Friday, Oct 22 2021 | Time 21:29 Hrs(IST)
Entertainment Share

"ಗಾಂಧಿ ಮತ್ತು ನೋಟು"ಟ್ರೇಲರ್

ಬೆಂಗಳೂರು, ಸೆ. 09(ಯುಎನ್ಐ) ವಿಭಿನ್ನ ಕಥಾಹಂದರ ಹೊಂದಿರುವ "ಗಾಂಧಿ ಮತ್ತು ನೋಟು" ಚಿತ್ರದ ಟ್ರೇಲರ್ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಬಿಡುಗಡೆಗೊಳಿಸಿ ಶುಭ ಕೋರಿದ್ದಾರೆ.

ಸಾಹಿತಿ ವಿ.ನಾಗೇಂದ್ರಪ್ರಸಾದ್ ಪುತ್ರಿ ದಿವಿಜಾ ನಾಗೇಂದ್ರಪ್ರಸಾದ್ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ.
ಲೋಕೇಶ್‌ ಡಿ.ಕೆ, ಮುರುಧ್ಯ, ಪ್ರಜ್ಞಾ ಬ್ರಹ್ಮಾವರ್, ಕೆ.ಬಿ.ರವಿ, ರಂಗಸ್ವಾಮಿ, ನವೀನ್, ವಿಶಾಲ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಭಾವನಾ ಕಂಬೈನ್ಸ್ ಲಾಂಛನದಲ್ಲಿ ಸುಧಾರಾಣಿ ಹೆಚ್.ಆರ್, ವೀಣಾ ಪದ್ಮನಾಭ, ಮಂಜುನಾಥ್ ಬಿ.ಎನ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ.

ಪ್ರಿಯಾಂಕ ಉಪೇಂದ್ರ ಅಭಿನಯದ ಸೆಕೆಂಡ್ ಆಫ್ ಚಿತ್ರ ನಿರ್ದೇಶಿಸಿದ್ದ ಯೋಗಿ ದೇವಗಂಗೆ ಈ ಚಿತ್ರದ ನಿರ್ದೇಶಕರು. ಕಥೆ, ಚಿತ್ರಕಥೆ ಕೂಡ ಯೋಗಿ ಅವರದೆ.
ಗಾಂಧಿ ತತ್ವಗಳನ್ನು ಹಾಗೂ ನೋಟನ್ನು ಈಗಿನ ಜನ ಯಾವ ರೀತಿ ಬಳಸಿಕೊಳ್ಳುತ್ತಿದ್ದಾರೆ ಎಂಬ ವಿಷಯವನ್ನು ಹಳ್ಳಿ ಹುಡುಗಿ ಪಾತ್ರದ ಮೂಲಕ ಹೇಳ ಹೊರಟಿದ್ದಾರೆ ನಿರ್ದೇಶಕರು. ಚಿಕ್ಕ ವಯಸ್ಸಿನ ಈ ಹುಡುಗಿ ಹೇಳುವ ಮಾತು ಎಲ್ಲಾವರ್ಗದ ಜನರ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದೇ ಇದರ ಕಥಾಸಾರಾಂಶ.

ಸಾಗರದ ತುಂಬ್ರಿ ಎಂಬ ಸ್ಥಳದಲ್ಲೇ ಹೆಚ್ಚಿನ‌ ಚಿತ್ರೀಕರಣ ನಡೆದಿದೆ. ಪ್ರಸ್ತುತ ಚಿತ್ರ ಡಿ ಐ ನಿಂದ ಸಿಂಗಾರಗೊಳ್ಳುತ್ತಿದೆ. ಅಕ್ಟೋಬರ್ ವೇಳೆಗೆ ತೆರೆಗೆ ಬರುವ ಸಾಧ್ಯತೆಯಿದೆ.

ವಿ.ನಾಗೇಂದ್ರಪ್ರಸಾದ್ ಅವರು ಬರೆದಿರುವ ಹಾಡುಗಳಿಗೆ ವಾಣಿ ಹರಿಕೃಷ್ಣ ಸಂಗೀತ ನೀಡಿದ್ದಾರೆ. ಅಚ್ಚು ಸುರೇಶ್ ಛಾಯಾಗ್ರಹಣ, ವಸಂತಕುಮಾರ್ ಸಂಕಲನ ಹಾಗೂ ವಿ.ಎಲ್ ಸತೀಶ್ ಅವರ ಸಹ ನಿರ್ದೇಶನವಿರುವ ಈ ಚಿತ್ರಕ್ಕೆ ಗುರುಪ್ರಸಾದ್ ಚಂದ್ರಶೇಖರ್ ಸಂಭಾಷಣೆ ಬರೆದಿದ್ದಾರೆ.

ಯುಎನ್ಐ ಎಸ್ಎ 1146
More News
“ಸಖತ್ ಬಾಲು” ಮೀಟ್ ಮಾಡೋಕೆ ರೆಡಿಯಾಗಿ!

“ಸಖತ್ ಬಾಲು” ಮೀಟ್ ಮಾಡೋಕೆ ರೆಡಿಯಾಗಿ!

21 Oct 2021 | 2:01 PM

 Sharesee more..
ಇಂದು ವಿಚಾರಣೆ ಇಲ್ಲ; ಶಾರುಖ್ ಪುತ್ರನ ಹಣೆಬರಹ ಮಂಗಳವಾರ ನಿರ್ಧಾರ

ಇಂದು ವಿಚಾರಣೆ ಇಲ್ಲ; ಶಾರುಖ್ ಪುತ್ರನ ಹಣೆಬರಹ ಮಂಗಳವಾರ ನಿರ್ಧಾರ

21 Oct 2021 | 12:28 PM

ಬೇಲ್ ಗಾಗಿ ಅಲೆದಾಡುತ್ತಿರುವ ಬಿಟೌನ್ ಸ್ಟಾರ್ ಪುತ್ರನ ಜಾಮೀನು ಅರ್ಜಿ ವಿಚಾರಣೆ ಮಂಗಳವಾರ ಮುಂಬೈ ಹೈಕೋರ್ಟ್ ನಡೆಯಲಿದೆ. ಅರ್ಥರ್ ರೋಡ್ ಜೈಲು ಪಾಲಾಗಿರುವ ಆರ್ಯನ್ ಖಾನ್, ಕಳೆದ 18 ದಿನಗಳಿಂದ ಬಂಧನದಲ್ಲಿದ್ದಾನೆ.

 Sharesee more..