Friday, Oct 22 2021 | Time 21:16 Hrs(IST)
Entertainment Share

"ರಾಣ" ಟೀಸರ್ ರಿಲೀಸ್

ಬೆಂಗಳೂರು, ಸೆ. 15(ಯುಎನ್ಐ) ರಿಯಲ್ ಸ್ಟಾರ್ ಉಪೇಂದ್ರ ಅವರು ಶ್ರೇಯಸ್ಸ್ ಕೆ ಮಂಜು ಅಭಿನಯದ "ರಾಣ" ಚಿತ್ರದ ಟೀಸರ್ ಹಾಗೂ ಪೋಸ್ಟರ್ ಬಿಡುಗಡೆಗೊಳಿಸಿದ್ದಾರೆ.
ಶ್ರೇಯಸ್ಸ್ ಹೆಸರಿನಲ್ಲೇ ಶ್ರೇಯಸ್ಸು ಇದೆ. ಅವನ ಮಾತು ಕೇಳಿ ಸಂತೋಷವಾಯಿತು. ತಂದೆಯನ್ನು ಮೀರಿಸಿದ ಮಗ ಶ್ರೇಯಸ್ಸ್. ಅವನಿಗೆ ಹಾಗೂ ಚಿತ್ರತಂಡಕ್ಕೆ ಒಳ್ಳೆಯದಾಗಲಿ ಎಂದು ಉಪೇಂದ್ರ ಹರಸಿದರು. ಕಂಪ್ಲಿ ಶಾಸಕರಾದ ಜೆ. ಎನ್. ಗಣೇಶ್ ಅವರು ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು.
ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ ಈ ಚಿತ್ರದ ಟೀಸರ್ ಗೆ ಅಭಿಮಾನಿಗಳಿಂದ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಟೀಸರ್ ಬಿಡುಗಡೆ ಹಾಗೂ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು.
ಚಿತ್ರೀಕರಣ ಬಹುತೇಕ ಮುಗಿದಿದೆ. ಕೋವಿಡ್ ನಿಯಮಾವಳಿಗಳು ಜಾರಿಯಿರುವುದರಿಂದ ಕೆಲವು ಜಾಗಗಳಲ್ಲಿ ಚಿತ್ರೀಕರಣ ನಡೆಸಲು ಅನುಮತಿ ಸಿಕ್ಕಿದ್ದು ತಡವಾಯಿತು. ಇಲ್ಲದಿದ್ದರೆ, ನಮ್ಮ ಚಿತ್ರ ಈ ವೇಳೆಗೆ ಸಿದ್ದವಿರುತ್ತಿತ್ತು. ಎಂದು ನಿರ್ದೇಶಕ ನಂದಕಿಶೋರ್‌ ತಿಳಿಸಿದರು.

ನಾನು ಚಿಕ್ಕ ವಯಸ್ಸಿನಿಂದಲೂ ಉಪೇಂದ್ರ ಅವರ ಹುಚ್ಚು ಅಭಿಮಾನಿ. ನಾನು ಅವರಿಂದ ಕಲಿತಿರುವುದು ಸಾಕಷ್ಟು. ಚಿತ್ರರಂಗಕ್ಕೆ ಹೊಸದಾಗಿ ಬರುತ್ತಿರುವ ನೂತನ ಪ್ರತಿಭೆಗಳಿಗೆ ಅವರು ನೀಡುವ ಪ್ರೋತ್ಸಾಹಕ್ಕೆ ಚಿರ ಋಣಿ. ಶಿವರಾಜಕುಮಾರ್ ಅವರು ಸಹ ನನಗೆ ಈ ಚಿತ್ರದಲ್ಲಿ ಲಾಂಗ್ ಹಿಡಿಯುವುದನ್ನು ಹೇಳಿಕೊಟ್ಟಿದ್ದಾರೆ. ನಾನು ಏನಾದರೂ ಉತ್ತಮವಾಗಿ ನಟಿಸಿದ್ದೇನೆಂದರೆ ಅದಕ್ಕೆ ಕಾರಣ ನಿರ್ದೇಶಕ ನಂದಕಿಶೋರ್ ಹಾಗೂ ಛಾಯಾಗ್ರಹಕ ಛಾಯಾಗ್ರಹಕ ಶೇಖರ್ ಚಂದ್ರ. ಹಿರಿಯ ಕಲಾವಿದರಿಗೆ, ನಿರ್ಮಾಪಕರಿಗೆ, ನನ್ನ ಅಪ್ಪ ಕೆ.ಮಂಜು ಅವರಿಗೆ ಹಾಗೂ ಇಡೀ ತಂಡಕ್ಕೆ ವಿಶೇಷ ಧನ್ಯವಾದ ಎಂದರು ನಾಯಕ ಶ್ರೇಯಸ್ಸ್.

