ರ ಘಟ್ಟಕ್ಕೆ ಜಿಗಿದ ಶ್ರೀಲಂಕಾ

ಟಿ-20 ವಿಶ್ವಕಪ್; ಸೂಪರ್ 12ರ ಘಟ್ಟಕ್ಕೆ ಜಿಗಿದ ಶ್ರೀಲಂಕಾ

21 Oct 2021 | 10:32 AM

ಐರ್ಲೆಂಡ್ ವಿರುದ್ಧ ಸಿಂಹಳೀಯರು ಸುಲಭ ಗೆಲುವು ದಾಖಲಿಸಿದ್ದಾರೆ. ಎರಡೂ ಪಂದ್ಯಗಳಲ್ಲಿ ವಿಜಯ ಸಾಧಿಸುವುದರ ಮೂಲಕ ಶ್ರೀಲಂಕಾ ಸೂಪರ್ 12 ಘಟ್ಟಕ್ಕೆ ಜಿಗಿಯಿತು.

 Sharesee more..
ಟಿ-20 ವಿಶ್ವಕಪ್; ಬೌಲಿಂಗ್ ಮಾಡಿದ ವಿರಾಟ್ ಕೊಹ್ಲಿ!

ಟಿ-20 ವಿಶ್ವಕಪ್; ಬೌಲಿಂಗ್ ಮಾಡಿದ ವಿರಾಟ್ ಕೊಹ್ಲಿ!

20 Oct 2021 | 7:55 PM

ದುಬೈ ಕ್ರಿಕೆಟ್ ಗ್ರೌಂಡ್ ನಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಅಚ್ಚರಿ ಕಾಣಿಸಿತು. ಅದುವೇ ವಿರಾಟ್ ಕೊಹ್ಲಿ ಬೌಲಿಂಗ್ ಮಾಡಿದ್ದು.

 Sharesee more..