Thursday, Jan 21 2021 | Time 04:16 Hrs(IST)
  • ಉಪ ಸಭಾಪತಿ ಚುನಾವಣೆ ನಂತರ ಸಭಾಪತಿ ಸ್ಥಾನಕ್ಕೆ ಕೆ ಪ್ರತಾಪ ಚಂದ್ರ ಶೆಟ್ಟಿ ರಾಜೀನಾಮೆ !?
  • ವಿಧಾನ ಮಂಡಲ ಕಲಾಪ ಅಧಿಸೂಚನೆಗೂ ಮುನ್ನವೇ ಸಭಾಪತಿ ವಿರುದ್ಧ ಅವಿಶ್ವಾಸ ನೋಟೀಸ್ ಸ್ವೀಕರಿಸಿದ ಕಾರ್ಯದರ್ಶಿ
Special Share

‘ಸುಪ್ರೀಂ’ ನಲ್ಲಿ ಚಂದಾ ಕೋಚ್ಚಾರ್ ಹಿನ್ನಡೆ

ನವದೆಹಲಿ, ಡಿ 1(ಯುಎನ್ಐ) ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ಐಸಿಐಸಿಐ ಬ್ಯಾಂಕ್ ಮಾಜಿ ಸಿಇ ಓ, ಎಂ ಡಿ ಚಂದಾಕೋಚ್ಚಾರ್ ಅವರಿಗೆ ಸುಪ್ರೀಂ ಕೋರ್ಟ್ ನಲ್ಲಿ ತೀವ್ರ ಹಿನ್ನಡೆ ಉಂಟಾಗಿದೆ.
ತಮ್ಮನ್ನು ಬ್ಯಾಂಕಿನ ಸಿ ಇ ಓ, ಎಂಡಿ ಹುದ್ದೆಯಿಂದ ಆಡಳಿತ ಮಂಡಳಿ ವಜಾಗೊಳಿಸಿರುವುದನ್ನು ಪ್ರಶ್ನಿಸಿ ಕೋಚ್ಚಾರ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. 'ಕ್ಷಮಿಸಿ .. ಹೈಕೋರ್ಟ್ ನೀಡಿದ ತೀರ್ಪಿನಲ್ಲಿ ನಾವು ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ. ಇದು ಖಾಸಗಿ ಬ್ಯಾಂಕ್ .. ಉದ್ಯೋಗಿ ನಡುವೆ ಮಾಡಿಕೊಂಡ ಒಪ್ಪಂದದ ವ್ಯಾಪ್ತಿಗೆ ಒಳಪಡುತ್ತದೆ ”ಎಂದು ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ನೇತೃತ್ವದ ನ್ಯಾಯಪೀಠ ಹೇಳಿದೆ.
ಮೊದಲು ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದ ಚಂದಾ ಕೋಚ್ಚಾರ್, ತಮ್ಮನ್ನು ಐಸಿಐಸಿಐ ಬ್ಯಾಂಕ್ ಎಂಡಿ, ಸಿಇಓ ಹುದ್ದೆಯಿಂದ ವಜಾಗೊಳಿಸಿ ಐಸಿಐಸಿಐ ಬ್ಯಾಂಕ್ ಆಡಳಿತ ಮಂಡಳಿ ಕೈಗೊಂಡ ನಿರ್ಧಾರವನ್ನು ವಿರೋಧಿಸಿ ಅವರು ಅರ್ಜಿ ಸಲ್ಲಿಸಿದ್ದರು. ಆದರೆ ಅವರಿಗೆ ಅಲ್ಲಿ ಹಿನ್ನಡೆ ಉಂಟಾಯಿತು. "ಇದು ಖಾಸಗಿ ಒಪ್ಪಂದದ ಕಾರಣ ನಾವು ಇದರಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ" ಎಂದು ಹೇಳಿ ಕಳೆದ ಮಾರ್ಚ್ 5 ರಂದು ಆಕೆಯ ಆರ್ಜಿಯನ್ನು ಬಾಂಬೆ ಹೈಕೋರ್ಟ್ ವಜಾಗೊಳಿಸಿತ್ತು. ಹೈಕೋರ್ಟ್ನ ತೀರ್ಪನ್ನು ಪ್ರಶ್ನಿಸಿ ಕೋಚ್ಚಾರ್ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಆಲ್ಲಿಯೂ ಕೂಡಾ ಈಗ ಹಿನ್ನಡೆ ಉಂಟಾಗಿದೆ.
