Friday, Oct 22 2021 | Time 21:41 Hrs(IST)
Entertainment Share

'ತಲೈವಿ' ಚಿತ್ರ ವೀಕ್ಷಿಸಿದ ರಜನಿಕಾಂತ್‌

ಚೆನ್ನೈ, ಸೆ 15(ಯುಎನ್‌ ಐ) ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ. ಜಯಲಲಿತಾ ಅವರ ಜೀವನ ಆಧರಿಸಿದ 'ತಲೈವಿ' ಈ ತಿಂಗಳ 10 ರಂದು ವಿಶ್ವದಾದ್ಯಂತ ಬಿಡುಗಡೆಗೊಂಡಿದೆ. ಬಾಲಿವುಡ್ ನಾಯಕಿ ಕಂಗನಾ ರಣಾವತ್ ಮುಖ್ಯ ಪಾತ್ರದಲ್ಲಿ ನಟಿಸಿದರೆ, ಎಂಜಿಆರ್ ಪಾತ್ರದಲ್ಲಿ ಅರವಿಂದ ಸ್ವಾಮಿ, ಕರುಣಾನಿಧಿಯಾಗಿ ನಾಜರ್‌, ಆರ್‌ ಎಂ. ವೀರಪ್ಪನ್‌ ಪಾತ್ರದಲ್ಲಿ ಸಮುದ್ರ ಖನಿ ನಟಿಸಿದ್ದಾರೆ. ಎ.ಎಲ್‌ . ವಿಜಯ್ ಚಿತ್ರ ನಿರ್ದೇಶಿಸಿದ್ದಾರೆ.
ಚಿತ್ರ ಬಿಡುಗಡೆಯಾದ ಮೊದಲ ಪ್ರದರ್ಶನದಿಂದಲೂ ಪ್ರೇಕ್ಷಕರಿಂದ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕಂಗನಾ ಹಾಗೂ ಅರವಿಂದ ಸ್ವಾಮಿ ಅದ್ಭುತ ವಾಗಿ ಅಭಿನಯಿಸಿದ್ದಾರೆ ಎಂದು ಪ್ರತಿಯೊಬ್ಬರೂ ಶ್ಲಾಘಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ, ಸೂಪರ್ ಸ್ಟಾರ್ ರಜನಿಕಾಂತ್ ಚಿತ್ರವನ್ನು ವೀಕ್ಷಿಸಿ ನಿರ್ದೇಶಕ ವಿಜಯ್ ಅವರನ್ನು ವಿಶೇಷವಾಗಿ ಅಭಿನಂದಿಸಿದ್ದಾರೆ. ಚಿತ್ರವನ್ನು ಚೆನ್ನಾಗಿ ಗೆದಿರುವೆ ಎಂದು ರಜನಿಕಾಂತ್ ಹೃದಯಪೂರ್ವಕವಾಗಿ ಅಭಿನಂದಿಸಿರುವದರಿಂದ ಚಿತ್ರ ತಂಡ ಆನಂದದಲ್ಲಿ ಮುಳುಗಿಹೋಗಿದೆ.
ಯುಎನ್‌ ಐ ಕೆವಿಆರ್‌ 1039
More News
“ಸಖತ್ ಬಾಲು” ಮೀಟ್ ಮಾಡೋಕೆ ರೆಡಿಯಾಗಿ!

“ಸಖತ್ ಬಾಲು” ಮೀಟ್ ಮಾಡೋಕೆ ರೆಡಿಯಾಗಿ!

21 Oct 2021 | 2:01 PM

 Sharesee more..
ಇಂದು ವಿಚಾರಣೆ ಇಲ್ಲ; ಶಾರುಖ್ ಪುತ್ರನ ಹಣೆಬರಹ ಮಂಗಳವಾರ ನಿರ್ಧಾರ

ಇಂದು ವಿಚಾರಣೆ ಇಲ್ಲ; ಶಾರುಖ್ ಪುತ್ರನ ಹಣೆಬರಹ ಮಂಗಳವಾರ ನಿರ್ಧಾರ

21 Oct 2021 | 12:28 PM

ಬೇಲ್ ಗಾಗಿ ಅಲೆದಾಡುತ್ತಿರುವ ಬಿಟೌನ್ ಸ್ಟಾರ್ ಪುತ್ರನ ಜಾಮೀನು ಅರ್ಜಿ ವಿಚಾರಣೆ ಮಂಗಳವಾರ ಮುಂಬೈ ಹೈಕೋರ್ಟ್ ನಡೆಯಲಿದೆ. ಅರ್ಥರ್ ರೋಡ್ ಜೈಲು ಪಾಲಾಗಿರುವ ಆರ್ಯನ್ ಖಾನ್, ಕಳೆದ 18 ದಿನಗಳಿಂದ ಬಂಧನದಲ್ಲಿದ್ದಾನೆ.

 Sharesee more..