Saturday, Dec 5 2020 | Time 23:34 Hrs(IST)
 • ಬರೇವಿ ಚಂಡಮಾರುತ ; ಏಳು ಮಂದಿ ಸಾವು
 • ರೈತರು ಮತ್ತು ಕೇಂದ್ರ ನಡುವಿನ 5ನೇ ಸುತ್ತಿನ ಮಾತುಕತೆ ಅಪೂರ್ಣ: ಡಿ 6 ರಂದು ಮತ್ತೆ ಚರ್ಚೆ
 • ಕೃಷಿ ಸಚಿವ ತೋಮರ್ ಮನವಿ ತಿರಸ್ಕರಿಸಿದ ರೈತ ಪ್ರತಿನಿಧಿಗಳು
 • ಸಕಾಲದಲ್ಲಿ ಸೇವೆ ಒದಗಿಸಲು ಎಸ್ ಆರ್ ವಿಶ್ವನಾಥ್ ಸೂಚನೆ
 • ಬಿಡಿಎ ಭ್ರಷ್ಟ ಅಧಿಕಾರಿಗಳಿಗೆ ತಕ್ಕ ಶಾಸ್ತಿ: ಎಸ್ ಆರ್ ವಿಶ್ವನಾಥ್
 • ಡಿಸೆಂಬರ್ 10 ಹೊಸ ಸಂಸತ್ ಭವನ ನಿರ್ಮಾಣಕ್ಕೆ ಶಿಲಾನ್ಯಾಸ
 • ಶಾಸಕ ಸಿದ್ದು ಸವದಿ ಸೇರಿದಂತೆ ದೌರ್ಜನ್ಯ ನಡೆಸಿದವರನ್ನು ಬಂಧಿಸಲು ಡಿ ಕೆ ಶಿವಕುಮಾರ್ ಆಗ್ರಹ
 • ಸುವರ್ಣ ಸೌಧ ಕಟ್ಟಿದ್ದು ಯಾಕೆ? ಬಿಜೆಪಿಗೆ ಜನರ ಬಗ್ಗೆ ಕಾಳಜಿ ಇಲ್ಲ: ಡಿ ಕೆ ಶಿವಕುಮಾರ್
 • ಆಯೋಧ್ಯೆಯಲ್ಲಿ ರಾಮಾಯಣ ಕ್ರೂಸ್ ಕೇಂದ್ರ ಪರಿಶೀಲನೆ
 • ಅಮೆರಿಕದಲ್ಲಿ ಒಂದೇ ದಿನ ಅತಿ ಹೆಚ್ಚು 2,27,000 ಕೋವಿಡ್‍-19 ಪ್ರಕರಣಗಳು ವರದಿ
 • ಹೊಸ ಕೃಷಿ ಸುಧಾರಣಾ ಕಾನೂನುಗಳ ಬಗ್ಗೆ ರಾಷ್ಟ್ರವ್ಯಾಪಿ ಚರ್ಚೆಗೆ ಚಂದ್ರಬಾಬು ನಾಯ್ಡು ಒತ್ತಾಯ
 • ಮೊದಲ ಹಂತದ ಗ್ರಾಮ ಪಂಚಾಯತ್ ಚುನಾವಣೆ; ಸೋಮವಾರದಿಂದ ನಾಮಪತ್ರ ಸಲ್ಲಿಕೆ ಆರಂಭ
 • ರಾಜ್ಯದ ಸಮಗ್ರ ಅಭಿವೃದ್ಧಿಗೆ ಬಿಜೆಪಿ ಸರಕಾರ ಬದ್ಧ; ಕಾರ್ಯಕಾರಿಣಿ ಸಭೆಯಲ್ಲಿ ಮುಖ್ಯಮಂತ್ರಿ ಭರವಸೆ
 • ಶೀಘ್ರವೇ ಗೋಹತ್ಯೆ ನಿಷೇಧ, ಲವ್ ಜಿಹಾದ್ ತಡೆಗೆ ಕಾಯ್ದೆ; ನಳಿನ್‌ ಕುಮಾರ್ ಕಟೀಲ್
 • ಕುಮಾರಸ್ವಾಮಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಮೊದಲೇ ಯೋಚಿಸಬೇಕಿತ್ತು; ಅಶ್ವತ್ಥ ನಾರಾಯಣ್
Karnataka Share

12 ವರ್ಷಗಳ ನಂತರ ಕೋಡಿ ಹರಿದ ಸ್ಯಾಂಕಿ ಕೆರೆಗೆ ಬಾಗೀನ ಅರ್ಪಿಸಿದ ಡಿಸಿಎಂ

ಬೆಂಗಳೂರು, ಅ.22 (ಯುಎನ್ಐ) ಹನ್ನೆರಡು ವರ್ಷಗಳ ನಂತರ ತುಂಬಿ ಕೋಡಿ ಹರಿದಿರುವ, ಮೈತುಂಬಾ ಮಂಜು ಹೊದ್ದುಕೊಂಡು ನೋಡುಗರ ಮನಸೂರೆಗೊಳ್ಳುತ್ತಿದ್ದ ಮಲ್ಲೇಶ್ವರದ ಸ್ಯಾಂಕಿ ಕೆರೆಗೆ ಮಲ್ಲೇಶ್ವರ ಕ್ಷೇತ್ರದ ಶಾಸಕರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಗುರುವಾರ ಬೆಳಗ್ಗೆ ಬಾಗೀನ ಅರ್ಪಿಸಿ ಪೂಜೆ ಸಲ್ಲಿಸಿದರು.
