Sunday, Dec 15 2019 | Time 18:03 Hrs(IST)
 • ಪೌರತ್ವ ತಿದ್ದುಪಡಿ ಮಸೂದೆ ಜಾರಿಯಿಂದ ದೇಶ ರಕ್ಷಣೆಯಾಗಿದೆ; ಪ್ರಧಾನಿ
 • ಪಂತ್-ಅಯ್ಯರ್ ಅರ್ಧಶತಕ: ವೆಸ್ಟ್‌ ಇಂಡೀಸ್‌ಗೆ 289 ರನ್ ಗುರಿ
 • ಸೈಫ್ ಪುತ್ರಿಯಾಗಿ ಅನನ್ಯ !
 • ದಬಾಂಗ್ -3 ಕುರಿತು ಸಲ್ಮಾನ್ ಮಾತು
 • ಎಚ್ ಡಿ ರೇವಣ್ಣ ಮಂಡ್ಯ ಉಸಾಬರಿಗೆ ಬರುವುದು ಬೇಡ: ನಾರಾಯಣಗೌಡ
 • ಧೋನಿ ನನ್ನ ನೆಚ್ಚಿನ ಕ್ರಿಕೆಟರ್; ಸಲ್ಮಾನ್ ಖಾನ್
 • ಬ್ಯಾಡ್ಮಿಂಟನ್ : ಲಕ್ಷ್ಯ ಸೇನ್‌ಗೆ ಬಾಂಗ್ಲಾದೇಶ ಇಂಟರ್‌ನ್ಯಾಷನಲ್ ಚಾಲೆಂಜ್ ಮುಕುಟ
 • ಭಾರತಕ್ಕೆೆ ಪಂತ್, ಅಯ್ಯರ್ ಅರ್ಧಶತಕಗಳ ಆಸರೆ
 • ರಾಹುಲ್ ಗಾಂಧಿ ವಿರುದ್ದ ಮಾನನಷ್ಟ ಮೊಕದ್ದಮೆ ಹೂಡುವೆ; ರಂಜಿತ್ ಸಾರ್ವಕರ್
 • ಅಸ್ಸಾಂ ಪರಿಸ್ಥಿತಿ ಕುರಿತು ಮೋದಿ, ಅಮಿತ್‍ ಷಾಗೆ ಮಾಹಿತಿ ನೀಡಲಿರುವ ಸೋನೋವಾಲ್‍
 • ವೃತ್ತಿ ಜೀವನದ 11ನೇ ಬಿಡಬ್ಲ್ಯುಎಫ್ ಫೈನಲ್ಸ್‌ ಗೆದ್ದ ಕೆಂಟೊ ಮೊಮೊಟಾ
 • ಕಾಂಗ್ರೆಸ್ ದ್ವಿಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದೆ; ಮಾಯಾವತಿ ಲೇವಡಿ
 • ಭಾರತೀಯ ಮೀನುಗಾರರ ದೋಣಿಗಳ ಮೇಲೆ ಶ್ರೀಲಂಕಾ ನೌಕಾಪಡೆಯಿಂದ ದಾಳಿ
 • ವಿಶ್ವ ಸುಂದರಿ ಪಟ್ಟ, ಭಾರತದ ಸುಮನ್ ರಾವ್ ಗೆ ದ್ವಿತೀಯ ಸ್ಥಾನ
 • ಫಿಲಿಪೈನ್ಸ್‌ನಲ್ಲಿ 6 8 ತೀವ್ರತೆಯ ಭೂಕಂಪನ
Entertainment Share

‘ಮೂರ್ಕಲ್ ಎಸ್ಟೇಟ್’ ಸೌಂಡ್ ಗೆ ಸೆನ್ಸಾರ್ ಮಂಡಳಿಯೇ ಬೆದರಿತಂತೆ!

ಬೆಂಗಳೂರು, ಅ ೨೧ (ಯುಎನ್‌ಐ) ಈ ವಾರ ತೆರೆಗೆ ಬರುತ್ತಿರುವ ’ಮೂರ್ಕಲ್ ಎಸ್ಟೇಟ್’ ಚಿತ್ರ ವೀಕ್ಷಿಸಿದರೆ ನೀವು ಖಂಡಿತ ಬೆಚ್ಚಿ ಬೀಳುತ್ತೀರಿ! ಹೀಗಂತ ಸ್ವತಃ ಚಿತ್ರತಂಡ ಹೇಳಿಕೊಂಡಿದೆ
ಭದ್ರಾವತಿ ಮೂವೀ ಮೇಕರ್ಸ್ ಲಾಂಛನದಲ್ಲಿ ಕುಮಾರ್ ಎನ್ ಭದ್ರಾವತಿ ಅವರು ನಿರ್ಮಿಸಿರುವ ‘ಮೂರ್ಕಲ್ ಎಸ್ಟೇಟ್' ಚಿತ್ರ ವೀಕ್ಷಿಸಿ ಅದರ ಸೌಂಡ್ ಎಫೆಕ್ಟ್ ಗೆ ಬೆದರಿ `ಎ’ ಅರ್ಹತಾ ಪತ್ರ ನೀಡಿದೆಯಂತೆ
ಈಗಾಗಲೇ ಸಾಕಷ್ಟು ಹಾರರ್ ಚಿತ್ರಗಳು ಬಂದಿವೆಯಾದರೂ ’ಮೂರ್ಕಲ್ ಎಸ್ಟೇಟ್’ ವಿಶೇಷವಾದುದು ಹಲವು ವರ್ಷಗಳ ಹಿಂದೆ ಮೈಸೂರಿನಲ್ಲಿ ನಡೆದ ನೈಜ ಘಟನೆ ಆಧರಿಸಿ ಚಿತ್ರ ನಿರ್ಮಿಸಲಾಗಿದೆ ನೆಗೆಟಿವ್ ಎನರ್ಜಿಯನ್ನು ಕೆಣಕದಿರಿ ಎಂಬ ಸಂದೇಶವನ್ನು ಈ ಮೂಲಕ ನೀಡಲಾಗಿದೆ ಎಂದು ನಿರ್ದೇಶಕರು ತಿಳಿಸಿದ್ದಾರೆ
ಪ್ರಮೋದ್ ಕುಮಾರ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ಸುದ್ದುರಾಯ್ ಸಂಗೀತ ನೀಡಿದ್ದಾರೆ. ರಾಕೇಶ್ ಸಿ ತಿಲಕ್ ಛಾಯಾಗ್ರಹಣ ಹಾಗೂ ಮರಿಸ್ವಾಮಿ ಅವರ ಸಂಕಲನ ಈ ಚಿತ್ರಕ್ಕಿದೆ. ವಿಜಯ್ ಈಶ್ವರ್ ಚಿತ್ರದ ಹಾಡುಗಳನ್ನು ಬರೆದಿದ್ದಾರೆ. ಪ್ರವೀಣ್, ಪ್ರಕೃತಿ, ವಿಜಯ್ ಈಶ್ವರ್, ಅಭಿಷೇಕ್ ಜೈನ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಯುಎನ್‌ಐ ಎಸ್‌ಎ ವಿಎನ್ ೨೧೧೫