ನಿರ್ಮಾಪಕ ಗುಜ್ಜಲ್ ಪುರುಷೋತ್ತಮ್, ನಾನು ಚಿತ್ರ ನಿರ್ಮಾಣ ಮಾಡಲು ಪ್ರಮುಖ ಕಾರಣ ಕೆ.ಮಂಜು. ಅವರಿಗೆ ನಾನು ಆಭಾರಿ. ಚಿತ್ರ ಉತ್ತಮವಾಗಿ ಮೂಡಿ ಬರಲು ಇಡೀ ತಂಡ ಸಾಕಷ್ಟು ಶ್ರಮಿಸುತ್ತಿದೆ. ನಿಮ್ಮೆಲ್ಲರ ಹಾರೈಕೆ ನಮಗಿರಲಿ ಎಂದರು.
ಈ ಚಿತ್ರದಲ್ಲಿ ಶ್ರೇಯಸ್ಸ್ ಗೆ ನಾಯಕಿಯರಾಗಿ‌ ರೀಷ್ಮಾ ನಾಣಯ್ಯ ಹಾಗೂ ರಜನಿ ಭಾರದ್ವಾಜ್ ನಟಿಸುತ್ತಿದ್ದಾರೆ.

ಕೆ ಮಂಜು ಅರ್ಪಿಸುವ ಈ ಚಿತ್ರಕ್ಕೆ ಕೆ.ಎಂ.ಪ್ರಕಾಶ್ ಸಂಕಲನವಿದೆ. ವಿಶ್ವ ಕಲಾ ನಿರ್ದೇಶನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನವಿರುವ "ರಾಣ" ಚಿತ್ರಕ್ಕೆ ಪ್ರಶಾಂತ್ ರಾಜಪ್ಪ ಸಂಭಾಷಣೆ ಬರೆದಿದ್ದಾರೆ‌.

ಯುಎನ್ಐ ಎಸ್ಎ 1902
More News
“ಸಖತ್ ಬಾಲು” ಮೀಟ್ ಮಾಡೋಕೆ ರೆಡಿಯಾಗಿ!

“ಸಖತ್ ಬಾಲು” ಮೀಟ್ ಮಾಡೋಕೆ ರೆಡಿಯಾಗಿ!

21 Oct 2021 | 2:01 PM

 Sharesee more..
ಇಂದು ವಿಚಾರಣೆ ಇಲ್ಲ; ಶಾರುಖ್ ಪುತ್ರನ ಹಣೆಬರಹ ಮಂಗಳವಾರ ನಿರ್ಧಾರ

ಇಂದು ವಿಚಾರಣೆ ಇಲ್ಲ; ಶಾರುಖ್ ಪುತ್ರನ ಹಣೆಬರಹ ಮಂಗಳವಾರ ನಿರ್ಧಾರ

21 Oct 2021 | 12:28 PM

ಬೇಲ್ ಗಾಗಿ ಅಲೆದಾಡುತ್ತಿರುವ ಬಿಟೌನ್ ಸ್ಟಾರ್ ಪುತ್ರನ ಜಾಮೀನು ಅರ್ಜಿ ವಿಚಾರಣೆ ಮಂಗಳವಾರ ಮುಂಬೈ ಹೈಕೋರ್ಟ್ ನಡೆಯಲಿದೆ. ಅರ್ಥರ್ ರೋಡ್ ಜೈಲು ಪಾಲಾಗಿರುವ ಆರ್ಯನ್ ಖಾನ್, ಕಳೆದ 18 ದಿನಗಳಿಂದ ಬಂಧನದಲ್ಲಿದ್ದಾನೆ.

 Sharesee more..