ವಿಡಿಯೋಕಾನ್ ಉದ್ಯಮಗಳ ಗುಂಪಿಗೆ 1,875 ಕೋಟಿ ರೂ ಸಾಲ ಮಂಜೂರಾತಿಯಲ್ಲಿ ನಡೆದ ಅವ್ಯಹಾರ, ಭ್ರಷ್ಟಾಚಾರದಲ್ಲಿ ಭಾಗಿಯಾದ ಆರೋಪದ ಮೇಲೆ ಚಂದಾ ಕೋಚ್ಚಾರ್ ಹಾಗೂ ಆಕೆಯ ಪತಿ ದೀಪಕ್ ಕೋಚ್ಚಾರ್, ವಿಡಿಯೋಕಾನ್ ಪ್ರವರ್ತಕ ವೇಣುಗೋಪಾಲ್ ದೂತ್ ವಿರುದ್ದ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಲಾಗಿತ್ತು. ಈ ಆರೋಪದ ಹಿನ್ನೆಲೆಯಲ್ಲಿ ಐಸಿಐಸಿಐ, ನ್ಯಾಯಮೂರ್ತಿ ಬಿ.ಎನ್. ಶ್ರೀಕೃಷ್ಣ ನೇತೃತ್ವದ ಸಮಿತಿ ರಚಿಸಿ ತನಿಖೆ ನಡೆಸಿತು. ನಂತರ ಚಂದಾಕೋಚ್ಚಾರ್ ಅವರನ್ನು ಹುದ್ದೆಯಿಂದ ತೆಗೆದುಹಾಕಲಾಯಿತು. ಆದರೆ ಅದಕ್ಕೂ ಮೊದಲೇ ಕೋಚ್ಚಾರ್ ಸ್ವಯಂ ನಿವೃತ್ತಿಯ ಕೋರಿಕೆಗೆ ಐಸಿಐಸಿಐ ಮಂಡಳಿ ಸಮ್ಮತಿಸಿತ್ತು. ಆದರೂ, ತಮ್ಮನ್ನು ಹುದ್ದೆಯಿಂದ ವಜಾಗೊಳಿಸಿರುವುದನ್ನು ಪ್ರಶ್ನಿಸಿ ಚಂದಾ ಕೋಚ್ಚರ್ ನ್ಯಾಯಾಲದ ಮೊರೆ ಹೋಗಿದ್ದರು. ಏತನ್ಮಧ್ಯೆ, ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ದೀಪಕ್ ಕೊಚ್ಚರ್ ಅವರನ್ನು ಈ ವರ್ಷದ ಸೆಪ್ಟೆಂಬರ್ ನಲ್ಲಿ ಬಂಧಿಸಲಾಗಿತ್ತು.
ಯುಎನ್ಐ ಕೆವಿಆರ್ 1355
More News
ಸ್ವಯಂ ಘೋಷಿತ ಆಧ್ಯಾತ್ಮಿಕ ನಾಯಕರ ಆಶ್ರಮಗಳ ವಿರುದ್ದ ಪಿಐಎಲ್ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಸ್ವಯಂ ಘೋಷಿತ ಆಧ್ಯಾತ್ಮಿಕ ನಾಯಕರ ಆಶ್ರಮಗಳ ವಿರುದ್ದ ಪಿಐಎಲ್ ತಿರಸ್ಕರಿಸಿದ ಸುಪ್ರೀಂ ಕೋರ್ಟ್

20 Jan 2021 | 3:56 PM

ನವದೆಹಲಿ, ಜ 20(ಯುಎನ್ಐ)- ಸ್ವಯಂ ಘೋಷಿತ ಆಧ್ಯಾತ್ಮಿಕ ಗುರುಗಳು ನಡೆಸುತ್ತಿರುವ ಆಶ್ರಮಗಳ ವಿರುದ್ಧ ಕ್ರಮ ಜರುಗಿಸಲು ಆದೇಶಿಸಬೇಕು ಎಂದು ಕೋರಿ ಸಲ್ಲಿಸಿದ್ದ ಖಟ್ಲೆಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.

 Sharesee more..