Friday, May 29 2020 | Time 10:09 Hrs(IST)
  • ವಂದೇ ಭಾರತ್ ಮಿಷನ್: 45 ಸಾವಿರ ಭಾರತೀಯರು ತವರಿಗೆ
  • ಮೆಕ್ಸಿಕೋದಲ್ಲಿ ಕೊರೊನಾ ಸೋಂಕಿಗೆ ಮತ್ತೆ 447 ಬಲಿ, ಒಟ್ಟು 9,044 ಸಾವು
  • ಚಿಲಿಯಲ್ಲಿ 87 ಸಾವಿರ ಕೊರೊನಾ ಸೋಂಕು ಪ್ರಕರಣ
  • ರಾಜ್ಯಸಭಾ ಸದಸ್ಯ ವಿರೇಂದ್ರಕುಮಾರ್ ಇನ್ನಿಲ್ಲ
  • ಸೊಲ್ಲಾಪುರ; ಕೃಷಿ ಭೂಮಿಯಲ್ಲಿ ಸುಮಾರು ೭೦೦ ಪುರಾತನ ನಾಣ್ಯಗಳ ಪತ್ತೆ
  • ದಕ್ಷಿಣ ಸೊಮಾಲಿಯಾ; ಅಲ್ ಶಬಾಬ್ ಉಗ್ರರಿಂದ ೯ ವೈದ್ಯರನ್ನು ಅಪಹರಿಸಿ ಹತ್ಯೆ
  • ದಕ್ಷಿಣ ಸೊಮಾಲಿಯಾ; ಅಲ್ ಶಬಾಬ್ ಉಗ್ರರಿಂದ ೯ ವೈದ್ಯರನ್ನು ಅಪಹರಿಸಿ ಹತ್ಯೆ
  • ಲಾಕ್ ಡೌನ್; ರಾಜ್ಯಗಳ ಅಭಿಪ್ರಾಯ ಕೇಳಿದ ಗೃಹ ಸಚಿವ ಅಮಿತ್ ಶಾ
Entertainment Share

'ಪೈಲ್ವಾನ್' ನಿವಾಸದಲ್ಲಿ ಭಾಸ್ಕರ್ ರಾವ್

ಬೆಂಗಳೂರು, ಸೆ 20 (ಯುಎನ್ಐ) ಸ್ಯಾಂಡಲ್ ವುಡ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ 'ಪೈಲ್ವಾನ್' ಚಿತ್ರ ಇತ್ತೀಚೆಗಷ್ಟೇ ಬಿಡುಗಡೆಗೊಂಡು ಯಶಸ್ವಿ ಪ್ರದರ್ಶನ ಕಾಣುತ್ತಿರುವ ಬೆನ್ನಲ್ಲೇ, ಶುಕ್ರವಾರ ನಗರ ಪೊಲೀಸ್ ಆಯುಕ್ತ ಎನ್ ಭಾಸ್ಕರ್ ರಾವ್, ಸುದೀಪ್ ಅವರ ನಿವಾಸಕ್ಕೆ ಭೇಟಿ ನೀಡುವ ಮೂಲಕ ಅವರ ಮೊಗದಲ್ಲಿ ಇನ್ನಷ್ಟು ಸಂತಸಮೂಡಿಸಿದ್ದಾರೆ.
'ಬೆಂಗಳೂರು ನಗರ ಪೊಲೀಸ್ ಆಯುಕ್ತರು, ಮನೆಗೆ ಬಂದಿದ್ದಕ್ಕೆ ಸಂತಸವಾಗಿದೆ' ಎಂದು ಕಿಚ್ಚ ಸುದೀಪ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ.
'ಪೈಲ್ವಾನ್' ಚಿತ್ರದ ಪೈರಸಿ, ಫ್ಯಾನ್ಸ್ ವಾರ್ ನಡುವೆ ಆಯುಕ್ತರು, ಸುದೀಪ್ ಅವರ ಮನೆಗೆ ಏಕಾಏಕೀ ಭೇಟಿ ನೀಡಿರುವುದು ತೀವ್ರ ಕುತೂಹಲ ಕೆರಳಿಸಿದೆ.
ಕೆಲವು ಸಮಯಗಳ ಕಾಲ ಸುದೀಪ್ ಮತ್ತು ಕುಟುಂಬದ ಜೊತೆ ಭಾಸ್ಕರ್ ರಾವ್ ಮಾತುಕತೆ ನಡೆಸಿದ್ದಾರೆ. ಆದರೆ, ಆಯುಕ್ತರು, ಸುದೀಪ್ ಅವರನ್ನು ಏಕೆ ಭೇಟಿಯಾಗಿದ್ದಾರೆ ಎಂಬ ಉದ್ದೇಶ ಮಾತ್ರ ಇನ್ನೂ ಬಹಿರಂಗಗೊಂಡಿಲ್ಲ.
ಇತ್ತೀಚೆಗಷ್ಟೇ 'ಪೈಲ್ವಾನ್' ಚಿತ್ರದ ನಿರ್ಮಾಪಕಿ‌ ಸ್ವಪ್ನ ಕೃಷ್ಣ, ಚಿತ್ರ ಪೈರಸಿ ಆಗಿರುವ ಕುರಿತು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಓರ್ವನನ್ನು ಬಂಧಿಸಲಾಗಿದೆ.
ಯುಎನ್ಐ ಪಿಕೆ ಎಸ್ಎಚ್ 1449