ಬೆಳಿಗ್ಗೆ 9.30 ಗಂಟೆ ಹೊತ್ತಿಗೆ ಸರಿಯಾಗಿ ಗಂಗೆಗೆ ಪೂಜೆ ಸಲ್ಲಿಸಿದ ಅವರು, ನಗರದಲ್ಲಿ ಉತ್ತಮ ಮಳೆಯಾಗಿ ಇಡೀ ನಗರ ಹಚ್ಚಹಸಿರಿನಿಂದ ಕಂಗೊಳಿಸಲಿ. ಇಡೀ ರಾಜ್ಯದಲ್ಲಿ ಸಮೃದ್ಧಿ ಮೂಡಲಿ. ಇಡೀ ಮಲ್ಲೇಶ್ವರ ಜನರ ಉಸಿರಾಗಿರುವ ಈ ಕೆರೆ ಸದಾ ಹಸಿರಾಗಿರಲಿ ಎಂದು ಪ್ರಾರ್ಥನೆ ಮಾಡಿದರು.
ಅಲ್ಲದೆ; ಚಿಕ್ಕಮಗಳೂರಿನ ಮುಳ್ಳಯ್ಯನ ಗಿರಿಯಂತೆ, ಚಿಕ್ಕಬಳ್ಳಾಪುರದ ನಂದಿ ಗಿರಿಧಾಮದಂತೆ ಹಾಗೂ ದಕ್ಷಿಣ ಭಾರತದ ಹೆಸರಾಂತ ಪ್ರವಾಸಿ ತಾಣ ಊಟಿಯಂತೆ ದಟ್ಟವಾದ ಮಂಜಿನಿಂದ ಕಂಗೊಳಿಸುತ್ತಿದ್ದ ಸ್ಯಾಂಕಿ ಕೆರೆಯನ್ನು ಕಂಡು ಉಪ ಮುಖ್ಯಮಂತ್ರಿಗಳು ಮಂತ್ರಮುಗ್ಧರಾದರು.
ಪೂಜೆ ನಂತರ ಮಾತನಾಡಿದ ಅವರು, ನಗರದಲ್ಲಿ ಉತ್ತಮ ಮಳೆಯಾಗಿದೆ. ಈ ಹಿನ್ನೆಲೆಯಲ್ಲಿ ಸ್ಯಾಂಕಿ ಕೆರೆ ಕೆರೆ ತುಂಬಿದೆ. ಇದರಿಂದ ಈ ಭಾಗದ ಜನರಿಗೆ, ನನಗೆ ತುಂಬಾ ಸಂತೋಷವಾಗಿದೆ. ಇಂಥ ಸಂದರ್ಭದಲ್ಲಿ ತಾಯಿ ಗಂಗೆಗೆ ಪೂಜೆ ಸಲ್ಲಿಸಿದ್ದು ಸಂತಸ ಉಂಟು ಮಾಡಿದೆ. ಭವಿಷ್ಯದಲ್ಲಿ ನಗರದಲ್ಲಿ ಸುರಿಯುವ ನೀರು ವ್ಯರ್ಥವಾಗದಂತೆ ಸಂಗ್ರಹ ಮಾಡಲು ಎಲ್ಲೆಡೆ ಇಂಗು ಗುಂಡಿಗಳನ್ನು ಮಾಡಲಾಗುವುದು. ಕೆರೆಗಳಲ್ಲಿ ನೀರು ಸಂಗ್ರಹಣ ಸಾಮರ್ಥ್ಯವನ್ನು ಹೆಚ್ಚಿಸಲಾಗುವುದು. ಪ್ರತಿ ವರ್ಷ ಈ ಕೆರೆಯೂ ಸೇರಿ ಎಲ್ಲ ಕೆರೆಗಳೂ ಕೋಡಿ ಹರಿಯಲಿ ಎಂದು ಆಶಿಸಿದರು.
ಕೆರೆ ತುಂಬಿದ್ದು ಹೇಗೆ? : ಅಶ್ವತ್ಥನಾರಾಯಣ ಅವರ ಪ್ರಯತ್ನದಿಂದಾಗಿ ಕೆರೆಯ ಜಲಾನಯನ ಪ್ರದೇಶವಾದ ಸದಾಶಿವನಗರ, ಅರಣ್ಯ ಭವನ ಸೇರಿದಂತೆ ವಿವಿಧ ಭಾಗಗಳಲ್ಲಿ ಸುರಿದ ಮಳೆನೀರು ವ್ಯರ್ಥವಾಗಿ ಹರಿದುಹೋಗುತ್ತಿತ್ತು. ಆ ಭಾಗಗಳಿಂದ ನೀರು ಹರಿದುಬರಲು ಇದ್ದ ಕಾಲುವೆಗಳು ಹೂಳು, ಕಸದಿಂದ ಮುಚ್ಚಿ ಹೋಗಿದ್ದವು. ಅವುಗಳನ್ನು ಸರಿ‌ಮಾಡಿ ಕೆರೆ ಕಡೆಗೆ ನೀರು ಹರಿಸುವ ಹಾಗೆ ಮಾಡಿದ್ದರಿಂದ ಕೆರೆ ತುಂಬಿದೆ.
ರಾಜ್ಯದಲ್ಲಿ ಸ್ಥಿರ ಸರಕಾರವಿದ್ದು ಅಭಿವೃದ್ಧಿ ಸರಿಯಾದ ದಿಕ್ಕಿನಲ್ಲಿಯೇ ನಡೆಯುತ್ತಿದೆ. ನಗರದಲ್ಲಿ ಮಳೆಯಿಂದ ಉಂಟಾಗಿರುವ ಬಿಕ್ಕಟ್ಟನ್ನು ಸಮರ್ಥವಾಗಿ ಎದುರಿಸಲಾಗುವುದು. ಜನರಿಗೆ ಯಾವುದೇ ತೊಂದರೆ ಆಗದಂತೆ ಸರಕಾರ ನೋಡಿಕೊಳ್ಳುತ್ತದೆ ಎಂದರು.
ಬಾಗಿನ ಅರ್ಪಿಸಿದ ನಂತರ ಕೆರೆ ಯಲ್ಲಿ ನಡೆಯುತ್ಯಿರುವ ಕಾಮಗಾರಿಯನ್ನು ಪರಿಶೀಲಿಸಿದರಲ್ಲದೆ, ಇಡೀ ಕೆರೆಯನ್ನು. ಅರ್ಧ ಸುತ್ತು ವಾಕ್ ಮಾಡಿದರು. ಈ ಸಂದರ್ಭದಲ್ಲಿ ಸ್ಯಾಂಕಿ ವಾಕರ್ಸ್ ಅಸೋಸಿಯೇಷನ್ ಅಧ್ಯಕ್ಷ ರಂಗನಾಥ, ಪಾಲಿಕೆ ಮುಖ್ಯ ಎಂಜಿನಿಯರ್ ಮೋಹನ್ ಕೃಷ್ಣ, ಬಿಬಿಎಂಪಿ ಜಂಟಿ ಆಯುಕ್ತ (ಪಶ್ಚಿಮ) ಚಿದಾನಂದ, ಬಿಬಿಎಂಪಿ ಮಾಜಿ ಸದಸ್ಯೆ ಸುಮಂಗಲ ಮುಂತಾದವರು ಇದ್ದು ಪೂಜೆಯಲ್ಲಿ ಭಾಗಿಯಾದರು.
ಯುಎನ್ಐ ಎಸ್ ಎಂಆರ್ ಎಎಚ್ 1220